ರಾಷ್ಟ್ರಪತಿ ಚುನಾವಣೆಗೆ ಶಾಸಕರ ಹಕ್ಕು ಚಲಾವಣೆ
Team Udayavani, Jul 18, 2017, 4:50 AM IST
ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ರಾಜ್ಯ ವಿಧಾನಸಭೆಯ 222 ಶಾಸಕರು ಹಾಗೂ ಓರ್ವ ಸಂಸದ ಮತದಾನ ಮಾಡಿದ್ದಾರೆ. 224 ಶಾಸಕರ ಪೈಕಿ ಜೆಡಿಎಸ್‌ನ ವೈಎಸ್‌ವಿ ದತ್ತ ಹಾಗೂ ಬಂಡಾಯ ಶಾಸಕ ಚಲುವರಾಯಸ್ವಾಮಿ ಮತದಾನದಿಂದ ದೂರ ಉಳಿದಿದ್ದರು. ಸಂಸದ ಪ್ರಕಾಶ್ ಹುಕ್ಕೇರಿ ಮಾತ್ರ ಬೆಂಗಳೂರಿನಲ್ಲಿ ಮತ ಚಲಾಯಿಸಿದರು. ಬೆಳಿಗ್ಗೆ 10 ಆರಂಭವಾಗಿ ಸಂಜೆ 5 ರವರೆಗೂ ಮತದಾನ ನಡೆಯಿತು. ರಾಜ್ಯದ ಶಾಸಕರ ಪರವಾಗಿ ಬಿಜೆಪಿಯ ಸಿ.ಟಿ. ರವಿ ಮೊದಲ ಮತದಾನ ಮಾಡಿದರೆ, ಕಾಂಗ್ರೆಸ್‌ನ ಸತೀಶ್ ಜಾರಕಿಹೊಳಿ ಕೊನೆಯವರಾಗಿ ಮತ ಚಲಾಯಿಸಿದರು. ಜೆಡಿಎಸ್ ಬಂಡಾಯ ಶಾಸಕರು ಮತದಾನಕ್ಕೆ ಮುನ್ನ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕಚೇರಿಗೆ ಹೋಗಿ ಅವರ ಜತೆ ಮಾತುಕತೆ ನಡೆಸಿ ಅನಂತರ ಮತಗಟ್ಟೆಗೆ ಆಗಮಿಸಿ ಮತದಾನ ಮಾಡಿದರು. ಈ ಸಂದರ್ಭದಲ್ಲಿ ಚೆಲುವರಾಯಸ್ವಾಮಿ ಗೈರು ಕುರಿತು ಮುಖ್ಯಮಂತ್ರಿಯವರು ಅಸಮಾಧಾನ ವ್ಯಕ್ತಪಡಿಸಿದರು ಎಂದು ತಿಳಿದು ಬಂದಿದೆ.
ಬಿಜೆಪಿ ನೇತೃತ್ವದ ಎನ್.ಡಿ.ಎ ಅಭ್ಯರ್ಥಿ ರಾಮನಾಥ ಕೋವಿಂದ್ ಅವರ ಚುನಾವಣಾ ಏಜೆಂಟ್ ಆಗಿ ಬಿಜೆಪಿ ಮುಖ್ಯ ಸಚೇತಕ ಸುನಿಲ್ ಕುಮಾರ್, ಕಾಂಗ್ರೆಸ್ ನೇತೃತ್ವದ ಯುಪಿಎ ಬೆಂಬಲಿತ ಅಭ್ಯರ್ಥಿ ಮೀರಾ ಕುಮಾರ್‌ಗೆ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೊಸರಾಜ್ ಏಜೆಂಟ್ ಆಗಿ ಕೆಲಸ ನಿರ್ವಹಿಸಿದರು. ಚುನಾವಣೆ ನಡೆದ ಹಿನ್ನೆಲೆಯಲ್ಲಿ ಮೂರು ರಾಜಕೀಯ ಪಕ್ಷಗಳು ಅನೌಪಚಾರಿಕ ಶಾಸಕಾಂಗ ಸಭೆ ನಡೆಸಿದವು. ಮಧ್ಯಾಹ್ನ 1 ಗಂಟೆಯ ಹೊತ್ತಿಗೆ ಬಿಜೆಪಿಯ 44 ಜನ ಸದಸ್ಯರು ಮತ ಚಲಾಯಿಸಿದ್ದರು.
ಸಂಜೆ ಮತದಾನ ಮುಕ್ತಾಯವಾದ ಅನಂತರ ಸಹಾಯಕ ಚುನಾವಣಾಧಿಕಾರಿ ಎಸ್. ಮೂರ್ತಿ ಮಾತನಾಡಿ, ಪಾರದರ್ಶಕ ಮತ್ತು ಶಾಂತಿಯುತ ಮತದಾನ ನಡೆದಿದೆ. 222 ಶಾಸಕರು ಮತ್ತು ಓರ್ವ ಸಂಸದರು ಮತ ಚಲಾಯಿಸಿದ್ದಾರೆ. ಇಬ್ಬರು ಶಾಸಕರು ಮತದಾನ ಮಾಡಿಲ್ಲ. ಮತ ಪೆಟ್ಟಿಗೆಗಳನ್ನು ಇಂದೇ ವಿಮಾನದ ಮೂಲಕ ಕೇಂದ್ರ ಚುನಾವಣಾ ಆಯೋಗಕ್ಕೆ ಬಿಗಿ ಭದ್ರತೆಯಲ್ಲಿ ತೆಗೆದುಕೊಂಡು ಹೋಗಲಾಗುವುದು. ಮತಪೆಟ್ಟಿಗೆಯೊಂದಿಗೆ ವಿಧಾನಸಭೆ ಸಚಿವಾಲಯದ ಮೂವರು ಹಿರಿಯ ಅಧಿಕಾರಿಗಳು ತೆರಳುತ್ತಿರುವುದಾಗಿ ಅವರು ಹೇಳಿದರು.
ರಾಷ್ಟ್ರಪತಿ ಚುನಾವಣೆಯಲ್ಲಿ ಆತ್ಮಸಾಕ್ಷಿಯ ಮತ ಹಾಕುವಂತೆ ಮನವಿ ಮಾಡಿದ್ದೇವೆ. ಮೀರಾ ಕುಮಾರ್ ಕೂಡ ಅದೇ ಮನವಿ ಮಾಡಿದ್ದಾರೆ. ಹಿಂದೆ ಇಂತಹದೇ ಸನ್ನಿವೇಶದಲ್ಲಿ ವಿವಿ ಗಿರಿಯವರು ಆಯ್ಕೆಯಾಗಿದ್ದರು.
– ಡಾ| ಜಿ.ಪರಮೇಶ್ವರ್, ಕೆಪಿಸಿಸಿ ಅಧ್ಯಕ್ಷ
ಎನ್‌ಡಿಎ ಅಭ್ಯರ್ಥಿ ರಾಮನಾಥ ಕೋವಿಂದ ಪರವಾಗಿ ನಾವೆಲ್ಲ ಮತದಾನ ಮಾಡಿದ್ದೇವೆ. ಮುಂದೆ ರಾಷ್ಟ್ರಪತಿಯಾಗಿ ರಾಮನಾಥ ಕೋವಿಂದ್ ಆಯ್ಕೆಯಾಗುವುದು ಬಹುತೇಕ ಖಚಿತ. ರಾಮನಾಥ ಕೋವಿಂದ್ ಸಜ್ಜನ ಮತ್ತು ಸರಳ ವ್ಯಕ್ತಿಯಾಗಿಯಾಗಿದ್ದಾರೆ. ಅವರನ್ನು ಬೆಂಬಲಿಸಿದ ಎಲ್ಲರಿಗೂ ಧನ್ಯವಾದ.
– ಜಗದೀಶ್ ಶೆಟ್ಟರ್, ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Belagavi: ಎಸ್‌ಡಿಎ ಆತ್ಮಹ*ತ್ಯೆ: ಸಚಿವೆ ಹೆಬ್ಬಾಳ್ಕರ್ ರಾಜೀನಾಮೆಗೆ ಬಿಜೆಪಿ ಪಟ್ಟು
Congress Government: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಮುಹೂರ್ತ ನಿಗದಿ: ವಿಜಯೇಂದ್ರ
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
MUST WATCH
ಹೊಸ ಸೇರ್ಪಡೆ
Jharkhand; ಇಂಡಿಯಾ ಒಕ್ಕೂಟದ “ಸಪ್ತ ಗ್ಯಾರಂಟಿ’!: ಮಹಿಳೆಯರಿಗೆ ಮಾಸಿಕ 2,500 ರೂ.
T-Shirt: ಫ್ಲಿಪ್‌ಕಾರ್ಟ್, ಮೀಶೋದಲ್ಲಿ ಲಾರೆನ್ಸ್ ಬಿಷ್ಣೋಯ್ ಟೀಶರ್ಟ್ ಮಾರಾಟ: ಆಕ್ರೋಶ
Daily Horoscope; ಇಷ್ಟಾರ್ಥ ಸಿದ್ಧಿಯ ದಿನ..ಉದ್ಯೋಗ ಸ್ಥಾನದಲ್ಲಿ ಸದ್ಯಕ್ಕೆ ನಿಶ್ಚಿಂತೆ
Milk: ಕರ್ನಾಟಕ ಗಡಿಯ ಹಾಲು ಕೇರಳ ಪಾಲು! ಖರೀದಿ ದರ ಇಲ್ಲಿಗಿಂತ ಕೇರಳದಲ್ಲೇ ಅಧಿಕ
Congress: ಜಮೀರ್ ವಿರುದ್ಧ ಕೈಕಮಾಂಡ್‌ಗೆ 20ಕ್ಕೂ ಹೆಚ್ಚು ಶಾಸಕರಿಂದ ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.