ರಾಜ್ಯ ಸಂಚಾರ-ರಸ್ತೆಸುರಕ್ಷತಾ ವಿಭಾಗ:ಡಿಐಜಿಯಾಗಿ ರೂಪಾ ಅಧಿಕಾರಸ್ವೀಕಾರ


Team Udayavani, Jul 19, 2017, 6:00 AM IST

Roopa-D-Moudgil-600.jpg

ಬೆಂಗಳೂರು: ಪರಪ್ಪನ ಅಗ್ರಹಾರ ಕಾರಾಗೃಹದ ಅಕ್ರಮಗಳನ್ನು ಬಯಲಿಗೆಳೆದು ಸರಕಾರದ ಕೆಂಗಣ್ಣಿಗೆ ಗುರಿಯಾಗಿ ವರ್ಗಾವಣೆಯಾದ ಹಿರಿಯ ಐಪಿಎಸ್‌ ಅಧಿಕಾರಿ ರೂಪಾ ಡಿ. ಮೌದ್ಗಿಲ್‌ ಮಂಗಳವಾರ ರಾಜ್ಯ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗ ಡಿಐಜಿಯಾಗಿ ಅಧಿಕಾರ ಸ್ವೀಕರಿಸಿದರು. ಅಪರಾಹ್ನ 1.30ರ ಸುಮಾರಿಗೆ ನೃಪತುಂಗ ರಸ್ತೆ ಯಲ್ಲಿರುವ ಪೊಲೀಸ್‌ ಪ್ರಧಾನ ಕಚೇರಿ ಆವರಣದಲ್ಲಿರುವ ಕಚೇರಿಗೆ ಆಗಮಿಸಿದ ರೂಪಾ, ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಆರ್‌.ಕೆ. ದತ್ತಾ ಅವರನ್ನು ಭೇಟಿಯಾಗಿ ಕೆಲವು ಕಾಲ ಚರ್ಚೆ ನಡೆಸಿದರು. ಬಳಿಕ ತಮ್ಮ ಕೊಠಡಿಗೆ ತೆರಳಿ ಅಧಿಕಾರ ವಹಿಸಿಕೊಂಡರು.

ಪತ್ರಕರ್ತರೊಂದಿಗೆ ಮಾತನಾಡಿದ ರೂಪಾ, ಇಲ್ಲಿ ಭಾವನೆಗಳ ಪ್ರಶ್ನೆ ಉದ್ಭವಿಸುವುದಿಲ್ಲ. ಸರಕಾರದ ಆದೇಶವನ್ನು ಪಾಲಿಸುವುದು ನಮ್ಮ ಕರ್ತವ್ಯ. ಪೊಲೀಸ್‌ ಇಲಾಖೆಯಲ್ಲಿ ಒಳ್ಳೆಯ ವಿಭಾಗ, ಕೆಟ್ಟ ವಿಭಾಗ ಎಂಬುದಿಲ್ಲ. ಎಲ್ಲವೂ ಒಳ್ಳೆಯ ವಿಭಾಗಗಳೇ. ಸರಕಾರ ನೀಡಿರುವ ವರ್ಗಾವಣೆಯನ್ನು ಶಿಕ್ಷೆ ಎಂದು ಪರಿಗಣಿಸುವುದಿಲ್ಲ. ಇದೊಂದು ಸಾಮಾನ್ಯ ಪ್ರಕ್ರಿಯೆ. ಅದನ್ನು ಪಾಲಿಸಿದ್ದೇನೆ ಅಷ್ಟೆ ಎಂದರು.

ಮೇಘರಿಕ್‌ ಅಧಿಕಾರ ಸ್ವೀಕಾರ
ಬಂಧೀಖಾನೆ ಇಲಾಖೆಯ ಎಡಿಜಿಪಿಯಾಗಿ ಹಿರಿಯ ಐಪಿಎಸ್‌ ಅಧಿಕಾರಿ ಎನ್‌.ಎಸ್‌. ಮೇಘರಿಕ್‌ ಮಂಗಳವಾರ ಮಧ್ಯಾಹ್ನ ಅಧಿಕಾರ ಸ್ವೀಕರಿಸಿದರು. ಜೈಲಿನ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂಬ ಆರೋಪದ ಮೇಲೆ ವರ್ಗಾವಣೆಗೊಂಡ ಡಿಜಿ ಎಚ್‌.ಎನ್‌. ಸತ್ಯನಾರಾಯಣ ರಾವ್‌ ಅವರು ಮೇಘರಿಕ್‌ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಅನಂತರ ಇಬ್ಬರು ಅಧಿಕಾರಿಗಳು ಅರ್ಧ ಗಂಟೆಗೂ ಅಧಿಕ ಕಾಲ ಸಮಾಲೋಚನೆ ನಡೆಸಿದರು.

ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಎನ್‌.ಎಸ್‌. ಮೇಘರಿಕ್‌, ಸರಕಾರದ ಆದೇಶದಂತೆ ಅಧಿಕಾರ ಸ್ವೀಕರಿಸಿದ್ದೇನೆ. ಜತೆಗೆ ಇದೇ ಪರಪ್ಪನ ಅಗ್ರಹಾರ ಕಾರಾಗೃಹದ ಹಿರಿಯ ಐಪಿಎಸ್‌ ಅಧಿಕಾರಿಗಳ ನೇತೃತ್ವದ ಸಮಿತಿಯ ಸದಸ್ಯನಾಗಿದ್ದೆ. ಹೀಗಾಗಿ ಕಾರಾಗೃಹ ಇಲಾಖೆಯ ಕಾರ್ಯವೈಖರಿ ಬಗ್ಗೆ ಸ್ವಲ್ಪ ಮಟ್ಟಿಗೆ ಅನುಭವ ಇದೆ. ಕಾರಾಗೃಹದಲ್ಲಿ ನಡೆದ ಅಕ್ರಮದ ಬಗ್ಗೆ ಮಾಹಿತಿ ಇದೆ. ಅಕ್ರಮದ ಬಗ್ಗೆ ಈಗಾಗಲೇ ನಿವೃತ್ತ ಐಎಎಸ್‌ ಅಧಿಕಾರಿ ವಿನಯ್‌ ಕುಮಾರ್‌ ತನಿಖೆ ನಡೆಸುತ್ತಿದ್ದು, ಅವರಿಗೆ ಸಹಕರಿಸುತ್ತೇನೆ ಎಂದರು.

ರೂಪಾ ಜಾಗಕ್ಕೆ ಎಚ್‌.ಎಸ್‌. ರೇವಣ್ಣ ನೇಮಕ
ರೂಪಾ ಡಿ. ಮೌದ್ಗಿಲ್‌ ಅವರ ಜಾಗಕ್ಕೆ ಹಿರಿಯ ಐಪಿಎಸ್‌ ಅಧಿಕಾರಿ ಡಿಐಜಿ ಎಚ್‌.ಎಸ್‌. ರೇವಣ್ಣ ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಿಸಿದೆ. ಇದರೊಂದಿಗೆ ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯಅಧೀಕ್ಷರಾಗಿಯೂ ಹೆಚ್ಚುವರಿ ಹೊಣೆ ನೀಡಲಾಗಿದೆ. ಈ ಮಧ್ಯೆ ಜೈಲಿನ ಅಧೀಕ್ಷಕಿ ಅನಿತಾ ಮಂಗಳವಾರ ಮುಖ್ಯ ಅಧೀಕ್ಷಕರಾಗಿ ಹೆಚ್ಚುವರಿ ಅಧಿಕಾರ ಸ್ವೀಕರಿಸಿದರು.

ಟಾಪ್ ನ್ಯೂಸ್

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ

IPL 2024: Pant has the ambition to become India’s cricket captain: Parth Jindal

IPL 2025: ಭಾರತ ಕ್ರಿಕೆಟ್‌ ನಾಯಕನಾಗುವ ಉದ್ದೇಶ ಪಂತ್‌ ಗಿದೆ: ಜಿಂದಾಲ್‌

Sambhal Mosque Survey: ಶಾಹಿ ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್

8-I-phone

Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್‌ ಭರಾಟೆ ಬಲು ಜೋರು

Jammu Kashmir: Big plan fails; Army destroys terrorist hideout

Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?

yadiyurappa

B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?

hk-patil

Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್‌

Farmer

Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್‌ ಇಳುವರಿ!

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

13-

Bengaluru: ಶಾಲೆ ಮುಖ್ಯಸ್ಥನ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ

12-bng

Bengaluru: ಬೈಕ್‌ ಡಿಕ್ಕಿ: ರಾತ್ರಿಯಿಡೀ ರಸೇಲಿ ನರಳಿ ವ್ಯಕ್ತಿ ಸಾವು

11-fir

Bengaluru: ಪಾದಚಾರಿ ಮಾರ್ಗದಲ್ಲಿ ಕಾರು ಚಾಲನೆ: ಕೇಸ್‌ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.