ಸಕ್ರಿಯ ಕ್ಷಯರೋಗ ಪತ್ತೆ-ಚಿಕಿತ್ಸೆ ಆಂದೋಲನಕ್ಕೆ ಚಾಲನೆ
Team Udayavani, Jul 18, 2017, 3:02 PM IST
ರಾಯಚೂರು: ಸರ್ಕಾರದಿಂದ ಹಮ್ಮಿಕೊಂಡಿರುವ ಸಕ್ರಿಯ ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ ಆಂದೋಲನ ಬಡ ಜನರಿಗೆ ತಲುಪಬೇಕು. ಆ ಮೂಲಕ ಅವರಿಗೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು ಎಂದು ನಗರಸಭೆ ಅಧ್ಯಕ್ಷೆ ಹೇಮಲತಾ ಬೂದಪ್ಪ ಹೇಳಿದರು.
ನಗರದ ಹರಿಜನವಾಡದ ಆರೋಗ್ಯ ಕೇಂದ್ರದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಂಡಿದ್ದ ಸಕ್ರಿಯ ಕ್ಷಯರೋಗ ಪತ್ತೆ ವತ್ತು ಚಿಕಿತ್ಸೆ ಆಂದೋಲನಕ್ಕೆ ಸೋಮವಾರ ಚಾಲನೆ ನೀಡಿ ಅವರು ಮಾತನಾಡಿದರು.
ಕ್ಷಯರೋಗದ ಕುರಿತು ಜನರಲ್ಲಿ ಜಾಗೃತಿ ಮೂಡಿಸಬೇಕು. ಬಡವರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು. ಕ್ಷಯ ರೋಗದ ಲಕ್ಷಣಗಳು ಗೋಚರಿಸಿದಲ್ಲಿ ತಕ್ಷಣವೇ ಸಮೀಪದ ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗದ
ಅಂಶಗಳಿದ್ದಲ್ಲಿ ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.
ಜಿಲ್ಲಾ ಕ್ಷಯರೋಗ ನಿವಾರಣಾಧಿಕಾರಿ ಡಾ| ಸುರೇಂದ್ರಬಾಬು ಮಾತನಾಡಿ, ಜಿಲ್ಲೆಯಲ್ಲಿ ಈ ಆಂದೋಲನ ಜು.31ರವರೆಗೆ
ನಡೆಯಲಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಮಾರ್ಗಸೂಚಿ ಅನ್ವಯ ಜಿಲ್ಲೆಯ ಜನಸಂಖ್ಯೆಯ ಶೇ.10-15ರಷ್ಟು ಅಂದರೆ
2,36,787 ಜನರನ್ನು ಮತ್ತು 208 ಪ್ರದೇಶಗಳನ್ನು ಆಯ್ಕೆ ಮಾಡಿಕೊಳ್ಳಲಾಗಿದೆ. ಸಮೀಕ್ಷೆಗಾಗಿ 304 ತಂಡ ರಚಿಸಲಾಗಿದೆ
ಎಂದು ವಿವರಿಸಿದರು.
ತಂಡದಲ್ಲಿ ಆರೋಗ್ಯ ಕಾರ್ಯಕರ್ತರು, ಅಂಗನವಾಡಿ, ಆಶಾ ಕಾರ್ಯಕರ್ತೆಯರು ಮತ್ತು ಸ್ವಯಂ ಸೇವಾ ಸಂಸ್ಥೆಗಳ ಸದಸ್ಯರು
ಪಾಲ್ಗೊಳ್ಳುವರು ಎಂದು ಹೇಳಿದರು. ಕಾರ್ಯಕರ್ತರು ಮನೆ ಮನೆಗೆ ಭೇಟಿ ನೀಡಿದಾಗ ಮನೆಯಲ್ಲಿ ವಾಸಿಸುವ ಎಲ್ಲರೂ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗದ ಲಕ್ಷಣ ಕಂಡುಬಂದಲ್ಲಿ ರಕ್ತದ ಮಾದರಿ ಪರೀಕ್ಷೆ ಮಾಡಿಸಿದಲ್ಲಿ ಚಿಕಿತ್ಸೆ ನೀಡಲು ಅನುಕೂಲವಾಗುತ್ತದೆ. ರಕ್ತದಲ್ಲಿ ನಕಾರಾತ್ಮಕ ಅಂಶಗಳು ರೋಗಿಗಳಿಗೆ ಮುಂದಿನ ಹಂತವಾಗಿ ಎಕ್ಸ್‌ರೇ ಮತ್ತು ಸಿಬಿನ್ಯಾಟ್ ಪರೀಕ್ಷೆ ಮಾಡಿಸಲಾಗುವುದು ಎಂದು ವಿವರಿಸಿದರು. ಡಿಎಚ್‌ಒ ಡಾ| ಎಂ.ಕೆ.ನಸೀರ್ ಅಧ್ಯಕ್ಷತೆ ವಹಿಸಿದ್ದರು. ಅನುಷ್ಠಾನಾಧಿಕಾರಿ ಡಾ| ನಾಗರಾಜ, ಡಾ| ಗಣೇಶ, ಡಾ| ಶಿವಕುಮಾರ, ಪ್ರಭಾರ ತಾಲೂಕು ಆರೋಗ್ಯ ಅಧಿಕಾರಿ ಡಾ| ಮಲ್ಲಿಕಾರ್ಜುನ ಗೌಡ, ರಾಮಸ್ವಾಮಿ ಸೇರಿ ಇಲಾಖೆ ಸಿಬ್ಬಂದಿ ಸೇರಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Adani ವಿದ್ಯುತ್ ಖರೀದಿ ಅಕ್ರಮ: ಆರೋಪ ತಳ್ಳಿ ಹಾಕಿದ ಜಗನ್ ರೆಡ್ಡಿ
Mangaluru: ಗಾಂಜಾ ಸೇವನೆ; ಪ್ರತ್ಯೇಕ ಪ್ರಕರಣ; ಇಬ್ಬರು ವಶಕ್ಕೆ
IFFI 2024; ಟಾಕ್ಸಿಕ್ ಗೆ ಅತ್ಯುತ್ತಮ ಪ್ರಶಸ್ತಿ, ವಿಕ್ರಾಂತ್ ಮಸ್ಸೆಗೆ ವಾರ್ಷಿಕ ಪುರಸ್ಕಾರ
Kasaragod: ಕಾರು ಢಿಕ್ಕಿ ಹೊಡೆಸಿ ವ್ಯಾಪಾರಿಯ 2 ಕೆಜಿ ಚಿನ್ನ ದರೋಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.