ಗೋಹತ್ಯೆಗೆ 14 ವರ್ಷ, ವ್ಯಕ್ತಿ ಕೊಂದವನಿಗೆ 2 ವರ್ಷ ಶಿಕ್ಷೆ!
Team Udayavani, Jul 17, 2017, 4:30 AM IST
ಹೊಸದಿಲ್ಲಿ: ‘ವೇಗವಾಗಿ ಕಾರು ಓಡಿಸಿ ವ್ಯಕ್ತಿಯೊಬ್ಬನ ಪ್ರಾಣ ತೆಗೆಯುವ ಚಾಲಕನಿಗೆ ವಿಧಿಸುವ ಶಿಕ್ಷೆಗಿಂತಲೂ ಅಪಘಾತದಲ್ಲಿ ಹಸುವನ್ನು ಕೊಂದ ಚಾಲಕನಿಗೇ ಹೆಚ್ಚು ಶಿಕ್ಷೆ ವಿಧಿಸುವುದು ಇಂದಿನ ಕಾನೂನುಗಳ ವೈಶಿಷ್ಟ್ಯ…’ 2008ರಲ್ಲಿ ನಡೆದ ಅಪಘಾತವೊಂದರಲ್ಲಿ ಬಿಎಂಡಬ್ಲ್ಯು ಕಾರನ್ನು ಬೈಕ್ ಸವಾರನ ಮೇಲೆ ಹರಿಸಿ ಆತನ ಸಾವಿಗೆ ಕಾರಣನಾಗಿದ್ದ ಹರಿಯಾಣದ ಉದ್ಯಮಿಯೊಬ್ಬರ ಪುತ್ರನಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದ ನ್ಯಾಯಮೂರ್ತಿಗಳ ಅಭಿಪ್ರಾಯವಿದು. ಹಸು ಕೊಂದವರಿಗೆ ಕನಿಷ್ಠ 5, 7 ಇಲ್ಲವೇ ಕೆಲವು ರಾಜ್ಯಗಳಲ್ಲಿ 14 ವರ್ಷಗಳ ಜೈಲುಶಿಕ್ಷೆ ವಿಧಿಸಲಾಗುತ್ತದೆ. ಆದರೆ ಅಜಾಗರೂಕ ಚಾಲನೆ ಮಾಡಿ ವ್ಯಕ್ತಿಯೊಬ್ಬನ ಅಮೂಲ್ಯ ಜೀವ ತೆಗೆದವರಿಗೆ ಕೇವಲ 2 ವರ್ಷ ಶಿಕ್ಷೆ ವಿಧಿಸಬೇಕಿದೆ. ಕಾನೂನಿನಲ್ಲಿ ಇರುವ ಶಿಕ್ಷೆಯ ಮಿತಿ ಇಷ್ಟೆ’ ಎಂದು ದಿಲ್ಲಿಯ ಹೆಚ್ಚುವರಿ ಸೆಷನ್ಸ್ ಜಡ್ಜ್ ಸಂಜೀವ್ ಕುಮಾರ್ ವಿಷಾದಿಸಿದ್ದಾರೆ. ಈ ತೀರ್ಪಿನ ಪ್ರತಿಯನ್ನು ಪ್ರಧಾನಿ ಮೋದಿ ಅವರಿಗೂ ಕಳುಹಿಸಿಕೊಡಿ. ಇಂಥ ಅಪರಾಧಗಳಿಗೆ ನೀಡಲಾಗುವ ಶಿಕ್ಷೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅವರು ಹೆಜ್ಜೆಯಿಡಲಿ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು
Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.