ಶೂನ್ಯ ಫಲಿತಾಂಶದ ಪಿಯು ಕಾಲೇಜುಗಳಿಗೆ ನೋಟಿಸ್
Team Udayavani, Jul 16, 2017, 3:50 AM IST
ಬೆಂಗಳೂರು: ದ್ವಿತೀಯ ಪಿಯುಸಿಯಲ್ಲಿ ಶೂನ್ಯ ಫಲಿತಾಂಶ ದಾಖಲಿಸಿರುವ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ, ವಾರದೊಳಗೆ ಉತ್ತರ ನೀಡುವಂತೆ ಗಡುವು ನೀಡಿದೆ. ಜತೆಗೆ ಕಳಪೆ
ಸಾಧನೆ ಮಾಡಿದ ಕಾಲೇಜುಗಳ ಮಾನ್ಯತೆ ರದ್ದುಪಡಿಸುವ ಎಚ್ಚರಿಕೆ ನೀಡಿದೆ.
ರಾಜ್ಯದ 127 ಖಾಸಗಿ, 3 ಸರ್ಕಾರಿ ಹಾಗೂ ತಲಾ ಒಂದೊಂದು ಅನುದಾನಿತ ಹಾಗೂ ಸಂಯುಕ್ತ ಪದವಿ ಪೂರ್ವ ಕಾಲೇಜು ಸೇರಿದಂತೆ 132 ಪಿಯು ಕಾಲೇಜುಗಳು 2017ರ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಶೂನ್ಯ ಸಾಧನೆ ಮಾಡಿದೆ. ಬೆಂಗಳೂರಿನ ಒಂದು ಸಂಯುಕ್ತ ಪದವಿ ಪೂರ್ವ ಕಾಲೇಜು ಸೇರಿ 12, ಕಲಬುರಗಿಯ 25, ವಿಜಯಪುರದ
21, ಬೆಳಗಾವಿಯ 13, ಬೀದರ್‌ನ 10, ದಾವಣಗೆರೆಯ 6, ಬಳ್ಳಾರಿ ಹಾಗೂ ಬಾಗಲಕೋಟೆಯಲ್ಲಿ ತಲಾ 5, ಹಾವೇರಿ,
ಧಾರವಾಡ, ಮೈಸೂರು, ರಾಯಚೂರಿನಲ್ಲಿ ತಲಾ 4, ಗದಗ ಹಾಗೂ ತುಮಕೂರಿನಲ್ಲಿ ತಲಾ 3, ಚಿತ್ರದುರ್ಗ, ಕೊಪ್ಪಳ ಹಾಗೂ ಯಾದಗಿರಿಯಲ್ಲಿ ತಲಾ 2, ಚಿಕ್ಕಬಳ್ಳಾಪುರ, ಮಂಡ್ಯ, ರಾಮನಗರ, ಮಂಗಳೂರು, ಶಿವಮೊಗ್ಗ, ಕೊಡಗು ಹಾಗೂ ಕೋಲಾರದಲ್ಲಿ ತಲಾ 1 ಪಿಯು ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿದೆ.
ಖಾಸಗಿ ವಿದ್ಯಾರ್ಥಿಗಳಿಗೆ ಕುಮ್ಮಕ್ಕು: ಕಲಬುರಗಿಯಲ್ಲಿ 25 ಹಾಗೂ ವಿಜಯಪುರ ಜಿಲ್ಲೆಯಲ್ಲಿ 21 ಕಾಲೇಜುಗಳು ಶೂನ್ಯ ಫಲಿತಾಂಶ ಪಡೆದಿವೆ. ಖಾಸಗಿ ಕಾಲೇಜಿನ ಹೆಸರಿನಲ್ಲಿ ಖಾಸಗಿ ವಿದ್ಯಾರ್ಥಿಗಳನ್ನು ದಾಖಲಿಸಿಕೊಂಡು, ದ್ವಿತೀಯ
ಪಿಯುಸಿ ಪರೀಕ್ಷೆಗೆ ಅವಕಾಶ ನೀಡುತ್ತಿರುವುದು ಶೂನ್ಯ ಫಲಿತಾಂಶಕ್ಕೆ ಕಾರಣ. ಪಿಯುಸಿ ಪಾಸು ಮಾಡಲು ವಿದ್ಯಾರ್ಥಿಗಳಿಗೆ ತರಬೇತಿ ನೀಡುವುದಿಲ್ಲ ಮತ್ತು ಕಾಲೇಜಿಗೆ ಕಡ್ಡಾಯವಾಗಿ ಬರಬೇಕು ಎಂಬ ನಿಯಮವೂ ಇಲ್ಲ.
ಆದರೆ, ಇಲಾಖೆಯ ದಾಖಲೆಗಾಗಿ ವಿದ್ಯಾರ್ಥಿ ಗಳ ಶೇ.75 ಹಾಜರಾತಿ ತೋರಿಸಲಾಗುತ್ತದೆ.
ಅರ್ಹ ಉಪನ್ಯಾಸಕರು, ಸಮರ್ಥ ಆಡಳಿತ ಮಂಡಳಿ ಇರುವುದಿಲ್ಲ. ಹಣ ವಸೂಲಿ ಮಾಡುವುದಕ್ಕಾಗಿಯೇ ಇಂಥ ಕಾಲೇಜುಗಳು ತಲೆ ಎತ್ತಿರುತ್ತವೆ. ಪಾಲಕರು ಅಥವಾ ಪೋಷಕರು ಇಂತಹ ಕಾಲೇಜುಗಳಿಗೆ ಮಕ್ಕಳನ್ನು ಸೇರಿಸುವಾಗ ಎಚ್ಚರ ವಹಿಸಬೇಕು ಎಂಬ ಕಾರಣಕ್ಕಾಗಿ ಶೂನ್ಯ ಫಲಿತಾಂಶದ ಕಾಲೇಜುಗಳ ಹೆಸರನ್ನು ಬಹಿರಂಗಪಡಿಸಲಾಗಿದೆ ಎಂದು ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು “ಉದಯವಾಣಿ’ಗೆ ಮಾಹಿತಿ ನೀಡಿದರು.
ಕಾರಣ ಕೇಳಿ ನೋಟಿಸ್: ಶೂನ್ಯ ಫಲಿತಾಂಶ ಬಂದಿರುವ ಎಲ್ಲಾ ಕಾಲೇಜುಗಳಿಗೂ ಕಾರಣ ಕೇಳಿ ಪಿಯು ಇಲಾಖೆಯಿಂದ ನೋಟಿಸ್ ಜಾರಿ ಮಾಡಿದ್ದು, ಉತ್ತರ ನೀಡಲು ಒಂದು ವಾರ ಸಮಯ ನೀಡಲಾಗಿದೆ. ಉತ್ತರ ನೀಡದ ಕಾಲೇಜುಗಳ ಶೈಕ್ಷಣಿಕ ನವೀಕರಣ ರದ್ದು ಮಾಡಲಾಗುತ್ತದೆ. ಈ ಶೈಕ್ಷಣಕ ವರ್ಷದಿಂದ ವಿದ್ಯಾರ್ಥಿಗಳನ್ನು ಸೇರಿಸಿಕೊಳ್ಳದಂತೆ
ಎಚ್ಚರಿಕೆಯನ್ನು ನೀಡಲಾಗುತ್ತದೆ. ಶಿಕ್ಷಣ ಸಂಸ್ಥೆಯ ಹೆಸರಿನಲ್ಲಿ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಆಡುವ ಚೆಲ್ಲಾಟಕ್ಕೆ ಸಂಪೂರ್ಣವಾಗಿ ತೆರೆ ಬೀಳಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Cyber Fraud Case: ದಾಳಿ ನಡೆಸಲು ಹೋದ ಇಡಿ ಅಧಿಕಾರಿಗಳ ಮೇಲೆಯೇ ತಂಡದಿಂದ ಹಲ್ಲೆ
Rashmika Mandanna; ಪುಷ್ಟ-3 ಸುಳಿವು ನೀಡಿದ ನಟಿ ರಶ್ಮಿಕಾ ಮಂದಣ್ಣ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Pakistan: ಇಮ್ರಾನ್ ಬಿಡುಗಡೆಗೆ ಬೆಂಬಲಿಗರ ಪ್ರತಿಭಟನೆ: ಹಿಂಸಾಚಾರ, ಸಾವಿರಾರು ಜನರ ಬಂಧನ
Madikeri: ಲಾರಿ ಡಿಕ್ಕಿಯಾಗಿ ರಸ್ತೆ ಬದಿ ನಡೆದುಕೊಂಡು ಹೋಗುತ್ತಿದ್ದ ಬಾಲಕಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.