ಅಕ್ರಮ ತ್ಯಾಜ್ಯ: ಎರಡು ಲಾರಿ ಪೊಲೀಸ್ ವಶಕ್ಕೆ
Team Udayavani, Jul 19, 2017, 2:20 AM IST
ಹಳೆಯಂಗಡಿ: ಇಲ್ಲಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಹಳೆಯಂಗಡಿಯಲ್ಲಿ ಅಕ್ರಮವಾಗಿ ತ್ಯಾಜ್ಯವನ್ನು ಸುರಿಯುತ್ತಿದ್ದ ಎರಡು ಲಾರಿಗಳನ್ನು ಹಳೆಯಂಗಡಿ ಗ್ರಾಮ ಪಂಚಾಯತ್ ಆಡಳಿತವು ಪೊಲೀಸರಿಗೆ ಹಸ್ತಾಂತರಿಸಿದ ಘಟನೆ ನಡೆದಿದೆ.
ಉದಯವಾಣಿಯ ಸುದಿನದಲ್ಲಿ ಜು. 16ರಂದು ಪ್ರಕಟಗೊಂಡ ವರದಿಯ ಹಿನ್ನೆಲೆಯಲ್ಲಿ ಕಾರ್ಯಾಚರಣೆ ನಡೆಸಿದ
ಪಿಡಿಒ ಅಬೂಬಕ್ಕರ್, ಕೆಎ 19ಎಂಡಿ 3266 ಹಾಗೂ ಕೆಎ 19 ಡಿ 2735 ನಂಬರಿನ ಲಾರಿಗಳು ತ್ಯಾಜ್ಯವನ್ನು ಸುರಿಯುತ್ತಿದ್ದ ಛಾಯಾಚಿತ್ರವನ್ನು ಸೆರೆಹಿಡಿದು, ಮೂಲ್ಕಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಹಿನ್ನೆಲೆಯಲ್ಲಿ ಅವುಗಳ ವಿರುದ್ಧ ಮೂಲ್ಕಿಯಲ್ಲಿ ಪ್ರಕರಣ ದಾಖಲಾಗಿದೆ.
ಇಂತಹ ಅಕ್ರಮಗಳನ್ನು ನಡೆಸುತ್ತಿದ್ದಾಗ ಸಾರ್ವಜನಿಕರು ತತ್ಕ್ಷಣ ಪಂಚಾಯತ್ಗೆ ಮಾಹಿತಿ ನೀಡಬೇಕು ಹಾಗೂ ಹೆದ್ದಾರಿಯ ರಸ್ತೆ ಬದಿಯಲ್ಲಿ ಅಕ್ರಮವಾಗಿ ಕಸವನ್ನು ಬಿಸಾಡುವವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮವನ್ನು ಜರಗಿಸಲು ಸಹಕಾರ ನೀಡಬೇಕು ಎಂದು ಹಳೆಯಂಗಡಿ ಗ್ರಾ.ಪಂ. ಅಧ್ಯಕ್ಷೆ ಜಲಜಾ ವಿನಂತಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.