ಗೋ ಹೆಸರಲ್ಲಿ ಗೂಂಡಾಗಿರಿ ಬೇಡ : ಮೋದಿ ಖಡಕ್‌ ಸೂಚನೆ


Team Udayavani, Jul 17, 2017, 4:30 AM IST

Modi-Caution-16-7.jpg

ಹೊಸದಿಲ್ಲಿ: ‘ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಗೂಂಡಾಗಿರಿಯ ವಿರುದ್ಧ ಎಲ್ಲ ರಾಜಕೀಯ ಪಕ್ಷಗಳೂ ಒಗ್ಗಟ್ಟಾಗಿ ಹೋರಾಡಬೇಕು. ಇಂಥ ವಿಚಾರದಲ್ಲಿ ಹಿಂಸಾಚಾರ ನಡೆಸುವ ಸಮಾಜವಿದ್ರೋಹಿ ಶಕ್ತಿಗಳ ವಿರುದ್ಧ ಎಲ್ಲ ರಾಜ್ಯ ಸರಕಾರಗಳು ಮುಲಾಜಿ ಲ್ಲದೆ ಕಠಿನ ಕ್ರಮ ಕೈಗೊಳ್ಳಬೇಕು.’ ಇಂಥದ್ದೊಂದು ಖಡಕ್‌ ಸೂಚನೆಯನ್ನು ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ರಾಜ್ಯ ಸರಕಾರಗಳಿಗೆ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದಲ್ಲಿ ಗೋರಕ್ಷಣೆಯ ಹೆಸರಲ್ಲಿ ನಡೆಯುತ್ತಿರುವ ಹಲ್ಲೆ, ಹತ್ಯೆಗಳ ಸಂಖ್ಯೆ ಗಂಭೀರ ಪ್ರಮಾಣದಲ್ಲಿ ಹೆಚ್ಚುತ್ತಿರುವುದರಿಂದ ಕಳವಳಗೊಂಡಿರುವ ಪ್ರಧಾನಿ ಮೋದಿ, ಗೋರಕ್ಷಣೆ ಹೆಸರಲ್ಲಿ ಹಿಂಸೆಗಿಳಿಯುವಂಥ ವರನ್ನು ‘ಸಮಾಜ ವಿರೋಧಿ ಶಕ್ತಿಗಳು’ ಹಾಗೂ ‘ಗೂಂಡಾಗಿರಿ’ ಎಂಬ ಕಟು ಪದಗಳನ್ನು ಬಳಸಿಯೇ ದೂಷಿಸಿದ್ದಾರೆ.

ಗೋ ಭಕ್ತಿಯ ಹೆಸರಲ್ಲಿ ಹಿಂಸಾಚಾರಕ್ಕೆ ಇಳಿಯಬೇಡಿ ಎಂದು ದೇಶದ ಜನತೆಗೆ ಈ ಹಿಂದೆಯೂ ಮೋದಿ ಕರೆ ನೀಡಿದ್ದರು. ರವಿವಾರ ನಡೆದ ಸರ್ವಪಕ್ಷ ಸಭೆಯಲ್ಲಿ ಎಲ್ಲ ರಾಜಕೀಯ ಪಕ್ಷಗಳೆದುರೇ ತಮ್ಮ ಅಸಮಾಧಾನ, ಆಕ್ರೋಶವನ್ನು ಅವರು ಹೊರಹಾಕಿದ್ದಾರೆ. ಸೋಮವಾರದಿಂದ ಸಂಸತ್‌ನ ಮುಂಗಾರು ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ರವಿವಾರ ಹೊಸದಿಲ್ಲಿಯಲ್ಲಿ ಸರ್ವಪಕ್ಷಗಳ ಸಭೆ ಕರೆಯಲಾಗಿತ್ತು. ಈ ವೇಳೆ ಮಾತನಾಡಿದ ಪ್ರಧಾನಿ, ‘ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಆಯಾ ರಾಜ್ಯ ಸರಕಾರಗಳ ಹೊಣೆ. ಗೋರಕ್ಷಣೆ ಹೆಸರಲ್ಲಿ ಹಿಂಸಾಚಾರ ನಡೆದರೆ ತಪ್ಪಿತಸ್ಥರ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕಾದ ಹೊಣೆಗಾರಿಕೆಯೂ ರಾಜ್ಯಗಳ ಮೇಲಿದೆ. ಗೋವನ್ನು ನಾವು ಮಾತೆಯೆಂದು ಪರಿಗಣಿಸುತ್ತೇವೆ. ಅದೊಂದು ಭಾವನಾತ್ಮಕ ವಿಚಾರ. ಆದರೆ, ನಮ್ಮ ದೇಶದಲ್ಲಿ ಗೋರಕ್ಷಣೆಗೆ ಸಂಬಂಧಿಸಿ ಅದರದ್ದೇ ಆದ ಕಾನೂನುಗಳಿವೆ, ಅವುಗಳನ್ನು ಉಲ್ಲಂಘಿಸುವುದು ಸರಿಯಲ್ಲ ಎಂಬುದನ್ನು ನಾವು ಅರಿತಿರಬೇಕು. ಹಾಗಾಗಿ, ಎಲ್ಲ ರಾಜಕೀಯ ಪಕ್ಷಗಳೂ ಸಮಾಜವಿದ್ರೋಹಿ ಶಕ್ತಿಗಳ ವಿರುದ್ಧ ಕಠಿನ ಕ್ರಮ ಕೈಗೊಳ್ಳಬೇಕು. ಅಷ್ಟೇ ಅಲ್ಲ, ಗೋರಕ್ಷಣೆಯ ಹೆಸರಲ್ಲಿ ಯಾರಾದರೂ ತಮ್ಮ ವೈಯಕ್ತಿಕ ದ್ವೇಷ ತೀರಿಸಿಕೊಳ್ಳುತ್ತಿದ್ದಾರಾ ಎಂಬುದನ್ನೂ ನೋಡಿಕೊಳ್ಳಬೇಕು’ ಎಂದಿದ್ದಾರೆ.

ಅರಾಜಕತೆ ಸೃಷ್ಟಿಗೆ ಯತ್ನ: ‘ಕೆಲವರು ಗೋರಕ್ಷಣೆ ಹೆಸರಲ್ಲಿ ದೇಶದಲ್ಲಿ ಅರಾಜಕತೆ ಸೃಷ್ಟಿಗೆ ಯತ್ನಿಸುತ್ತಿದ್ದಾರೆ. ಇಂಥವರ ವಿರುದ್ಧ ಹೋರಾಡಲು ಎಲ್ಲ ರಾಜಕೀಯ ಪಕ್ಷಗಳೂ ಸಹಕಾರ ನೀಡಬೇಕು. ಇಂಥ ಘಟನೆಗಳಿಗೆ ಕೋಮು ಬಣ್ಣವನ್ನು ನೀಡಬಾರದು,’ ಎಂದೂ ಮೋದಿ ಹೇಳಿದ್ದಾರೆ. ಮುಂಗಾರು ಅಧಿವೇಶನದಲ್ಲಿ ಗೋರಕ್ಷಕರಿಂದ ಆಗಿರುವ ಹಲ್ಲೆ, ಹತ್ಯೆಗಳನ್ನು ಮುಖ್ಯವಾಗಿ ಪ್ರಸ್ತಾವಿಸಿ ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಲು ವಿಪಕ್ಷಗಳು ಕಾರ್ಯತಂತ್ರ ರೂಪಿಸಿರುವ ಬೆನ್ನಲ್ಲೇ ಪ್ರಧಾನಿ ಅವರಿಂದ ಇಂತಹ ಮಾತುಗಳು ಹೊರಬಿದ್ದಿದೆ.

ಆರ್‌ಜೆಡಿ, ಟಿಎಂಸಿಗೂ ಚುಚ್ಚಿದ ಮೋದಿ
ಭ್ರಷ್ಟಾಚಾರ ಕುರಿತು ಪ್ರಸ್ತಾವಿಸುತ್ತಾ ಪ್ರಧಾನಿ ಮೋದಿ ಅವರು ತೃಣಮೂಲ ಕಾಂಗ್ರೆಸ್‌ ಮತ್ತು ಆರ್‌ಜೆಡಿಯನ್ನು ಚುಚ್ಚಿದ್ದೂ ಕಂಡುಬಂತು. ಭ್ರಷ್ಟಾಚಾರಿಗಳ ವಿರುದ್ಧ, ದೇಶವನ್ನು ಲೂಟಿ ಮಾಡುತ್ತಿರುವವರ ವಿರುದ್ಧ ಕಾನೂನು ತನ್ನದೇ ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳುತ್ತದೆ. ಆಗ ಇದೊಂದು ರಾಜಕೀಯ ಪಿತೂರಿ ಎನ್ನುತ್ತಾ ಎಸ್ಕೇಪ್‌ ಆಗಲು ಯತ್ನಿಸುವವರ ವಿರುದ್ಧ ನಾವೆಲ್ಲರೂ ಕೈಜೋಡಿಸಬೇಕು. ಆ ಮೂಲಕ ಭ್ರಷ್ಟಾಚಾರದ ವಿರುದ್ಧ ಒಗ್ಗಟ್ಟಾಗಿ ಹೋರಾಡಬೇಕು ಎಂದರು ಮೋದಿ. ಇದೇ ವೇಳೆ, ರಾಷ್ಟ್ರಪತಿ ಚುನಾವಣೆ ಕುರಿತು ಮಾತನಾಡಿದ ಅವರು, ‘ಎಲ್ಲ ರಾಜಕೀಯ ಪಕ್ಷಗಳೂ ಎಲ್ಲೂ ಕೆಟ್ಟ ಪದಗಳನ್ನು ಬಳಸದೇ, ಘನತೆ ಕಾಪಾಡಿಕೊಂಡಿದ್ದಾರೆ. ಇದು ಸಂತೋಷದ ವಿಚಾರ’ ಎಂದರು. ಆಗಸ್ಟ್‌ 9ರಂದು ಕ್ವಿಟ್‌ ಇಂಡಿಯಾ ಚಳವಳಿಯ 75ನೇ ವರ್ಷಾಚರಣೆ ಇದ್ದು, ಎಲ್ಲ ರಾಜಕೀಯ ಪಕ್ಷಗಳೂ ಇದರಲ್ಲಿ ಪಾಲ್ಗೊಳ್ಳಬೇಕು ಎಂದೂ ಅವರು ಮನವಿ ಮಾಡಿದರು. ಸರ್ವಪಕ್ಷ ಸಭೆಯಲ್ಲಿ ಕಾಂಗ್ರೆಸ್‌ನ ಗುಲಾಂ ನಬಿ ಆಜಾದ್‌, ಎನ್‌ಸಿಪಿ ನಾಯಕ ಶರದ್‌ ಪವಾರ್‌, ಸಿಪಿಎಂನ ಸೀತಾರಾಂ ಯೆಚೂರಿ, ಎಸ್ಪಿ ನಾಯಕ ಮುಲಾಯಂ ಸಿಂಗ್‌ ಯಾದವ್‌, ಎನ್‌ಸಿ ನಾಯಕ ಫಾರೂಕ್‌ ಅಬ್ದುಲ್ಲಾ ಮತ್ತು ಸಿಪಿಐನ ಡಿ.ರಾಜಾ ಪಾಲ್ಗೊಂಡಿದ್ದರು. ಜೆಡಿಯು ಮತ್ತು ಟಿಎಂಸಿ ನಾಯಕರು ಗೈರಾಗಿದ್ದರು.

ಇಂದಿನಿಂದ ಅಧಿವೇಶನ ಶುರು; ಸರಕಾರ ಹಣಿಯಲು ವಿಪಕ್ಷಗಳು ಸಜ್ಜು
ಗೋರಕ್ಷಣೆ ಹೆಸರಲ್ಲಿ ಹತ್ಯೆ, ರೈತರ ಪ್ರತಿಭಟನೆ, ಕಾಶ್ಮೀರ ವಿವಾದ, ವಿಪಕ್ಷಗಳ ಕೆಲವು ನಾಯಕರ ವಿರುದ್ಧ ಕ್ರಮ, ಚೀನ ವಿವಾದ… ಸೋಮವಾರ ಆರಂಭವಾಗಲಿರುವ ಸಂಸತ್‌ ಅಧಿವೇಶನದಲ್ಲಿ ಸರಕಾರವನ್ನು ಹಣಿಯಲು ವಿಪಕ್ಷಗಳು ರೂಪಿಸಿರುವ ಕಾರ್ಯತಂತ್ರಗಳ ಪಟ್ಟಿಯಿದು. ಕೆಲವು ಹಾಲಿ ಸದಸ್ಯರ ನಿಧನದ ಹಿನ್ನೆಲೆಯಲ್ಲಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಸೋಮವಾರದ ಕಲಾಪವನ್ನು ಮುಂದೂಡಲಾಗುತ್ತದೆ. ಮಂಗಳವಾರದಿಂದ ಉಭಯ ಸದನಗಳಲ್ಲಿ ಬಿಸಿ ಬಿಸಿ ಚರ್ಚೆ ಆರಂಭವಾಗಲಿದೆ. 

ವಿವಿಧ ವಿಚಾರಗಳನ್ನು ಎತ್ತಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ಸಜ್ಜಾದರೆ, ಅತ್ತ ಆಡಳಿತಾರೂಢ ಎನ್‌ಡಿಎ ಕೂಡ ಪ್ರತಿತಂತ್ರ ಹೂಡಿದೆ. ಲೋಕಸಭೆ ಚುನಾವಣೆಗೂ ಮೊದಲು ಮೋದಿ ಅವರು ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರದ ಆಶ್ವಾಸನೆ ನೀಡಿದ್ದು, ಅದನ್ನು ಈಡೇರಿಸುವಂತೆ ಸಿಪಿಎಂ ಒತ್ತಾಯಿಸಲಿದೆ ಎಂದು ಯೆಚೂರಿ ಹೇಳಿದ್ದಾರೆ. ಇನ್ನು ಕಾಂಗ್ರೆಸ್‌, ಚೀನ ಮತ್ತು ಕಾಶ್ಮೀರದ ವಿಚಾರ ಪ್ರಸ್ತಾವಿಸಿ ಸರಕಾರದ ನೀತಿಯನ್ನು ಪ್ರಶ್ನಿಸಲು ಮುಂದಾಗಿದೆ. ಒಟ್ಟಿನಲ್ಲಿ ಮುಂಗಾರು ಅಧಿವೇಶನವೂ ಹಲವು ಚರ್ಚೆ, ತಿಕ್ಕಾಟಕ್ಕೆ ಸಾಕ್ಷಿಯಾಗುವ ಸುಳಿವು ಸಿಕ್ಕಿದೆ. ಆ.11ರವರೆಗೆ ಅಧಿವೇಶನ ನಡೆಯಲಿದೆ.

ಟಾಪ್ ನ್ಯೂಸ್

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

yathnal

Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್‌

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್

mamata

West Bengal bypolls; ಟಿಎಂಸಿ ಕ್ಲೀನ್ ಸ್ವೀಪ್: ಪ್ರತಿಭಟನೆಗಳು ಬಿಜೆಪಿಗೆ ಸಹಕಾರಿಯಾಗಲಿಲ್ಲ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Modi-Tour

Tour: ಮೂರು ದೇಶ ಪ್ರವಾಸ: ಪ್ರಧಾನಿ ಮೋದಿ 31 ದ್ವಿಪಕ್ಷೀಯ ಸಭೆಗಳು!

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

BBK11: ದುಡ್ಡು ಕದ್ದ ಚೈತ್ರಾನಿಗೆ ಕಿಚ್ಚನ ಶಹಬ್ಬಾಸ್ – ಪಂಚಾಯ್ತಿಯಲ್ಲಿ ಏನೆಲ್ಲ ಆಯಿತು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

Syed Mushtaq Ali Trophy T20: ಕರ್ನಾಟಕಕ್ಕೆ 6 ರನ್‌ಗಳ ಸೋಲು

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

ICC Champions Trophy: ನ.26ಕ್ಕೆ ಐಸಿಸಿ ತುರ್ತು ಸಭೆ?

16

Pro Kabaddi: ಗುಜರಾತ್‌ಗೆ ರೋಚಕ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.