174 ಕ್ವಿಂಟಲ್‌ ಪಡಿತರ ವಶ

Team Udayavani, Jul 18, 2017, 1:37 PM IST

18-DV-3.gif

ಹರಿಹರ: ಬಡವರಿಗೆ ವಿತರಿಸಬೇಕಾದ ಪಡಿತರ ಧಾನ್ಯಗಳ ಅಕ್ರಮ ದಾಸ್ತಾನಿನ ಮೇಲೆ ಭಾನುವಾರ ರಾತ್ರಿ ಹಾಗೂ ಸೋಮವಾರ ಸಂಜೆ ದಾಳಿ ನಡೆಸಿರುವ ಅಧಿಕಾರಿಗಳು ಒಟ್ಟು 174 ಕ್ವಿಂಟಲ್‌ ಅನ್ನಭಾಗ್ಯ ಧಾನ್ಯ ವಶಪಡಿಸಿಕೊಂಡಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಆಹಾರ ಇಲಾಖೆ ಉಪನಿರ್ದೇಶಕ ಮಂಜುನಾಥ್‌ ಗಂಗಲ್‌ ನೇತೃತ್ವದ ತಂಡ ಭಾನುವಾರ ರಾತ್ರಿ ಕೈಗಾರಿಕಾ ಪ್ರದೇಶದ ಗೋದಾಮಿನ ಮೇಲೆ ದಾಳಿ ನಡೆಸಿದಾಗ 330 ಚೀಲ ಅಕ್ಕಿ, 14 ಚೀಲ ಗೋಧಿ ಪತ್ತೆಯಾಗಿದೆ. 2.15 ಲಕ್ಷ ಅಕ್ಕಿ, 6200 ರೂ. ಗೋಧಿ ಸೇರಿದಂತೆ ಒಟ್ಟು 15290 ಕಿಲೋ ಅನ್ನಭಾಗ್ಯ ಧಾನ್ಯಗಳನ್ನು ವಶಪಡಿಸಿಕೊಳ್ಳಲಾಗಿದೆ. ಪಡಿತರ
ಧಾನ್ಯದ ಈ ಅಕ್ರಮ ದಂದೆಕೋರ ಎನ್ನಲಾದ ಆರೋಪಿ ತಾಜುದ್ದೀನ್‌ ದಾಳಿ ವೇಳೆ ಪರಾರಿಯಾಗಿದ್ದು, ನಗರ ಠಾಣೆಯಲ್ಲಿ ದೂರು ದಾಖಲಾಗಿದೆ.

ಮನೆ ಮೇಲೂ ದಾಳಿ: ಪ್ರಭಾವಿಯಾಗಿರುವ ತಾಜುದ್ದೀನ್‌ ಮನೆಯಲ್ಲೂ ಅಕ್ರಮ ಧಾನ್ಯ ಸಂಗ್ರಹಿಸಿದ್ದಾನೆ ಎಂಬ ಮಾಹಿತಿ ಮೇರೆಗೆ ಮತ್ತೆ ಸೋಮವಾರ ಸಂಜೆ 6-30ಕ್ಕೆ ನಗರದ ಗೌಸಿಯಾ ಕಾಲೋನಿ ಮನೆ ಮೇಲೆ ದಾಳಿ ನಡೆಸಿದ ಪೊಲೀಸರಿಗೆ ಮನೆ ಎದುರಿನ ಗೋಡೌನ್‌ನಲ್ಲಿ 30 ಸಾವಿರ ರೂ ಬೆಲೆಯ, ತಲಾ 40 ಕೆ.ಜಿ.ಯ 56 ಚೀಲ ಅನ್ನಭಾಗ್ಯ ಅಕ್ಕಿ ಪತೆಯಾಗಿದ್ದು, ಜಪು¤ ಮಾಡಲಾಗಿದೆ.
ಸರ್ಕಾರ ಪಡಿತರ ಚೀಟಿದಾರರಿಗೆ ವಿತರಿಸುವ ಅಕ್ಕಿಯನ್ನು ಪಾಲೀಶ್‌ ಮಾಡಿ, ನಕಲಿ ಬ್ರಾಂಡ್‌ ಮುದ್ರಿತವಾದ ಪ್ಲಾಸ್ಟಿಕ್‌ ಚೀಲದಲ್ಲಿ ತುಂಬಿ, ಅಕ್ರಮವಾಗಿ ಮಾರಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಸಿಪಿಐ ಲಕ್ಷಣ್‌ ನಾಯ್ಕ, ಪಿಎಸ್‌ಐ ಸಿದ್ದೇಗೌಡ, ಎಎಸ್‌ಐ ಮಾರಣ್ಣ, ಆಹಾರ ನಿರೀಕ್ಷಕ ಯು.ಎಚ್‌.ರಮೇಶ್‌ ಹಾಗೂ ಸಿಬ್ಬಂದಿ ದಾಳಿಯಲ್ಲಿ ಭಾಗವಹಿಸಿದ್ದರು.

ಇದು ಎರಡನೇ ದಾಳಿ
ಕಳೆದ ಒಂದೂವರೆ ತಿಂಗಳ ಹಿಂದಷ್ಟೆ ಇದೆ ಆರೋಪಿ ತಾಜುದ್ದೀನ್‌ ಎಂಬಾತನಿಗೆ ಸೇರಿದ್ದೆನ್ನಲಾದ ನಗರದ ಲಕ್ಷ್ಮೀ ಫೌಂಡ್ರಿ ಪಕ್ಕದ ಗೋದಾಮಿನಲ್ಲಿ ದಾಳಿ ನಡೆಸಿ, ಅಂದಾಜು 2.5 ಲಕ್ಷ ಬೆಲೆಯ, 139 ಕ್ವಿಂಟಲ್‌ ಅಕ್ಕಿಯನ್ನು ಜಪ್ತಿ ಮಾಡಲಾಗಿತ್ತು. ದಾಳಿ ವೇಳೆ ತಾಜುದ್ದೀನ್‌ ಮತ್ತು ಸೈಯದ್‌ ನುರಾನ್‌ ಎಂಬುವರನ್ನು ಬಂದಿಸಲಾಗಿತ್ತಾದರೂ, ಜಾಮೀನಿನ ಮೇಲೆ ಹೊರಬಂದ ಆರೋಪಿ ಮತ್ತೆ ಅದೇ ಚಾಳಿ ಮುಂದುವರಿಸಿದ್ದಾನೆ. ಆರೋಪಿಗಳ ಹಿಂದೆ ಹೊರರಾಜ್ಯಗಳಿಗೆ ಅಕ್ರಮವಾಗಿ ಪಡಿತರ ಅಕ್ಕಿ ಮಾರಾಟ ಮಾಡುವ ದೊಡ್ಡ ಜಾಲವೇ ಇದೆ ಎಂದು ಹೇಳಲಾಗುತ್ತಿದೆ.

ಟಾಪ್ ನ್ಯೂಸ್

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

DVG-Tagaru

Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ

Renukacharya

Davanagere: ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ರಚನೆಯಾದ 3 ತಂಡಗಳೇ ಅಧಿಕೃತ: ರೇಣುಕಾಚಾರ್ಯ

8-

ಸಹಕಾರ ಭಾರತಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಸಾಣೂರು ನರಸಿಂಹ ಕಾಮತ್ ಆಯ್ಕೆ

Waqf Protest: People will overthrow the state government: Protest in Davangere

Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

Govt Hospital: ಡಿ ಗ್ರೂಪ್‌ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್‌ ಗುಂಡೂರಾವ್‌

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

3

Mangaluru: ಕಾಂಡ್ಲಾವನ ಮರೆತ ಸರಕಾರ!; ಅನುದಾನ ಬಾರದೆ ಯೋಜನೆ ಬಾಕಿ

3-vitla

Vitla-ಉಕ್ಕುಡ -ಪಡಿಬಾಗಿಲು ಅಂತರ್ ರಾಜ್ಯ ಹೆದ್ದಾರಿಯ ಅವ್ಯವಸ್ಥೆ: ರಸ್ತೆ ತಡೆದು ಪ್ರತಿಭಟನೆ

9

Renukaswamy Case: ದರ್ಶನ್‌ ಜಾಮೀನಿಗೆ ಪ್ರಬಲ ವಾದ; ಸಂಜೆ 4ಗಂಟೆಗೆ ಮತ್ತೆ ವಿಚಾರಣೆ

2-thirthahalli

Thirthahalli: ತುಂಗಾ ಕಮಾನು ಸೇತುವೆ ಕೆಳಗೆ ಅಸ್ತಿ ಪಂಜರ ಪತ್ತೆ

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

RBI ಗವರ್ನರ್‌ ಶಕ್ತಿಕಾಂತ್‌ ದಾಸ್‌‌ ಚೆನ್ನೈ ಆಸ್ಪತ್ರೆಗೆ ದಾಖಲು; ಶೀಘ್ರವೇ ಡಿಸ್‌ ಚಾರ್ಜ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.