ಭುಗಿಲೆದ್ದ “ಕೈ’ ಅಸಮಾಧಾನ


Team Udayavani, Jul 16, 2017, 3:20 AM IST

asamadana.jpg

ಬೆಂಗಳೂರು: ಕೆಪಿಸಿಸಿ ಪದಾಧಿಕಾರಿಗಳ ಪಟ್ಟಿ ಬಿಡುಗಡೆಯ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಅಸಮಾಧಾನದ ಹೊಗೆಯಾಡತೊಡಗಿದೆ. ಇದು ಬೂದಿ ಮುಚ್ಚಿದ ಕೆಂಡದಂತಿದೆ. ಕೆಪಿಸಿಸಿ ಅಧ್ಯಕ್ಷ ಪರ ಮೇಶ್ವರ್‌ ಮತ್ತು ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ಕೆ.ಸಿ. ವೇಣುಗೋಪಾಲ ವಿರುದ್ಧ  ಹಿರಿಯ ನಾಯಕರೇ ನೇರ ಅಸಮಾಧಾನ ಹೊರ ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಪದಾಧಿಕಾರಿ ಪಟ್ಟಿ ಬಿಡುಗಡೆಗೂ ಮೊದಲು ಎಲ್ಲ ನಾಯಕರಿಂದ ಪಟ್ಟಿ ಪಡೆದುಕೊಂಡಿ ರುವ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್‌ ಮತ್ತು ಕೆ.ಸಿ. ವೇಣುಗೋಪಾಲ ಯಾರ ಜತೆಗೂ ಚರ್ಚಿಸದೆ ತಮಗಿಷ್ಟ ಬಂದ ವರಿಗೆ ಅವಕಾಶ ಕಲ್ಪಿಸಿ
ದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಎಸ್‌.ಆರ್‌. ಪಾಟೀಲ್‌, ಇಂಧನ ಸಚಿವ ಹಾಗೂ ಚುನಾ ವಣ ಪ್ರಚಾರ ಸಮಿತಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅಸಮಾಧಾನಗೊಂಡಿ ದ್ದಾರೆ ಎಂದು ಹೇಳಲಾಗಿದೆ.

ಈ ಬಗ್ಗೆ ಕೆ.ಸಿ. ವೇಣುಗೋಪಾಲ ಅವರಲ್ಲಿ ದೂರವಾಣಿ ಮೂಲಕ ಇಬ್ಬರೂ ನಾಯಕರು ಅಸಮಾಧಾನ ತೋಡಿಕೊಂಡಿದ್ದು, ಕಾಂಗ್ರೆಸ್‌ನಲ್ಲಿ ಪರಮೇಶ್ವರ್‌ ಒಬ್ಬರೇ ನಾಯಕರಲ್ಲ. ಪಕ್ಷವನ್ನು ಅಧಿಕಾರಕ್ಕೆ ತರಬೇಕೆಂದರೆ, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳ ಬೇಕು. ಯಾರೊಂದಿಗೂ ಚರ್ಚಿಸದೆ ಹೇಗೆ ಪಟ್ಟಿ ಬಿಡುಗಡೆ ಮಾಡಿದ್ದೀರಿ ಎಂದು
ತೀವ್ರ ಅತೃಪ್ತಿ ವ್ಯಕ್ತಪಡಿಸಿ ದ್ದಾರೆ ಎಂದು ತಿಳಿದು ಬಂದಿದೆ. ಅಲ್ಲದೆ ಈ ಕುರಿತು ರಾಹುಲ್‌ ಗಾಂಧಿ ಗಮನಕ್ಕೂ ತರಲಾಗು ವುದು ಎಂದು ವೇಣು ಗೋಪಾಲ ಅವರಲ್ಲಿ ಹೇಳಿದ್ದಾರೆನ್ನಲಾಗಿದೆ.

ಉತ್ತರ ಕರ್ನಾಟಕ ಭಾಗದಿಂದ ಎಸ್‌.ಆರ್‌. ಪಾಟೀಲ್‌ 10 ಮಂದಿಯ ಹೆಸರು ಶಿಫಾರಸು ಮಾಡಿ ಪಟ್ಟಿ ಕೊಟ್ಟಿದ್ದರೆ, ಅವರಲ್ಲಿ ಕೇವಲ ಇಬ್ಬರಿಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಡಿ.ಕೆ. ಶಿವಕುಮಾರ್‌ ತನ್ನ ಬೆಂಬಲಿಗರ 50 ಮಂದಿಯ ಹೆಸರು ಶಿಫಾರಸು ಮಾಡಿದ್ದರೆ, ಅವರಲ್ಲಿ ಕೇವಲ ಐದು ಮಂದಿಗೆ ಮಾತ್ರ ಸ್ಥಾನ ನೀಡಲಾಗಿದೆ. ಇನ್ನು ಕೆಪಿಸಿಸಿ ಇನ್ನೋರ್ವ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ನೀಡಿರುವ 35 ಜನರ ಪಟ್ಟಿಯಲ್ಲಿ ಐವರನ್ನು ಮಾತ್ರ ಆಯ್ಕೆ ಮಾಡಲಾಗಿದೆ.

ಹೀಗಾಗಿ ಪಕ್ಷದಲ್ಲಿ ತಮಗೆ ಹುದ್ದೆ ಇದ್ದರೂ ತಮ್ಮ ಮಾತಿಗೆ ಬೆಲೆ ಇಲ್ಲದಂತೆ ನಡೆಸಿಕೊಳ್ಳಲಾಗುತ್ತಿದೆ ಎಂದು ಅಸಮಾಧಾನ ಹೊರ ಹಾಕಿದ್ದಾರೆ ಎನ್ನಲಾಗಿದೆ.

ಸಂಸದ ಮುನಿಯಪ್ಪ ದೂರು: ಸಂಸದ ಕೆ.ಎಚ್‌. ಮುನಿಯಪ್ಪ ಕೂಡ ಈ ಬಗ್ಗೆ ಎಐಸಿಸಿ ಉಪಾಧ್ಯಕ್ಷ ರಾಹುಲ್‌ ಗಾಂಧಿಗೆ ದೂರು ನೀಡಿದ್ದಾರೆ ಎಂದು ಹೇಳಲಾಗಿದೆ. ಆಯ್ಕೆಯಾಗಿರುವ 171 ಜನರಲ್ಲಿ 100 ಜನರು ಬೆಂಗಳೂರಿ ನವರೇ ತುಂಬಿಕೊಂಡಿದ್ದಾರೆ. ಇದರಿಂದ ಪಕ್ಷ ಕಟ್ಟಲು ಹೇಗೆ ಸಾಧ್ಯವಾಗುತ್ತದೆ. ದಲಿತರಲ್ಲಿ ಬಲಗೈ ಪಂಗಡಕ್ಕೆ 12 ಜನರಿಗೆ ಸ್ಥಾನ ನೀಡಲಾಗಿದ್ದು, ಎಡಗೈ ಪಂಗಡಕ್ಕೆ ಕೇವಲ 5 ಸ್ಥಾನ ನೀಡಲಾಗಿದೆ. ಈ ರೀತಿಯ ತಾರತಮ್ಯ ಮಾಡಿದರೆ, ಸಮುದಾಯದಲ್ಲಿ ಒಡಕುಂಟಾಗುತ್ತದೆ. ಶೀಘ್ರವೇ ಈ ತಾರತಮ್ಯ ಪರಿಹರಿಸುವಂತೆ ರಾಹುಲ್‌ ಗಾಂಧಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ.

ಶಾಸಕರು ಕೆಂಡಾ ಮಂಡಲ: ಪದಾಧಿಕಾರಿಗಳ ಪಟ್ಟಿಯಿಂದ ತಮ್ಮನ್ನು ಕೈ ಬಿಟ್ಟಿರುವ ಬಗ್ಗೆ ಅನೇಕ ಶಾಸಕರು ಕೆಂಡಾ ಮಂಡಲರಾಗಿದ್ದಾರೆ ಎನ್ನಲಾಗಿದೆ. ಶಾಸಕರಿಲ್ಲದೇ ಪಕ್ಷವನ್ನು ಹೇಗೆ ಕಟ್ಟುತ್ತಾರೆ ಎಂದು ಅನೇಕ ಶಾಸಕರು ಅಸಮಾಧಾನ ಹೊರಹಾಕಿದ್ದಾರೆ ಎಂದು ಹೇಳಲಾಗುತ್ತಿದೆ. ವಿಧಾನ ಪರಿಷತ್‌ ಸದಸ್ಯರಾಗಿರುವ ಎನ್‌.ಎಸ್‌. ಭೋಸರಾಜ್‌, ಮುಖ್ಯಮಂತ್ರಿ ಸಂಸದೀಯ ಕಾರ್ಯದರ್ಶಿ ಹಾಗೂ ವಿಧಾನ ಪರಿಷತ್‌ ಸದಸ್ಯರಾಗಿ ರುವ ಗೋವಿಂದರಾಜ್‌, ಕೆ.ಸಿ. ಕೊಂಡಯ್ಯ ಅವರನ್ನು ಉಳಿಸಿಕೊಂಡು ಶಾಸಕರನ್ನು ದೂರವಿರಿಸಿದ ಬಗ್ಗೆ ಶಾಸಕರಾದ ಎಸ್‌.ಟಿ.ಸೋಮಶೇಖರ್‌, ಬೈರತಿ ಬಸವ ರಾಜ್‌, ಮುನಿರತ್ನ, ಎಚ್‌.ಎಂ. ರೇವಣ್ಣ, ಮಾಲಿಕಯ್ಯ ಗುತ್ತೇದಾರ್‌ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

ಮತ್ತೂಂದು ಪಟ್ಟಿ ?: ಪಕ್ಷದಲ್ಲಿ ಅಸಮಾಧಾನ ಭುಗಿಲೇಳುವ ಲಕ್ಷಣ ಕಂಡು ಬರುತ್ತಿರುವುದರಿಂದ ಮುನಿಸಿಕೊಂಡ ನಾಯಕರನ್ನು ಸಮಾಧಾನ ಪಡಿಸಲು ಮತ್ತೂಂದು ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಸುಮಾರು 25 ರಿಂದ 30 ಜನರ ಹೊಸ ಪಟ್ಟಿಯನ್ನು ಮಾಡಿ, ಎಲ್ಲ ನಾಯಕರನ್ನು ಸಮಾಧಾನಗೊಳಿಸುವ ಪ್ರಯತ್ನಕ್ಕೆ ಪರಮೇಶ್ವರ ಹಾಗೂ ಕೆ.ಸಿ. ವೇಣುಗೋಪಾಲ್‌ ಮುಂದಾಗುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

vidan-soudha-kannada

Golden Jubilee: ಕನ್ನಡವೇ ಅಧಿಕಾರಿಗಳ‌ ಹೃದಯದ ಭಾಷೆ ಆಗಲಿ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

KSRTC

Transport: ಕೆಎಸ್ಸಾರ್ಟಿಸಿ ದಾಖಲೆ: ಒಂದೇ ದಿನ 1.23 ಕೋಟಿ ಮಂದಿ ಪ್ರಯಾಣ

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

Congress: ಜಮೀರ್‌ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ‌ ದೂರು

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Maha-Election

Assembly Election: ಮಹಾರಾಷ್ಟ್ರ ಗೆಲ್ಲಲು 10 ಗ್ಯಾರಂಟಿಗಳ ಕೊಟ್ಟ ʼಮಹಾಯುತಿʼ!

HDD–By-election

By Election: ಮುಖ್ಯಮಂತ್ರಿ ಗರ್ವದ ಸೊಕ್ಕು ಮುರಿಯಬೇಕು: ಎಚ್‌.ಡಿ.ದೇವೇಗೌಡ ಗುಡುಗು

ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

Super App: ರೈಲು ಬುಕಿಂಗ್‌, ಟ್ರ್ಯಾಕ್‌ಗೆ ‘’ಸೂಪರ್‌ಆ್ಯಪ್‌’: ಮುಂದಿನ ತಿಂಗಳು ಬಿಡುಗಡೆ

High-Court

Kambala: ಪೆಟಾ ಪಿಐಎಲ್‌; ವಿಚಾರಣೆ ನ.12ಕ್ಕೆ ಮುಂದೂಡಿದ ಹೈಕೋರ್ಟ್‌

CM-Shiigavi-2

MUDA Case: ಕೇವಲ 14 ಸೈಟ್‌ಗಾಗಿ ನಾನು ರಾಜಕಾರಣ ಮಾಡಬೇಕಾ?: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.