ವಾಮಾಚಾರದ ಸುತ್ತ ಬಸ್ರೂರು ಕಟಕ

Team Udayavani, Jul 16, 2017, 10:30 AM IST

Kataka.jpg

ಸಂಗೀತ ನಿರ್ದೇಶಕ ರವಿ ಬಸ್ರೂರುಗೆ ನಿರ್ದೇಶನದ ಕಡೆಗೆ ಆಸಕ್ತಿ ಇರೋದು, ಈಗಾಗಲೇ “ಗರ್‌ಗರ್‌ ಮಂಡ್ಲ’, “ಬಿಲಿಂಡರ್‌’ ಎಂಬ ಕುಂದಾಪುರ ಕನ್ನಡವನ್ನಿಟ್ಟುಕೊಂಡು ಸಿನಿಮಾ ನಿರ್ದೇಶನ ಮಾಡಿರೋದು ನಿಮಗೆ ಗೊತ್ತೇ ಇದೆ. ಇಂತಿಪ್ಪ ರವಿ ಬಸ್ರೂರು ಸದ್ದಿಲ್ಲದೇ ಒಂದು ಸಿನಿಮಾ ಮಾಡಿ ಮುಗಿಸಿದ್ದಾರೆ. ಅದು “ಕಟಕ’.ಹಾಗಂತ ಇದು ಕುಂದಗನ್ನಡ ಸಿನಿಮಾವಲ್ಲ. ಇದೊಂದು ಹಾರರ್‌ ಜಾನರ್‌ಗೆ ಸೇರುವ ಸಿನಿಮಾ. ಹಾಗಂತ ಇದನ್ನು ಸಂಪೂರ್ಣ ಹಾರರ್‌ ಸಿನಿಮಾ ಎಂದೂ ಹೇಳುವಂತಿಲ್ಲ. 

ವಾಮಾಚಾರ ಸುತ್ತ ನಡೆಯುವ ಸಿನಿಮಾ “ಕಟಕ’. ಇದು ನೈಜ ಘಟನೆಯನ್ನಾಧರಿಸಿದ ಸಿನಿಮಾ. ಐದು ವರ್ಷದ ಬಾಲಕಿಯೊಬ್ಬಳ ಮೇಲೆ ವಾಮಾಚಾರ ಪ್ರಯೋಗವಾದಾಗ ಏನೆಲ್ಲಾ ಆಗುತ್ತದೆ ಎಂಬ ಅಂಶವನ್ನಿಟ್ಟುಕೊಂಡು ಈ ಸಿನಿಮಾ ಮಾಡಲಾಗಿದೆ.  ಕರಾವಳಿಯಲ್ಲಿ ಸುಮಾರು 14 ವರ್ಷಗಳ ಹಿಂದೆ ನಡೆದ ಘಟನೆಗೆ ಸಿನಿಮೀಯ ಸ್ಪರ್ಶ ಕೊಟ್ಟು “ಕಟಕ’ ಮಾಡಿದ್ದಾರೆ ರವಿ ಬಸ್ರೂರು. ಚಿತ್ರದಲ್ಲಿ ವಾಮಚಾರ ಹಾಗೂ ಈ ಪ್ರಪಂಚ ಎಷ್ಟೊಂದು ಘೋರವಾಗಿದೆ ಎಂಬ ಅಂಶವನ್ನು ಹೇಳಲು ಪ್ರಯತ್ನಿಸಿದ್ದಾರಂತೆ.

ಚಿತ್ರದ ಟೈಟಲ್‌ ಕಥೆಗೆ ದೊಡ್ಡ ಪ್ಲಸ್‌ ಅಂತೆ. ಈ ಚಿತ್ರದ ಮತ್ತೂಂದು ಹೈಲೈಟ್‌ ಅಂದರೆ ಸೌಂಡ್‌. ಚಿತ್ರದಲ್ಲಿ ಸೌಂಡಿಂಗ್‌ ತುಂಬಾ ವಿಭಿನ್ನವಾಗಿರಬೇಕು, ಕಥೆಯನ್ನು ಮತ್ತೂಂದು ಎತ್ತರಕ್ಕೆ ಕೊಂಡೊಯ್ಯಬೇಕೆಂಬ ಉದ್ದೇಶದಿಂದ ಹಾಲಿವುಡ್‌ ಚಿತ್ರಗಳ ಸೌಂಡಿಂಗ್‌ನಲ್ಲಿ ಕೆಲಸ ಮಾಡುವ ಸುಮಾರು 14 ಕಂಪೆನಿಗಳು ಈ ಚಿತ್ರಕ್ಕೆ ಸೌಂಡ್‌ ಎಫೆಕ್ಟ್ ನೀಡಿವೆ. ಈ ಹಿಂದೆ “ಗುಡ್ಡದ ಭೂತ’ ಧಾರಾವಾಹಿಯನ್ನು ಚಿತ್ರೀಕರಿಸಿದ ಮನೆಯಲ್ಲೇ “ಕಟಕ’ ಚಿತ್ರೀಕರಣ ಕೂಡಾ ಮಾಡಿರೋದು ವಿಶೇಷ. 

ಚಿತ್ರದಲ್ಲಿ ಒಂದು ಸಿನಿಮಾದಲ್ಲಿ ಬಹುತೇಕ ಹೊಸಬರೇ ನಟಿಸಿದ್ದಾರೆ. ಶ್ಲಾಘ ಸಾಲಿಗ್ರಾಮ ಎಂಬ ಬಾಲಕಿ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ. ಈಗಾಗಲೇ ಚಿತ್ರೀಕರಣ ಮುಗಿದಿದ್ದು, ಮುಂದಿನ ತಿಂಗಳು ಬಿಡುಗಡೆಯಾಗುವ ಸಾಧ್ಯತೆ ಇದೆ. ಈ ಚಿತ್ರವನ್ನು ಎನ್‌.ಎಸ್‌.ರಾಜ್‌ಕುಮಾರ್‌ ನಿರ್ಮಿಸಿದ್ದಾರೆ. ಈ ಹಿಂದೆ “ಜಟ್ಟ’, “ಮೈತ್ರಿ’ ಸಿನಿಮಾಗಳನ್ನು ನಿರ್ಮಿಸಿರುವ ಎನ್‌.ಎಸ್‌.ರಾಜ್‌ಕುಮಾರ್‌ ಅವರು ಈಗ “ಕಟಕ’ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರಕ್ಕೆ ಸಚಿನ್‌ ಬಸ್ರೂರು ಛಾಯಾಗ್ರಹಣವಿದೆ. ಇಡೀ ಸಿನಿಮಾ ಕರಾವಳಿಯಲ್ಲಿ ಚಿತ್ರೀಕರಣವಾಗಿದೆ. 

ಟಾಪ್ ನ್ಯೂಸ್

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Maryade Prashne Review

Maryade Prashne Review: ಮಧ್ಯಮ ವರ್ಗದ ಮರ್ಯಾದೆ ಹೋರಾಟ

4-Laparoscopic

Laparoscopic surgery: ಸಂತಾನೋತ್ಪತ್ತಿ ಹೆಚ್ಚಿಸುವ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ

3-darshan

Renukaswamy Case: ಹತ್ಯೆ ಸ್ಥಳದಲ್ಲಿ ನಟ ದರ್ಶನ್‌: ಫೋಟೋ ಸಾಕ್ಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

7-bus

Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

5–COPD

COPD: ಕ್ರೋನಿಕ್‌ ಒಬ್‌ಸ್ಟ್ರಕ್ಟಿವ್‌ ಪಲ್ಮನರಿ ಡಿಸೀಸ್‌ (ಸಿಒಪಿಡಿ)

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.