ಕಲಬುರಗಿ : ಇಬ್ಬರು ಮಕ್ಕಳೊಂದಿಗೆ ನೇಣಿಗೆ ಶರಣಾದ ದಂಪತಿ
Team Udayavani, Jul 16, 2017, 10:41 AM IST
ಕಲಬುರಗಿ : ಇಬ್ಬರು ಮಕ್ಕಳೊಂದಿಗೆ ದಂಪತಿ ನೇಣಿಗೆ ಶರಣಾದ ದಾರುಣ ಘಟನೆ ಇಲ್ಲಿನ ಮಾರ್ಕೆಟ್ ರಸ್ತೆಯ ಸರಸ್ವತಿ ಗೋದಾಮಿನ ಬಾಡಿಗೆ ಮನೆಯಲ್ಲಿ ಶನಿವಾರ ರಾತ್ರಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡವರು ಶ್ರೀಕಾಂತ್ ಕಮಲಾಪುರಕರ(57),ತನುಶ್ರೀ(50)ಪುತ್ರ ಚೇತನ್ (20)ಮತ್ತು ಪುತ್ರಿ ಸಾಕ್ಷಿ(16).ಡೆತ್ನೋಟ್ ಬರೆದಿಟ್ಟಿದ್ದು ನಮ್ಮ ಸಾವಿಗೆ ನಾವೇ ಕಾರಣ.ನಮ್ಮ ಮೃತ ದೇಹಗಳನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಿ ಎಂದು ಬರೆದಿದ್ದಾರೆ.
ಸ್ಥಳಕ್ಕೆ ಎಸ್ಪಿ ಶಶಿಕುಮಾರ,ಹೆಚ್ಚುವರಿ ಎಸ್ಪಿ ಜಯಪ್ರಕಾಶ, ಡಿವೈಎಸ್ಪಿ ಎಸ್.ಜಾಹ್ನವಿ, ಪಿಎಸ್ಐ ಯಾಳಗಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬ್ರಹ್ಮಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಮಲಾಪುರಕರ ವೃತ್ತಿಯಲ್ಲಿ ಅಂತರ್ಜಲ ಶೋಧಕರಾಗಿದ್ದರು ಎನ್ನಲಾಗಿದೆ. ಬೆಳಗ್ಗೆಯಿಂದ ಮನೆ
ಬಾಗಿಲು ತೆರೆದಿರಲಿಲ್ಲ. ಅನುಮಾನಗೊಂಡ ಅಕ್ಕಪಕ್ಕದವರು ಮನೆ ಬಾಗಿಲು ಬಡಿದರೂ ಪ್ರತಿಕ್ರಿಯೆ ಬರಲಿಲ್ಲ. ಕಿಟಕಿಯಲ್ಲಿ ನೋಡಿದಾಗ ನಾಲ್ವರು ನೇಣು ಬಿಗಿದುಕೊಂಡಿರುವ ದೃಶ್ಯ ಕಾಣಿಸಿದೆ. ತಕ್ಷಣವೇ
ಪೊಲೀಸರಿಗೆ ವಿಷಯ ತಿಳಿಸಿದ್ದಾರೆ.
ಪತ್ನಿ ಖಾಸಗಿ ಸಂಸ್ಥೆಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಮಕ್ಕಳು ಕಾಲೇಜು ವಿದ್ಯಾರ್ಥಿಗಳಾಗಿದ್ದರು. ಶೇರು ಹೂಡಿಕೆಯಲ್ಲಿ ವ್ಯಾಪಕ ನಷ್ಟ ಇಲ್ಲವೇ ಕೌಟುಂಬಿಕ ಕಲಹ ಹಿನ್ನಲೆಯಲ್ಲಿ ಸಾವಿಗೆ ಶರಣಾಗಿದ್ದಾರೆ ಎಂದು ಪೊಲೀಸರಿಗೆ ಪ್ರಾಥಮಿಕ ತನಿಖೆಯ ವೇಳೆ ತಿಳಿದು ಬಂದಿದೆ.
ಇದು ವಾರದವೊಳಗೆ ರಾಜ್ಯದಲ್ಲಿ ನಡೆದ ಕುಟುಂಬವೊಂದರ ಇನ್ನೊಂದು ಸಾಮೂಹಿಕ ಆತ್ಮಹತ್ಯೆಯಾಗಿದೆ. ಉಡುಪಿಯ ಪಡುಬೆಳ್ಳೆಯಲ್ಲಿ ಒಂದೇ ಕುಟುಂಬದ ನಾಲ್ವರು ಸಯನೈಡ್ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?
Electricity Price: ರಾಜ್ಯದ ಜನತೆಗೆ ಈ ಬಾರಿಯೂ ವಿದ್ಯುತ್ ದರ ಏರಿಕೆ ಶಾಕ್?
Waqf Property: ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ರಾಜ್ಯ ಭೇಟಿ: ಕಾಂಗ್ರೆಸ್ ಕೆಂಡ
Injustice: ಮೊಟ್ಟೆ ಕೇಳಿದ ಶಾಲಾ ವಿದ್ಯಾರ್ಥಿಗಳಿಗೆ ಸಿಕ್ಕಿದ್ದು ಚಿಕ್ಕ ಚಿಕ್ಕಿ!
Incentive: ಎಸ್ಸಿ, ಎಸ್ಟಿ ವಿದ್ಯಾರ್ಥಿಗಳ ಪ್ರೋತ್ಸಾಹಧನ ದ್ವಿಗುಣ: ಸಚಿವ ಮಹದೇವಪ್ಪ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.