ನಿಗದಿತ ಸಮಯಕ್ಕೆ ಬಾರದ ರೈಲು: ಪ್ರತಿಭಟನೆ
Team Udayavani, Jul 18, 2017, 11:54 AM IST
ಕೆ.ಆರ್.ಪುರ: ನಿಗದಿತ ಸಮಯಕ್ಕೆ ರೈಲು ಬಾರದ ಹಿನ್ನೆಲೆ ಅಕ್ರೋಶಗೊಂಡ ಪ್ರಯಾಣಿಕರು ಹೊಸೂರು – ಯಶವಂತಪುರ ರೈಲನ್ನು 2 ಗಂಟೆ ರಾಮಮೂರ್ತಿನಗರ ಸಮೀಪದ ಕಸ್ತೂರಿನಗರದಲ್ಲಿ ತಡೆದು ಪ್ರತಿಭಟನೆ ನಡೆಸಿದರು.
ಪ್ರತಿದಿನ ಹೊಸೂರು -ಯಶವಂತಪುರ ಮಾರ್ಗದಲ್ಲಿ ಸಂಚರಿಸುವ ರೈಲು ನಿಗದಿತ ಸಮಯಕ್ಕಿಂದ 1 ಗಂಟೆ ತಡವಾಗಿ ಆಗಮಿಸುತ್ತಿವೆ. ಇದರಿಂದ ಕೆಲಸಕ್ಕೆ ತೆರಳಲು ತೀವ್ರ ತೊಂದರೆ ಉಂಟಾಗುತ್ತಿದ್ದು ಆಕ್ರೋಶಗೊಂಡ ಪ್ರಯಾಣಿಕರು ರೈಲನ್ನು ತಡೆದು ರೈಲ್ವೆ ಇಲಾಖೆಯ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಹಿರಿಯ ರೈಲ್ವೆ ಅಧಿಕಾರಿ ರಾಮಕೃಷ್ಣ ಭೇಟಿ ನೀಡಿ ಮಾತನಾಡಿ, ಹೊಸೂರು-ಯಶವಂತಪುರ ಮಾರ್ಗಕ್ಕೆ ಒಂದೇ ರೈಲು ಸಂಚರಿಸುವುದರಿಂದ ಸಮಯದಲ್ಲಿ ವ್ಯತ್ಯಯವಾಗುತ್ತಿದೆ. ಈ ಸಮಸ್ಯೆಗಳ ಬಗ್ಗೆ ಮೇಲಾಧಿಕಾರಿಗಳು ಮತ್ತು ಪ್ರಯಾಣಿಕರೊಂದಿಗೆ ಚರ್ಚಿಸಿ ಪರಿಹರಿಸುವುದಾಗಿ ಭರವಸೆ ನೀಡಿದರು.
ನಂತರ ಪ್ರಯಾಣಿಕರು ಪ್ರತಿಭಟನೆಯನ್ನು ಹಿಂಪಡೆದರು. 2 ಗಂಟೆಗಳ ಕಾಲ ರೈಲನ್ನು ತಡೆದಿದ್ದರಿಂದ ಕೆಲ ರೈಲುಗಳ ಸಮಯದಲ್ಲಿ ವ್ಯತ್ಯಯ ಉಂಟಾಗಿ ನೂರಾರು ಪ್ರಯಾಣಿಕರಿಗೆ ತೊಂದರೆ ಉಂಟಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Tragedy: ಆಗ್ರಾ-ಲಕ್ನೋ ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 5ವೈದ್ಯರು ಸ್ಥಳದಲ್ಲೇ ಮೃತ್ಯು
Udupi: ಇಲ್ಲಿ ಹೊಂಡಗಳೇ ಸ್ಪೀಡ್ ಬ್ರೇಕರ್‌ಗಳು!
Rainy Season: ಮೊಬೈಲ್ ಬಿಟ್ಟು ಬೇರೆ ಆಡೋಣವೇ? ಮಕ್ಕಳಿಗೆ ಹೀಗೊಂದು ಪ್ರಶ್ನೆ
Road Mishap: ಭೀಕರ ಕಾರು ಅಪಘಾತ; ಖ್ಯಾತ ನಿರ್ದೇಶಕನ ಪುತ್ರ ಸೇರಿ ಇಬ್ಬರು ಮೃತ್ಯು
Jammu; ವೈಷ್ಣೋದೇವಿ ರೋಪ್‌ವೇ ವಿವಾದ: ಪ್ರತಿಭಟನೆಗಿಳಿದವರು ವಶಕ್ಕೆ, ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.