ಪೋಷಕರ ಕನಸು ನನಸಾಗಿಸಲು ಶ್ರಮಿಸಿ: ಸ್ವಾಮೀಜಿ

Team Udayavani, Jul 18, 2017, 11:54 AM IST

poshakara-kanasu.jpg

ಹೊಸಕೋಟೆ: ವಿದ್ಯಾರ್ಥಿಗಳು ಪೋಷಕರು ಹೊಂದಿರುವ ಕನಸನ್ನು ನನಸಾಗಿಸಲು ಶ್ರಮಿಸಬೇಕೆಂದು ಶಿವಗಂಗೆಯ ಮೇಲಣಗವಿ ವೀರಸಿಂಹಾಸನ ಸಂಸ್ಥಾನ ಮಠಾಧ್ಯಕ್ಷರು, ಜಗದ್ದುರು ರೇವಣಸಿದ್ದೇಶ್ವರ ವಿದ್ಯಾಪೀಠದ ಅಧ್ಯಕ್ಷರಾದ ಶ್ರೀ ಮಲಯಶಾಂತಮುನಿ ದೇಶೀಕೇಂದ್ರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.ಅವರು ಪಟ್ಟಣದ  ಪಾರ್ವತಿಪುರದಲ್ಲಿರುವ ಎಸ್‌ಜೆಆರ್‌ಎಸ್‌ ಬಾಲಕ, ಬಾಲಕಿಯರ ಪ್ರೌಢಶಾಲೆಯಲ್ಲಿ ಏರ್ಪಡಿಸಿದ್ದ ಪೋಷಕರ ಸಭೆಯಲ್ಲಿ ಮಾತನಾಡಿದರು.

ಪರೀಕ್ಷೆಯಲ್ಲಷ್ಟೇ ಅಲ್ಲದೆ ಜೀವನದ ಪ್ರತಿ ಹಂತದಲ್ಲೂ ಯಶಸ್ಸು ಗಳಿಸಲು ಆತ್ಮಬಲ ಬೆಳೆಸಿಕೊಳ್ಳಬೇಕು.  ಪೋಷಕರು ಸಹ ಮಕ್ಕಳ ಪಠ್ಯಭ್ಯಾಸಕ್ಕೆ ಪೂರಕವಾದ ಸೌಲಭ್ಯಗಳನ್ನು ಕಲ್ಪಿ$ಸುವಲ್ಲಿ ಜವಾಬ್ದಾರಿಯುತ ಪಾತ್ರ ನಿರ್ವಹಿಸಬೇಕು. ಆಗಾಗ್ಗೆ ಶಾಲೆಗೆ ಭೇಟಿ ನೀಡಿ ಮಕ್ಕಳ ಪ್ರಗತಿಯ ಬಗ್ಗೆ ಮಾಹಿತಿ ಪಡೆದುಕೊಳ್ಳುವ ಮೂಲಕ ಉತ್ತಮ ಫ‌ಲಿತಾಂಶ ಪಡೆಯಲು ಶಿಕ್ಷಕರೊಂದಿಗೆ ಸಹಕರಿಸಬೇಕು.  

ಗ್ರಾಮೀಣ ಪ್ರದೇಶದ ಬಾಲಕಿಯರು ಶೈಕ್ಷಣಿಕ ಪ್ರಗತಿ ಹೊಂದಲು  ಪಟ್ಟಣದಲ್ಲಿ 1980ರಲ್ಲಿ ಪ್ರಥಮವಾಗಿ ಬಾಲಕಿಯರಿಗಾಗಿ ಪ್ರೌಢಶಾಲೆ ಪ್ರಾರಂಭಿಸಲಾಯಿತು.  ದಾನಿಗಳ ಸಹಕಾರದಿಂದ ಅಗತ್ಯ ಮೂಲಭೂತ ಸೌಲಭ್ಯಗಳನ್ನು ಒಳಗೊಂಡ ಸ್ವಂತ ಕಟ್ಟಡವನ್ನು ಸಹ ನಿರ್ಮಿಸಲಾಗಿದೆ.  ವಿದ್ಯಾರ್ಥಿಗಳು ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಂಡು ಶೈಕ್ಷಣಿಕ ಪ್ರಗತಿ ಸಾಧಿಸಿದಲ್ಲಿ ಮಾತ್ರ ಕೊಡುಗೆಗಳು ಸಹ ಸಾರ್ಥಕಗೊಳ್ಳಲಿವೆ ಎಂದರು.

ಹಿರಿಯ ವಕೀಲ ಎಚ್‌.ವಿ.ರಾಮಚಂದ್ರ ಮಾತನಾಡಿ, ವಿದ್ಯಾರ್ಥಿಗಳು ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಗಳಲ್ಲೂ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಕ್ರಿಯಾತ್ಮಕತೆ ವೃದ್ಧಿಗೊಳ್ಳುವುದೇ ಅಲ್ಲದೆ ಸರ್ವತೋಮುಖ ಬೆಳವಣಿಗೆ ಹೊಂದಬಹುದಾಗಿದೆ ಎಂದು ಹೇಳಿದರು. ಈ ಸಂದರ್ಭದಲ್ಲಿ ಶಾಲೆಯ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಉಚಿತ ಬೈಸಿಕಲ್‌ ವಿತರಿಸಲಾಯಿತು.

2017ರ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳೊಂದಿಗೆ ಪೋಷಕರನ್ನು ಸಹ ಸನ್ಮಾನಿಸಲಾಯಿತು. ನಗರಸಭೆ ಅಧ್ಯಕ್ಷ ನಾರಾಯಣಸ್ವಾಮಿ, ಮಾಜಿ ಅಧ್ಯಕ್ಷ ಸಿ.ರುದ್ರಾರಾಧ್ಯ, ಸದಸ್ಯೆ ಗುಲಾಬ್‌ಜಾನ್‌, ಟೌನ್‌ ಬ್ಯಾಂಕಿನ ನಿರ್ದೇಶಕ ಸಿ.ನವೀನ್‌, ಮುಖ್ಯ ಶಿಕ್ಷಕ ಟಿ.ಎಲ್‌.ಚಂದ್ರಯ್ಯ ಭಾಗವಹಿಸಿದ್ದರು.

ಟಾಪ್ ನ್ಯೂಸ್

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Video: ಮದುವೆ ಮೆರವಣಿಗೆಯ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು

16-MGM-1

MGM: ಮಹಾತ್ಮ ಗಾಂಧಿ ಮೆಮೋರಿಯಲ್‌ ಕಾಲೇಜು; ಅಮೃತ ಮಹೋತ್ಸವ

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್‌ ಬ್ಯಾಟರ್

14-

Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Arrested: ಸರ‌, ಮನೆ ಕಳ್ಳತನ: ಇಬ್ಬರು ಆರೋಪಿಗಳ ಬಂಧನ

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft Case: ಕೆಲಸಕ್ಕಿದ್ದ ಮನೆಯಲ್ಲೇ 25 ಲಕ್ಷ ರೂ. ಚಿನ್ನ ಕದ್ದಳು!

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Theft: ಕೇರ್‌ ಟೇಕರ್‌ ಮಹಿಳೆಯಿಂದ ಕನ್ನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

Arrested: ಗಾಂಜಾ ಮಾರುತ್ತಿದ್ದ ಏರ್‌ಟೆಲ್‌ ಉದ್ಯೋಗಿ ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು

Shirasi-1

Sirasi: ಭಾರತಕ್ಕೆ ಆಮದಾಗುವ ಅಕ್ರಮ ಅಡಿಕೆಗಳಿಗೆ ತಡೆಯೊಡ್ಡಿ; ಬೆಳೆಗಾರರ ಪ್ರತಿನಿಧಿಗಳ ನಿಯೋಗ

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Jalandhara Kannada Movie: ಜಲಂಧರ ಮೇಲೆ ಪ್ರಮೋದ್‌ ಕಣ್ಣು

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Rishab Shetty: ʼಜೈ ಹನುಮಾನ್‌ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್‌ ಶೆಟ್ಟಿ?

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Kambala: ಶಿರ್ವ ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.