ತ್ರಿಕೋನ ಸರಣಿ: ಆಸ್ಟ್ರೇಲಿಯ “ಎ’ ಬದಲು ಅಫ್ಘಾನಿಸ್ಥಾನ “ಎ’ ತಂಡ
Team Udayavani, Jul 18, 2017, 8:59 AM IST
ಜೊಹಾನ್ಸ್ಬರ್ಗ್: ಇದೇ ತಿಂಗಳು ದಕ್ಷಿಣ ಆಫ್ರಿಕಾದಲ್ಲಿ ಆರಂಭವಾಗಲಿರುವ “ಎ’ ತಂಡಗಳ ತ್ರಿಕೋನ ಸರಣಿಯಲ್ಲಿ ಒಂದು ಮಹತ್ತರ ಬದಲಾವಣೆ ಸಂಭವಿಸಿದೆ. ಆಸ್ಟ್ರೇಲಿಯ “ಎ’ ತಂಡದ ಬದಲು ಅಫ್ಘಾನಿಸ್ಥಾನ “ಎ’ ತಂಡ ಅವಕಾಶ ಪಡೆದಿದೆ.
ವೇತನ ವಿವಾದದ ಕಾರಣ ಆಸ್ಟ್ರೇಲಿಯ ಆಟಗಾರರು ಈ ಸರಣಿಯನ್ನು ಬಹಿಷ್ಕರಿಸಿದ್ದರು. ಹೀಗಾಗಿ “ಕ್ರಿಕೆಟ್ ಸೌತ್ ಆಫ್ರಿಕಾ’ (ಸಿಎಸ್ಎ) ಬದಲಿ ತಂಡವಾಗಿ ಅಫ್ಘಾನಿಸ್ಥಾನವನ್ನು ಆಹ್ವಾನಿಸಿತು. ಸರಣಿಯಲ್ಲಿ ಪಾಲ್ಗೊಳ್ಳಲಿರುವ ಉಳಿದೆರಡು ತಂಡಗಳೆಂದರೆ ದಕ್ಷಿಣ ಆಫ್ರಿಕಾ “ಎ’ ಹಾಗೂ ಭಾರತ “ಎ’. “ಅಫ್ಘಾನಿಸ್ಥಾನ ನಮ್ಮ ಆಹ್ವಾನವನ್ನು ಸ್ವೀಕರಿಸಿದೆ. ಅಫ್ಘಾನ್ ತಂಡ ಮೊದಲ ಬಾರಿಗೆ ದಕ್ಷಿಣ ಆಫ್ರಿಕಾಕ್ಕೆ ಆಗಮಿಸುವುದನ್ನು ನಾವು ಎದುರು ನೋಡುತ್ತಿದ್ದೇವೆ. ಅವರಿಗೆ ಸ್ವಾಗತ…’ ಎಂಬುದಾಗಿ ಸಿಎಸ್ಎ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹರೂನ್ ಲಾರ್ಗಟ್ ಹೇಳಿದ್ದಾರೆ.
ಮನೀಷ್ ಪಾಂಡೆ ಭಾರತ “ಎ’ ತಂಡವನ್ನು ಮುನ್ನಡೆಸಲಿದ್ದಾರೆ. ಈ ಸರಣಿ ಮುಗಿದೊಡನೆ ದಕ್ಷಿಣ ಆಫ್ರಿಕಾ ಪ್ರವಾಸವನ್ನು ಮುಂದುವರಿಸಲಿರುವ ಭಾರತ “ಎ’, ಆತಿಥೇಯರ ವಿರುದ್ಧ 2 ಚತುರ್ದಿನ ಪಂದ್ಯಗಳನ್ನಾಡಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಇಂಡಿಯಾ ಓಪನ್ ಬ್ಯಾಡ್ಮಿಂಟನ್ ಭಾರತದ 21 ಸ್ಪರ್ಧಿಗಳು ಭಾಗಿ
Women’s Ashes Series: ಆಸ್ಟ್ರೇಲಿಯ-ಇಂಗ್ಲೆಂಡ್ ಬಿಗ್ ಫೈಟ್
Jaiswal: ಚಾಂಪಿಯನ್ಸ್ ಟ್ರೋಫಿಗೆ ಯಶಸ್ವಿ ಜೈಸ್ವಾಲ್; ಇಂಗ್ಲೆಂಡ್ ಸರಣಿಯಲ್ಲೇ ಪದಾರ್ಪಣೆ?
Yuzi Chahal: ಡಿವೋರ್ಸ್ ಸುದ್ದಿಯ ನಡುವೆ ಬೇರೆ ಯುವತಿ ಜತೆ ಕಾಣಿಸಿಕೊಂಡ ಚಾಹಲ್; ಯಾರೀಕೆ?
Team India: ಕೆಎಲ್, ಪಾಂಡ್ಯ, ಗಿಲ್ ಅಲ್ಲ.., ಚಾಂಪಿಯನ್ಸ್ ಟ್ರೋಫಿಗೆ ಈತನೇ ಉಪ ನಾಯಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Forest Department: ಇದ್ದಲ್ಲಿಯೇ ಅರಣ್ಯ ಅಪರಾಧಗಳ ದಾಖಲು: “ಗರುಡಾಕ್ಷಿ’ಗೆ ಚಾಲನೆ
Commission: 60 ಪರ್ಸೆಂಟ್ ಕಮಿಷನ್: ಎಚ್ಡಿಕೆ ವಿರುದ್ಧ ಮುಗಿಬಿದ್ದ ಆಡಳಿತ ಪಕ್ಷ
illegal Investigation: ಬಿಬಿಎಂಪಿ ಮುಖ್ಯ ಎಂಜಿನಿಯರ್ ಕಚೇರಿ ಮೇಲೆ ಇ.ಡಿ. ದಾಳಿ
Waqf Report: ಅಮಿತ್ ಶಾ ಅಂಗಳಕ್ಕೆ ಭಿನ್ನರ ವಕ್ಫ್ ವರದಿ: ಕಿರಣ್ ರಿಜಿಜು ಮೂಲಕ ಸಲ್ಲಿಕೆ
Udupi:ಗೀತಾರ್ಥ ಚಿಂತನೆ 149: ಜಗತ್ತಿನಲ್ಲಿ ಇಷ್ಟೊಂದು ವ್ಯತ್ಯಾಸವೇಕೆ? ಪ್ರಶ್ನೆಗುತ್ತರವಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.