ವರ್ಷಾಂತ್ಯಕ್ಕೆ ವಿಶ್ವ ಕನ್ನಡ ಸಮ್ಮೇಳನ
Team Udayavani, Jul 19, 2017, 4:30 AM IST
ಬೆಂಗಳೂರು: ದಾವಣಗೆರೆಯಲ್ಲಿ ಮೂರನೇ ವಿಶ್ವ ಕನ್ನಡ ಸಮ್ಮೇಳನ ಈ ವರ್ಷಾಂತ್ಯಕ್ಕೆ ನಡೆಸಲು ರಾಜ್ಯ ಸರಕಾರ ತೀರ್ಮಾನಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಮಂಗಳವಾರ ವಿಧಾನಸೌಧ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸಭೆಯಲ್ಲಿ, ರಾಜ್ಯದಲ್ಲಿ ಬರ ಇರುವುದರಿಂದ ಸಮ್ಮೇಳನ ಅಗತ್ಯ ಇದೆಯೇ? ಮುಂದೂಡಬಹುದಲ್ಲವೇ ಎಂಬ ಪ್ರಶ್ನೆಯೂ ಕೇಳಿ ಬಂತಾದರೂ ಅಂತಿಮವಾಗಿ ನಾಡು – ನುಡಿ, ಸಂಸ್ಕೃತಿಯ ರಕ್ಷಣೆ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಒಪ್ಪಿಗೆ ದೊರೆಯಿತು. ಡಿಸೆಂಬರ್ ಮೊದಲನೇ ಅಥವಾ ಎರಡನೇ ವಾರದಲ್ಲಿ ಸಮ್ಮೇಳನ ನಡೆಯಲಿದ್ದು, ಭಾರತರತ್ನ ಸಿ.ಎನ್. ರಾವ್ ಅವರಿಂದ ಸಮ್ಮೇಳನ ಉದ್ಘಾಟನೆ ಮಾಡಿಸಬೇಕು ಎಂಬ ಒತ್ತಾಯ ಸಭೆಯಲ್ಲಿ ಕೇಳಿ ಬಂದಿದ್ದು, ಸರಕಾರ ಆ ಬಗ್ಗೆ ಇನ್ನೂ ತೀರ್ಮಾನ ಕೈಗೊಂಡಿಲ್ಲ.
ಸಭೆ ಬಳಿಕ ಪತ್ರಕರ್ತರ ಜತೆ ಮಾತನಾಡಿದ ಕನ್ನಡ ಮತ್ತು ಸಂಸ್ಕೃತಿ ಸಚಿವೆ ಉಮಾಶ್ರಿ, ಈ ವರ್ಷದ ಕೊನೆಯಲ್ಲಿ ವಿಶ್ವ ಕನ್ನಡ ಸಮ್ಮೇಳನ ನಡೆಸಲು ಸರಕಾರ ನಿರ್ಧರಿಸಿದೆ ಎಂದರು. ಸಮ್ಮೇಳನ ನಡೆಸಲು ಸಾಹಿತಿ-ಚಿಂತಕರು ವಿರೋಧ ವ್ಯಕ್ತಪಡಿಸಿಲ್ಲ. ಆದರೆ, ಬರ ಬಗ್ಗೆ ಪ್ರಸ್ತಾವಿಸಿದರು. ಆದರೆ, ನಾಡು – ನುಡಿ ರಕ್ಷಣೆ ವಿಚಾರದಲ್ಲಿ ಸರಕಾರದ ತೀರ್ಮಾನಕ್ಕೆ ಬದ್ಧ ಎಂದು ತಿಳಿಸಿದರು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dinner Meeting: ಸಭೆ ಮಾಡಬೇಡಿ ಎನ್ನಲು ಇವರೇನು ಪರಿಶಿಷ್ಟ ಸಮುದಾಯದ ವಿರೋಧಿಗಳಾ?: ಸಚಿವ
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Raichur: ಮೂರೂ ದಶಕಗಳ ಬಳಿಕ ನಕ್ಸಲ್ ಮಾರೆಪ್ಪ ಅರೋಳಿ ಶರಣಾಗತಿ… ಕುಟುಂಬದಲ್ಲಿ ಖುಷಿ
ಹೈಕಮಾಂಡ್ ಸೂಚನೆಗೆ ಔತಣಕೂಟ ಮುಂದಕ್ಕೆ ಹಾಕಿದ್ದೇವೆ, ರದ್ದು ಮಾಡಿಲ್ಲ: ಜಿ.ಪರಮೇಶ್ವರ್
ಅಂತಾರಾಜ್ಯ ಮಕ್ಕಳ ಮಾರಾಟ ಜಾಲ ಪತ್ತೆ… 4.50 ಲಕ್ಷಕ್ಕೆ ಗೋವಾಕ್ಕೆ ಮಾರಿದ್ದ ಮಗುವಿನ ರಕ್ಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.