ಬಿಟಿ ಸಾಸಿವೆ ವಿರುದ್ಧ ಹೋರಾಟ ಅಗತ್ಯ

Team Udayavani, Jul 17, 2017, 11:51 AM IST

nagesh-hegde.jpg

ಬೆಂಗಳೂರು: ಭೂಮಿಯ ಫ‌ಲವತ್ತತೆಯನ್ನು ನಾಶಗೊಳಿಸುವ ಬಿಟಿ ಸಾಸಿವೆ ವಿರುದ್ಧ ಮತ್ತೂಂದು ಸುತ್ತಿನ ಹೋರಾಟಕ್ಕೆ ರೈತರು ಸಜ್ಜಾಗಬೇಕಿದೆ ಎಂದು ಹಿರಿಯ ಪತ್ರಕರ್ತ ನಾಗೇಶ್‌ ಹೆಗಡೆ ತಿಳಿಸಿದರು. ಗ್ರೀನ್‌ಪಾಥ್‌ ಆಗ್ಯಾನಿಕ್‌ ಸ್ಟೇಟ್‌ ಶನಿವಾರ ಹಮ್ಮಿಕೊಂಡಿದ್ದ “ಕುಲಾಂತರಿ ಸಾಸಿವೆ ಬೇಕೆ? ಅದು ಆರೋಗ್ಯಕ್ಕೆ ಸುರಕ್ಷಿತವೇ? ಮುಂದೇನು?’ ಕುರಿತ ವಿಚಾರ ಸಂಕಿರಣದಲ್ಲಿ ಅವರು ಮಾತನಾಡಿದರು.

ಅಂತರರಾಷ್ಟ್ರೀಯ ಕಂಪೆನಿಗಳು ಭಾರತೀಯ ಕೃಷಿ ಕ್ಷೇತ್ರವನ್ನು ವಶಕ್ಕೆ ಪಡೆಯಲು ಹಂತ ಹಂತವಾಗಿ ಪ್ರಯತ್ನಿಸುತ್ತಿವೆ. ಕಳೆದ 17 ವರ್ಷಗಳ ಹಿಂದೆ ಬಿಟಿ ಹತ್ತಿ ಬೀಜ ರೈತರಿಗೆ ವಿತರಿಸಲಾಗಿತ್ತು. ಬಳಿಕ ಬಿಟಿ ಬದನೆ ಈಗ ಬಿಟಿ ಸಾಸಿವೆಯನ್ನು ಮಾರುಕಟ್ಟೆಗೆ ಬಿಡಲಾಗಿದೆ.

ಇದನ್ನು ನಮ್ಮ ರೈತರು ಬಿತ್ತಿದಲ್ಲಿ ಹಂತ-ಹಂತವಾಗಿ ಭೂಮಿಯ ಫ‌ಲವತ್ತತೆ ನಾಶವಾಗಲಿದ್ದು, ಅನಿವಾರ್ಯವಾಗಿ ರೈತರು ಉದ್ಯೋಗವನ್ನರಸಿ ನಗರಗಳತ್ತ ವಲಸೆ ಹೋಗುವಂತಹ ಸ್ಥಿತಿ ನಿರ್ಮಾಣ ಆಗಲಿದೆ. ಆದ್ದರಿಂದ ಬಿಟಿ ಬದನೆ ವಿರುದ್ಧ ನಡೆಸಿದ ಹೋರಾಟದ ಮಾದರಿಯಲ್ಲಿ ಮತ್ತೂಂದು ಸುತ್ತಿನ ಹೋರಾಟ ನಡೆಸುವ ಅಗತ್ಯವಿದೆ ಎಂದು ಹೇಳಿದರು. 

ಉತ್ತರ ಭಾರತದಲ್ಲಿ ಸಾಸಿವೆ ಹೆಚ್ಚಿನ ಪ್ರಮಾಣದಲ್ಲಿ ಬೆಳೆಯುತ್ತಿದ್ದು, ಅಲ್ಲಿನ ರೈತರು ನಡೆಸುತ್ತಿರುವ ಹೋರಾಟಕ್ಕೆ ಕರ್ನಾಟಕ ದನಿಗೂಡಿಸಬೇಕು ಎಂದ ಅವರು, ರೈತರನ್ನು ಒಕ್ಕಲೆಬ್ಬಿಸಿ ಕೃಷಿ ಭೂಮಿಯನ್ನು ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ಪಡೆಯಲು ಅಂತರರಾಷ್ಟ್ರೀಯ ಕಂಪೆನಿಗಳು ಹವಣಿಸುತ್ತಿವೆ. ರಾಜಕೀಯ ಪಕ್ಷಗಳು ಇದಕ್ಕೆ ಪರೋಕ್ಷವಾಗಿ ಬೆಂಬಲಿಸುತ್ತಿವೆ ಎಂದು ಆರೋಪಿಸಿದರು. 

ಆಹಾರ ತಜ್ಞ ಕೆ.ಸಿ. ರಘು ಮಾತನಾಡಿ, ಬಿಟಿ ಸಾಸಿವೆಯಿಂದ ರೈತರಿಗೆ ಯಾವುದೇ ರೀತಿಯ ಲಾಭವಿಲ್ಲ. ಭಾರತದಲ್ಲಿ ಸಾಸಿವೆ ಎಣ್ಣೆ ಬಳಸುವುದು ಅತ್ಯಂತ ಕಡಿಮೆ ಪ್ರಮಾಣ. ಈ ಸಂಬಂಧ ನಡೆದಿರುವ ಸಂಶೋಧನೆಯಲ್ಲಿ ಖಾಸಗಿ ಕೈವಾಡ ಕಾಣುತ್ತಿದೆ ಎಂದು ಸಂಶಯ ವ್ಯಕ್ತಪಡಿಸಿದರು. 

ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್‌ ಮಾತನಾಡಿ, ರೈತರಿಗೆ ಅನ್ಯಾಯವಾದಲ್ಲಿ ಆಹಾರ ಸೇವಿಸುವ ಎಲ್ಲರೂ ಹೋರಾಟ ಮಾಡಿದಲ್ಲಿ ಮಾತ್ರ ರೈತರ ಸಂಕಷ್ಟಗಳಿಗೆ ಪರಿಹಾರ ಸಿಗಲು ಸಾಧ್ಯ. ವಿದೇಶಿ ಕಂಪೆನಿಗಳು ಬ್ರಹ್ಮ ರಾಕ್ಷಸರಂತೆ ಭಾರತೀಯ ರೈತರ ಮೇಲೆ ದಾಳಿ ಮಾಡುತ್ತಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಟ ಕಿಶೋರ್‌, ರೈತರ ಹಕ್ಕುಗಳ ಹೋರಾಟಗಾರ್ತಿ ಕವಿತಾ  ಕುರುಗಂಟಿ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

1-JPC

JPC ಅವಧಿ ವಿಸ್ತರಣೆ: ವಕ್ಫ್ ಮಸೂದೆ ಮಂಡನೆ ಮುಂದಿನ ವರ್ಷಕ್ಕೆ?

sensex

Stock market; ಲಾಭದ ಆಸೆಗೆ 11 ಕೋಟಿ ರೂ. ಕಳಕೊಂಡ್ರು!

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

ಕುದೂರು; ಸ್ವಂತ ಖರ್ಚಲ್ಲಿ ಶಿಕ್ಷಕನಿಂದ ವಿದ್ಯಾರ್ಥಿಗಳಿಗೆ ವಿಮಾನ ಪ್ರವಾಸ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

Marriages: ನಗರದಲ್ಲಿ 1 ತಿಂಗಳಲ್ಲಿ 13,000 ಮದುವೆ!

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

High Court: ಗುರು ರಾಘವೇಂದ್ರ ಬ್ಯಾಂಕ್‌ ಅಧ್ಯಕಗೆ ಜಾಮೀನು ನಿರಾಕರಣೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Arrested: ಬಿಹಾರದ ಬೆಡ್‌ಶೀಟ್‌ ಗ್ಯಾಂಗ್‌ನ 8 ಮಂದಿ ಸೆರೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

Crime Follow Up: ಅಸ್ಸಾಂ ಯುವತಿ ಹತ್ಯೆ ಕೇಸ್‌; ಆರೋಪಿ ಸೆರೆಗೆ 3 ತಂಡ ರಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

courts

Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

1-russia

Russia 200 ಕ್ಷಿಪಣಿ, ಡ್ರೋನ್‌ಗಳಿಂದ ದಾಳಿ: ಕತ್ತಲೆಯಲ್ಲಿ ಉಕ್ರೇನ್‌ನ 10 ಲಕ್ಷ ಮನೆ!

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

Udupi: ಇಂದಿನಿಂದ ಎಂಜಿಎಂ ಕಾಲೇಜಿನ ಅಮೃತ ಮಹೋತ್ಸವ

1-INS

Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.