ಮಾವಿನ ಕಟ್ಟೆ ಜನತಾ ಕಾಲನಿ ರಸ್ತೆ ದುರವಸ್ಥೆ
Team Udayavani, Jul 18, 2017, 2:20 AM IST
ಕುಂದಾಪುರ: ಗುಜ್ಜಾಡಿ ಗ್ರಾ.ಪಂ.ವ್ಯಾಪ್ತಿಯ ಮಾವಿನಕಟ್ಟೆ ಬಸ್ಸು ನಿಲ್ದಾಣದಿಂದ ಜನತಾ ಕಾಲನಿಗೆ ಹೋಗುವ ಸಾರ್ವಜನಿಕರ ರಸ್ತೆ ದುರಸ್ತಿ ಕಾಣದೇ ಸಂಚಾರಕ್ಕೆ ಅಸಾಧ್ಯವಾದ ಸ್ಥಿತಿಯಲ್ಲಿದೆ. ಕಳೆದ ಮೂರು ವರ್ಷದಿಂದ ಮಳೆಗಾಲದಲ್ಲಿ ಈ ರಸ್ತೆಯಲ್ಲಿ ನೀರು ತೋಡಿನ ರೀತಿಯಲ್ಲಿ ಹರಿಯುತ್ತಿದ್ದು , ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಗೆ ಸಂಚರಿಸುವುದೇ ಕಷ್ಟಕರವಾಗಿದೆ.
ಸುಮಾರು 150 ಮನೆಗಳಿರುವ ಈ ಜನತಾ ಕಾಲನಿಯ ಮಕ್ಕಳಿಗೆ ಮಳೆಗಾಲದಲ್ಲಿ ಶಾಲೆಗೆ ಹೋಗಲಾರದ ಸ್ಥಿತಿ ಎದುರಾದರೆ, ಸಂಪರ್ಕ ಕಡಿತದಿಂದ ಜನರು ದೈನಂದಿನ ಕೆಲಸ ಕಾರ್ಯಗಳಿಗೆ ತೆರಳುವುದೇ ಅಸಾಧ್ಯವಾಗಿದೆ. ಈ ಬಗ್ಗೆ ಸ್ಥಳೀಯ ಗ್ರಾ.ಪಂ.ಗೆ ದೂರು ನೀಡಿದ್ದು ಹಾಗೂ ಗ್ರಾಮಸಭೆಯಲ್ಲಿ ಹಲವಾರು ಬಾರಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Manipal KMC Hospital: ಮಲ್ಪೆ ಬೀಚ್ನಲ್ಲಿ ಮಧುಮೇಹ ಜಾಗೃತಿ
UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.