ಮಹಿಳಾ ಮೀಸಲಾತಿ ಮಸೂದೆ: ಮೋದಿಗೆ ಗೌಡರಿಂದ ಪತ್ರ
Team Udayavani, Jul 19, 2017, 4:20 AM IST
ಬೆಂಗಳೂರು: ಮಹಿಳಾ ಮೀಸಲಾತಿ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಮುಂದಾಗುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. 1996ರಲ್ಲಿ ನಾನು ಪ್ರಧಾನಿಯಾಗಿದ್ದಾಗ ಮಹಿಳಾ ಮೀಸಲಾತಿ ಮಸೂದೆ ಸಂಸತ್ನ ಮುಂದೆ ತಂದಿದ್ದೆ. ಆದರೆ, ಲೋಕಸಭೆಯಲ್ಲಿ ಅಂಗೀಕಾರವಾಗಲಿಲ್ಲ. 2010ರಲ್ಲಿ ರಾಜ್ಯಸಭೆಯಲ್ಲಿ ಅಂಗೀಕಾರವಾಯಿತು. ಅಟಲ್ ಬಿಹಾರಿ ವಾಜಪೇಯಿ ಅವರು ಪ್ರಧಾನಿಯಾಗಿದ್ದಾಗ ಮಸೂದೆ ಲೋಕಸಭೆಯಲ್ಲಿ ಅಂಗೀಕಾರಕ್ಕೆ ಪ್ರಯತ್ನಪಟ್ಟರು. ಆದರೆ, ಅದು ಫಲ ನೀಡಲಿಲ್ಲ. 21 ವರ್ಷ ಆದರೂ ಮಸೂದೆ ಅಂಗೀಕಾರವಾಗಿಲ್ಲ. ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರ ಮಾಡುವಂತೆ ನಿಮ್ಮಲ್ಲಿ ಮನವಿ ಮಾಡುತ್ತೇನೆ ಎಂದು ಪತ್ರದಲ್ಲಿ ಕೋರಿದ್ದಾರೆ. ನಮ್ಮ ಪಕ್ಷ ಮಹಿಳೆಯರ ಹಕ್ಕಿಗೆ ಹೆಚ್ಚಿನ ಮಹತ್ವ ನೀಡಿದೆ. ರಾಜ್ಯದಲ್ಲಿ, ಲೋಕಸಭೆಯಲ್ಲಿ ಶೇ. 33ರಷ್ಟು ಮಹಿಳಾ ಮೀಸಲಾತಿ ನೀಡಲು ನೀವು ಪ್ರಯತ್ನ ಪಡುತ್ತೀರಾ ಎಂದು ನಂಬಿದ್ದೇನೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
Bidar: ಬಂದ್ಗೆ ಉತ್ತಮ ಪ್ರತಿಕ್ರಿಯೆ… ಸಾರಿಗೆ ಸಂಚಾರ ಸ್ಥಗಿತ, ಅಂಗಡಿ ಮುಂಗಟ್ಟು ಬಂದ್
Hubballi: ಸಂಪೂರ್ಣ ಬಂದ್… ರಸ್ತೆಗಿಳಿದ ವಾಹನಗಳ ಚಕ್ರದ ಗಾಳಿ ತೆಗೆದು ಪ್ರತಿಭಟನೆ
Naxal Activity Calm: ಪಶ್ಚಿಮ ಘಟ್ಟದ ಕಾನನದಲ್ಲಿ ನಕ್ಸಲ್ ನಿಶ್ಶಬ್ದ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.