ಕೊಡಗು ಜಿಲ್ಲೆ ಭಾರೀ ಗಾಳಿ ಮಳೆ ಭಾಗಮಂಡಲ ನೀರಿನ ಹರಿವು ಹೆಚ್ಚಳ
Team Udayavani, Jul 19, 2017, 3:25 AM IST
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಸೋಮವಾರದಿಂದ ಭಾರೀ ಗಾಳಿ – ಮಳೆಯಾಗುತ್ತಿದ್ದು, ಜೀವನದಿ ಕಾವೇರಿಯ ಒಡಲು ಮತ್ತೆ ತುಂಬಲಾರಂಭಿಸಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ರಸ್ತೆ ಜಲಾವೃತಗೊಳ್ಳುವ ಸಾಧ್ಯತೆಗಳಿವೆ.
ಭಾಗಮಂಡಲ ಮತ್ತು ತಲಕಾವೇರಿ ಪರಿಸರದಲ್ಲಿ ಸುರಿಯುತ್ತಿರುವ ಧಾರಾ ಕಾರ ಮಳೆಯಿಂದಾಗಿ ತ್ರಿವೇಣಿ ಸಂಗಮದ ಸ್ನಾನಘಟ್ಟದ ಮೆಟ್ಟಿಲು ಗಳು ಜಲಾವೃತವಾಗಿವೆ; ನದಿ ದಂಡೆಯ ವಸ್ತ್ರ ಬದಲಿಸುವ ಕಟ್ಟಡದ ಸುತ್ತ ಪ್ರವಾಹದ ನೀರು ಆವರಿಸಿ ಕೊಂಡಿದೆ. ಕಳೆದ 24 ಗಂಟೆಗಳ ಅವಧಿ ಯಲ್ಲಿ ಕ್ಷೇತ್ರದ ಪರಿಸರದಲ್ಲಿ 3ರಿಂದ 4 ಇಂಚು ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಮಳೆಯ ಬಿರುಸು ಇದೇ ರೀತಿ ಮುಂದುವರಿದಲ್ಲಿ ಭಾಗಮಂಡಲದ ಮಡಿಕೇರಿ ಮತ್ತು ಅಯ್ಯಂಗೇರಿ ರಸ್ತೆ ಗಳು ಜಲಾವೃತಗೊಳ್ಳುವ ಸಾಧ್ಯತೆ ಗಳಿವೆ. ಸೋಮವಾರ ಸಂಜೆ ಯಿಂದ ಆರಂಭ ಗೊಂಡಿ ರುವ ಮಳೆ ಮಂಗಳ ವಾರವೂ ಮುಂದುವರಿದಿದ್ದು, ಭಾಗ ಮಂಡಲ ಸುತ್ತಮುತ್ತಲ ಶಾಲೆಗಳಿಗೆ ಮಂಗಳವಾರ ಮಧ್ಯಾಹ್ನದ ಬಳಿಕ ರಜೆ ಘೋಷಿಸಲಾಯಿತು.
ಜಿಲ್ಲಾ ಕೇಂದ್ರ ಸೇರಿದಂತೆ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಮಡಿಕೆೇರಿಯಲ್ಲಿ ಕುಳಿರ್ಗಾಳಿಯೊಂದಿಗೆ ಬಿರುಮಳೆ ಯಾಗುತ್ತಿದ್ದು, ಕಿರುತೊರೆಗಳು ಉಕ್ಕಿ ಹರಿಯುತ್ತಿವೆ. ಜನರ ನಿತ್ಯದ ವಹಿವಾಟು ಮತ್ತು ಸಂಚಾರಕ್ಕೆ ತೊಡಕುಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
RenukaswamyCase: ದರ್ಶನ್ ಸೇರಿ ಎಲ್ಲಾ ಆರೋಪಿಗಳು ಕೋರ್ಟ್‌ಗೆ ಹಾಜರು; ವಿಚಾರಣೆ ಮುಂದೂಡಿಕೆ
Belagavi: ಕಾರಿನಲ್ಲಿ ಹೋಗುತ್ತಿದ್ದ ರಿಯಲ್ ಎಸ್ಟೇಟ್ ಉದ್ಯಮಿ ಮೇಲೆ ಗುಂಡಿನ ದಾಳಿ
MUST WATCH
ಹೊಸ ಸೇರ್ಪಡೆ
Nanthoor: ಮನೆಯಿಂದ ಮಣ್ಣು ತಂದು ರಸ್ತೆಗುಂಡಿ ಮುಚ್ಚುವ ಹಿರಿಯ!
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
ಕಂಬಳದಲ್ಲಿ ನಿಯಮಗಳು ಆಟಕ್ಕುಂಟು ಲೆಕ್ಕಕ್ಕಿಲ್ಲ..? ಸಮಸ್ಯೆ ನೂರು- ಪರಿಹಾರ ಕೊಡುವವರು ಯಾರು?
Henley Passport Index: ಸಿಂಗಾಪುರಕ್ಕೆ ಮೊದಲ ಸ್ಥಾನ: ಭಾರತದ ಪಾಸ್‌ಪೋರ್ಟ್ ಎಷ್ಟು ಸದೃಢ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.