ಪದವಿ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ
Team Udayavani, Jul 18, 2017, 2:00 AM IST
ಬೆಳ್ತಂಗಡಿ: ಪದವಿ ಕಾಲೇಜುಗಳ ತರಗತಿ ಅವಧಿ ಬದಲಾವಣೆ ಕುರಿತು ಸೋಮವಾರ ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 2.30 ರವರೆಗೆ ಸರಕಾರಿ ಪದವಿ ಕಾಲೇಜುಗಳಲ್ಲಿ ತರಗತಿಗಳನ್ನು ನಡೆಸುವಂತೆ ಪದವಿ ಶಿಕ್ಷಣ ಇಲಾಖೆ ಸುತ್ತೋಲೆ ನೀಡಿದೆ. ಇದು ಕೇವಲ ಸರಕಾರಿ ಕಾಲೇಜುಗಳಿಗೆ ಅನ್ವಯವಾಗುತ್ತದೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಈ ಅವಧಿಯಲ್ಲಿ ತಲುಪಲು ಕಷ್ಟ. ಆದ್ದರಿಂದ ಹಾಜರಾತಿ ಕೊರತೆ ಉಂಟಾಗಿ ಪರೀಕ್ಷೆ ಎದುರಿಸುವುದೂ ಕಷ್ಟವಾಗಬಹುದು. ಖಾಸಗಿ ಕಾಲೇಜುಗಳಿಗೆ ಇಲ್ಲದ ಈ ನಿಯಮ ಕೇವಲ ಸರಕಾರಿ ಕಾಲೇಜುಗಳಿಗೆ ಏಕೆ ಎಂದು ಪ್ರಶ್ನಿಸಿದ ವಿದ್ಯಾರ್ಥಿ ಮುಖಂಡರು, ಈ ಸುತ್ತೋಲೆಯನ್ನು ತತ್‌ಕ್ಷಣ ಮರಳಿ ಪಡೆಯಬೇಕು. ಇಲ್ಲದಿದ್ದರೆ ಬೃಹತ್ ಪ್ರಮಾಣದಲ್ಲಿ ಪ್ರತಿಭಟನೆ ನಡೆಸಲಾಗುವುದು ಎಂದು ವಿದ್ಯಾರ್ಥಿ ಮುಖಂಡರು ಹೇಳಿದರು.
ವಿದ್ಯಾರ್ಥಿಗಳ ಸಂಕಷ್ಟದ ಅರಿವಿದ್ದರೂ ಇಲಾಖೆಯ ಸುತ್ತೋಲೆಯಂತೆ ಕಾರ್ಯ ನಿರ್ವಹಿಸಬೇಕಿದೆ. ಮನವಿಯನ್ನು ಸಂಬಂಧ ಪಟ್ಟವರಿಗೆ ಕಳುಹಿಸಲಾಗುವುದು ಎಂದು ಪ್ರಾಚಾರ್ಯ ಪ್ರೊ| ರಾಜಪ್ಪ ಹೇಳಿದರು. ತರಗತಿ ಬಹಿಷ್ಕಾರ ಅಂತ್ಯಗೊಳಿಸಿ ತರಗತಿಗೆ ತೆರಳುವಂತೆ ಮನವೊಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.