ಕೃಷಿ ಸಾಲ ಮನ್ನಾಕ್ಕಾಗಿ ಬಿಎಸ್ವೈ ಮನೆಗೆ ಮುತ್ತಿಗೆ
Team Udayavani, Jul 16, 2017, 11:23 AM IST
ಬೆಂಗಳೂರು: ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿನ ಕೃಷಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ನಿವಾಸದ ಎದುರು ಶನಿವಾರ ಪ್ರತಿಭಟನೆ ನಡೆಸಿದರು.
ಡಾಲರ್ ಕಾಲೋನಿಯಲ್ಲಿರುವ ಯಡಿಯೂರಪ್ಪ ಅವರ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ಪೊಲಿಸರು ತಡೆದರು.
ನಂತರ ಮಾತನಾಡಿದ ಯುವ ಕಾಂಗ್ರೆಸ್ ಉಪಾಧ್ಯಕ್ಷ ಕೆಂಪರಾಜು, “ರಾಜ್ಯದಲ್ಲಿ ತೀವ್ರ ಬರದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸಹಕಾರಿ ಬ್ಯಾಂಕ್ಗಳಲ್ಲಿನ ಕೃಷಿ ಸಾಲ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ಗಳಲ್ಲಿ ರೈತರು ಮಾಡಿರುವ ಸಾಲವನ್ನು ಕೇಂದ್ರದ ಬಿಜೆಪಿ ಸರ್ಕಾರ ಮನ್ನಾ ಮಾಡಬೇಕು. ರಾಜ್ಯದಿಂದ 17 ಜನ ಬಿಜೆಪಿ ಸಂಸದರು ಆಯ್ಕೆಯಾಗಿದ್ದಾರೆ. ಅವರು ರಾಜ್ಯದ ರೈತರ ಋಣ ತೀರಿಸಬೇಕು.
ಇದಕ್ಕಾಗಿ ಪ್ರಧಾನಿ ಮೇಲೆ ಒತ್ತಡ ಹೇರುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದೇವೆ. ಅವರೂ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಕೇಂದ್ರ ಸರ್ಕಾರ ಸಾಲ ಮನ್ನಾ ಮಾಡದಿದ್ದರೆ, ಮುಂದಿನ ದಿನಗಳಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗುವುದು,’ ಎಂದು ಎಚ್ಚರಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.