“1,205 ಮನೆಗಳಿಗೆ ಶೀಘ್ರ ವಿದ್ಯುತ್ ಸಂಪರ್ಕ’
Team Udayavani, Jul 19, 2017, 3:10 AM IST
ಬೆಳ್ತಂಗಡಿ: ತಾಲೂಕಿನಲ್ಲಿ ವಿದ್ಯುತ್ ರಹಿತ ಮನೆಗಳೆಂದು 1,205 ಮನೆಗಳನ್ನು ಗುರುತಿಸಲಾಗಿದ್ದು 35 ಪಂಚಾಯತ್‌ಗಳಲ್ಲಿ ಸರ್ವೆ ನಡೆಸಲಾಗಿದೆ. ಅತಿ ಶೀಘ್ರದಲ್ಲಿ ಈ ಮನೆಗಳಿಗೆ ವಿದ್ಯುತ್ ಸಂಪರ್ಕ ಮಾಡಲಾಗುವುದು ಎಂದು ಮೆಸ್ಕಾಂ ಎಇಇ ಶಿವಶಂಕರ್ ಪ್ರತಿಕ್ರಿಯಿಸಿದ್ದಾರೆ.
ಮಂಗಳವಾರ ಇಲ್ಲಿನ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶಾಸಕ ಕೆ. ವಸಂತ ಬಂಗೇರ ಅಧ್ಯಕ್ಷತೆಯಲ್ಲಿ ನಡೆದ ತ್ತೈಮಾಸಿಕ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಶಾಸಕರ ಪ್ರಶ್ನೆಗೆ ಅಭಿವೃದ್ಧಿಯ ಮಾಹಿತಿ ನೀಡಿದರು.
ಶೇ. 95 ಪಠ್ಯಪುಸ್ತಕಗಳು ಬಂದಿವೆ.
ಸೈಕಲ್ ಹಾಗೂ ಸಮವಸ್ರ 100 ಶೇ. ಬಂದಿದ್ದು ಸೈಕಲ್‌ಗಳ ಜೋಡಣೆ ನಡೆಯುತ್ತಿದೆ. ಎಸೆಸೆಲ್ಸಿ ಫಲಿತಾಂಶದಲ್ಲಿ ಬೆಳ್ತಂಗಡಿಯು ದ.ಕ. ಜಿಲ್ಲೆಗೆ ಎರಡನೆ ಸ್ಥಾನ ಪಡೆದಿದೆ. 70 ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ. 20 ಶಾಲೆಗಳಿಗೆ ಆವರಣ ಗೋಡೆ ರಚನೆಗೆ ನರೇಗಾ ಯೋಜನೆಯಲ್ಲಿ ಅನುದಾನ ನೀಡಲಾಗಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಗುರುಪ್ರಸಾದ್ ಹೇಳಿದರು.
ಕೆಎಸ್‌ಆರ್‌ಟಿಸಿ ಡಿಪೋ
ಕೆಎಸ್‌ಆರ್‌ಟಿಸಿ ಡಿಪೋ ಮಾಡಲು ಉಜಿರೆ ಬಳಿಯ ಜಾಗದ ಕುರಿತು ತಾಲೂಕು ಕಚೇರಿ ಮೂಲಕ ಅರಣ್ಯ ಇಲಾಖೆಯಿಂದ ನಕ್ಷೆ ಕೇಳಲಾಗಿದೆ. ದೊರೆತ ಅನಂತರ ಪ್ರಕ್ರಿಯೆ ಮುಂದುವರಿಸಲಾಗುವುದು ಎಂದು ಕೆಎಸ್‌ಆರ್‌ಟಿಸಿ ಧರ್ಮಸ್ಥಳ ಡಿಪೋದವರು ಉತ್ತರಿಸಿದರು. ಮಂಗಳೂರಿಗೆ ಧರ್ಮಸ್ಥಳದಿಂದ ಹಾಗೂ ಮಂಗಳೂರಿನಿಂದ ರಾತ್ರಿ 8ರ ಅನಂತರ ಬಸ್ ಸೌಲಭ್ಯ ಬೇಕು. ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ ಎಂದು ಜಿ.ಪಂ. ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ ಮಮತಾ ಎಂ. ಶೆಟ್ಟಿ ಹೇಳಿದರು.
ಕೊಕ್ಕಡ ಪಶು ವೈದ್ಯಕೀಯ ಆಸ್ಪತ್ರೆ ವೈದ್ಯಾಧಿಕಾರಿಯನ್ನು ಬದಲಾಯಿಸಬೇಕು ಎಂದು ಕೊರಗಪ್ಪ ನಾಯ್ಕ ಒತ್ತಾಯಿಸಿದರು. ಈ ಬಗ್ಗೆ ಇಲಾಖೆಯ ತಾಲೂಕು ಸಹಾಯಕ ನಿರ್ದೇಶಕ ಡಾ| ರತ್ನಾಕರ ಮಲ್ಯರಿಗೆ ಶಾಸಕರು ಸೂಚನೆ ನೀಡಿದರು.
ಟ್ರಾಫಿಕ್ ಜಾಮ್ ಕಿರಿಕಿರಿ
ಗುರುವಾಯನಕೆರೆಯಿಂದ ಬೆಳ್ತಂಗಡಿವರೆಗೆ ಟ್ರಾಫಿಕ್ ಜಾಮ್ ಕಿರಿಕಿರಿ ನಿತ್ಯ ನಿರಂತರವಿದೆ. ಗುರುವಾಯನಕೆರೆ, ಬೆಳ್ತಂಗಡಿ, ಉಜಿರೆಯಲ್ಲಿ ಪೊಲೀಸ್ ಸಿಬಂದಿ ನಿಯೋಜಿಸಿ ರಸ್ತೆಯಲ್ಲೇ ವಾಹನ ನಿಲ್ಲಿಸಿ ಪ್ರಯಾಣಿಕರನ್ನು ಇಳಿಸುವ ವಾಹನಗಳಿಗೆ ದಂಡ ವಿಧಿಸಬೇಕು ಎಂದು ಶಾಸಕರು ಪೊಲೀಸ್ ಇಲಾಖೆಗೆ ಸೂಚಿಸಿದರು. ಕಲ್ಲಡ್ಕ ಗಲಭೆ ಪ್ರಯುಕ್ತ ಪೊಲೀಸರು ಹೆಚ್ಚುವರಿ ಕರ್ತವ್ಯದಲ್ಲಿರುವ ಕಾರಣ ಇಲ್ಲಿ ಸಿಬಂದಿಗಳ ಕೊರತೆ ಇದೆ ಎಂದು ಪೊಲೀಸ್ ಸಹಾಯಕ ಉಪನಿರೀಕ್ಷಕರು ಉತ್ತರಿಸಿದರು.
ತಾ.ಪಂ. ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ಜಿ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸಾಹುಲ್ ಹಮೀದ್. ತಾ.ಪಂ. ಸ್ಥಾಯೀ ಸಮಿತಿ ಅಧ್ಯಕ್ಷ ಸುಧೀರ್ ಆರ್. ಸುವರ್ಣ, ತಹಶೀಲ್ದಾರ್ ತಿಪ್ಪೆಸ್ವಾಮಿ,. ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಗುರುಪ್ರಸಾದ್ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.