ಯಡಿಯೂರಪ್ಪ ಮನೆ ಶೋಧ
Team Udayavani, Jul 18, 2017, 3:25 AM IST
ಬೆಂಗಳೂರು: ವಿಧಾನಪರಿಷತ್ ವಿಪಕ್ಷದ ನಾಯಕ ಈಶ್ವರಪ್ಪ ಆಪ್ತ ವಿನಯ್ ಅಪಹರಣ ಯತ್ನ ಪ್ರಕರಣ ಸಂಬಂಧ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಡಾಲರ್ಸ್ ಕಾಲೋನಿಯ ನಿವಾಸದಲ್ಲಿ ಪೊಲೀಸರು ತಡರಾತ್ರಿ ಶೋಧ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ತಮ್ಮ ಮನೆಯಲ್ಲಿ ಮಹಾಲಕ್ಷ್ಮೀ ಲೇಔಟ್ ಪೊಲೀಸರು ಶನಿವಾರ ತಡರಾತ್ರಿ ಶೋಧ ನಡೆಸಿರುವ ಬಗ್ಗೆ ಯಡಿಯೂರಪ್ಪ ಅವರು ನಗರ ಪೊಲೀಸ್ ಆಯುಕ್ತ ಪ್ರವೀಣ್ ಸೂದ್ ಅವರಿಗೆ ಪತ್ರ ಬರೆದು ಬೇಸರ ವ್ಯಕ್ತಪಡಿಸಿದ ಬೆನ್ನಲ್ಲೇ ಕೆ.ಎಸ್.ಈಶ್ವರಪ್ಪ, ವಿಧಾನಸಭೆ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಅವರು ಪೊಲೀಸರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೊಂದೆಡೆ ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೂ ಈ ಕ್ರಮವನ್ನು ಖಂಡಿಸಿದ್ದಾರೆ.
ಈಶ್ವರಪ್ಪ ಅವರ ಆಪ್ತ ವಿನಯ್ ಅಪಹರಣ ಯತ್ನ ಮತ್ತು ಹಲ್ಲೆ ಪ್ರಕರಣದಲ್ಲಿ ಯಡಿಯೂರಪ್ಪ ಅವರ ಆಪ್ತ ಸಂತೋಷ್ ಹೆಸರು ಕೇಳಿಬಂದಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆ ನಡೆಸುವ ನೆಪದಲ್ಲಿ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಶನಿವಾರ ರಾತ್ರಿ ಯಡಿಯೂರಪ್ಪ ಅವರ ಮನೆಗೆ ತೆರಳಿ ಶೋಧ ನಡೆಸಿದ್ದರು. ಈ ಕುರಿತಂತೆ ನಗರ ಪೊಲೀಸ್ ಆಯುಕ್ತರಿಗೆ ಪತ್ರ ಬರೆದಿದ್ದ ಯಡಿಯೂರಪ್ಪ, ತಡರಾತ್ರಿ ತಮ್ಮ ಮನೆಗೆ ಪೊಲೀಸರು ಬರುವ ಅಗತ್ಯವೇನಿತ್ತು ಎಂದು ಪ್ರಶ್ನಿಸಿದ್ದರಲ್ಲದೆ, ತನಿಖೆ ನಡೆಸುವುದಾದರೆ ಹಗಲು ಹೊತ್ತಿನಲ್ಲಿ ನಡೆಸಲಿ. ಸಂತೋಷ್ ನನ್ನ ಸಂಬಂಧಿ ಎನ್ನುವುದು ಸತ್ಯ. ಪ್ರಕರಣದಲ್ಲಿ ಯಾರೇ ತಪ್ಪಿತಸ್ಥರಾಗಿದ್ದರೂ ಅವರ ವಿರುದ್ಧ ಕ್ರಮಕೈಗೊಳ್ಳಲಿ. ಈ ಬಗ್ಗೆ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ಅವರೊಂದಿಗೆ ಚರ್ಚಿಸಿದ್ದೇನೆ. ನಿಮ್ಮನ್ನು ಸಂಪರ್ಕಿಸಲು ಯತ್ನಿಸಲಾಯಿತು. ಆದರೆ, ಸಾಧ್ಯವಾಗಲಿಲ್ಲ. ಅನಗತ್ಯವಾಗಿ ಇತರರಿಗೆ ಕಿರುಕುಳ ನೀಡುವುದು ಬೇಡ. ಪ್ರಾಮಾಣಿಕ ತನಿಖೆ ನಡೆಸಿ ಎಂದು ಹೇಳಿದ್ದರು.
ಈ ಕುರಿತಂತೆ ಪ್ರತಿಕ್ರಿಯಿಸಿರುವ ಜಗದೀಶ್ ಶೆಟ್ಟರ್, ಮಾಜಿ ಮುಖ್ಯಮಂತ್ರಿ, ಸಂಸದ ಮತ್ತು ಒಂದು ರಾಷ್ಟ್ರೀಯ ಪಕ್ಷದ ರಾಜ್ಯಾಧ್ಯರಾಗಿ ಜವಾಬ್ದಾರಿಯುತ ಸ್ಥಾನದಲ್ಲಿರುವ ಯಡಿಯೂರಪ್ಪ ಅವರ ಮನೆಯನ್ನ ಮಧ್ಯರಾತ್ರಿ ತಲಾಶ್ ಮಾಡಿದ್ದು ಸರಿಯಲ್ಲ. ಅಗತ್ಯವಿದ್ದರೆ ಹಗಲಲ್ಲೇ ಹೋಗಿ ಶೋಧ ನಡೆಸಬೇಕಿತ್ತು ಅಥವಾ ಯಡಿಯೂರಪ್ಪ ಅವರನ್ನು ನೇರವಾಗಿ ಪ್ರಶ್ನಿಸಬಹುದಿತ್ತು. ಆದರೆ, ರಾಜಕೀಯ ದುರುದ್ದೇಶದಿಂದ ರಾತ್ರಿ ಶೋಧ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಇನ್ನೊಂದೆಡೆ ಈಶ್ವರಪ್ಪ ಕೂಡ ರಾಜ್ಯ ಸರಕಾರದ ವಿರುದ್ಧ ಕಿಡಿ ಕಾರಿದ್ದು, ಪೊಲೀಸರಿಗೆ ತನಿಖೆ ಮಾಡುವ ನಿಜವಾದ ಆಸಕ್ತಿ ಇದ್ದಿದ್ದರೆ ಹಗಲು ವೇಳೆ ಯಡಿಯೂರಪ್ಪ ಅವರ ಮನೆಗೆ ಹೋಗಿ ಶೋಧ ನಡೆಸಬಹುದಿತ್ತು. ಅದನ್ನು ಬಿಟ್ಟು ಮಧ್ಯರಾತ್ರಿ ಹೋಗಿ ಶೋಧ ಮಾಡುವ ಆವಶ್ಯಕತೆ ಏನಿತ್ತು? ಇಲ್ಲೇನು ಪೊಲೀಸ್ ರಾಜ್ಯ ಅಧಿಕಾರದಲ್ಲಿದೆಯೇ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು
Bengaluru: ಇಬ್ಬರು ಮಕ್ಕಳಿಗೆ ವಿಷವುಣಿಸಿ ಕೊಂದು ಟೆಕಿ ದಂಪತಿ ಆತ್ಮಹ*ತ್ಯೆ!
Percentage War: ಮತ್ತೆ 60 ಪರ್ಸೆಂಟ್ ಕಮಿಷನ್ ಯುದ್ಧ ; ಆರೋಪ – ಪ್ರತ್ಯಾರೋಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Saudi Arabia: ಮೆಕ್ಕಾ-ಮದೀನಾ ಸೇರಿ ಹಲವೆಡೆ ದಾಖಲೆಯ ಧಾರಾಕಾರ ಮಳೆ; ಜನಜೀವನ ಅಸ್ತವ್ಯಸ್ತ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.