ಬೆಂವಿವಿ ವಿಸಿ ನೇಮಕ ವಿಚಾರದಲ್ಲಿ ಹಗ್ಗಜಗ್ಗಾಟ
Team Udayavani, Jul 19, 2017, 11:21 AM IST
ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ಮತ್ತು ಮುಖ್ಯಮಂತ್ರಿ ನಡುವೆ ಹಗ್ಗಾಜಗ್ಗಾಟ ಆರಂಭವಾಗಿದೆ. ಪ್ರೊ. ಬಿ. ತಿಮ್ಮೇಗೌಡ ಅವರ ಅವಧಿ ಮುಗಿದ ನಂತರ ಬೆಂವಿವಿ ಕುಲಪತಿ ಹುದ್ದೆ ಖಾಲಿ ಇದೆ. ಸದ್ಯ ಡಾ.ಎಂ.ಮುನಿರಾಜು ಅವರು ಹಂಗಾಮಿ ಕುಲಪತಿಯಾಗಿ ಆಡಳಿತ ನಿರ್ವಹಿಸುತ್ತಿದ್ದಾರೆ. ಕುಲಪತಿ ನೇಮಕಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಪ್ರೊ. ಎಸ್.ಆರ್. ನಿರಂಜನ ಅವರ ನೇತೃತ್ವದಲ್ಲಿ ಶೋಧನಾ ಸಮಿತಿ ರಚಿಸಿತ್ತು.
ಬೆಂವಿವಿ ಕುಲಪತಿ ಸ್ಥಾನಕ್ಕೆ ಬಂದಿರುವ ಎಲ್ಲಾ ಅರ್ಜಿಗಳನ್ನು ಪರಿಶೀಲಿಸಿದ ಶೋಧನಾ ಸಮಿತಿಯು ಬೆಂಗಳೂರು ಯುನಿರ್ವಸಿಟಿ ಕಾಲೇಜ್ ಆಫ್ಎಂಜಿನಿಯರಿಂಗ್(ಯುವಿಸಿಇ) ಪ್ರಾಂಶುಪಾಲರಾದ ಪ್ರೊ. ಕೆ.ಆರ್.ವೇಣುಗೋಪಾಲ್, ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ ಪ್ರೊ. ನಾಗಭೂಷಣ್ ಹಾಗೂ ಪ್ರೊ. ಸಂಗಮೇಶ್ ಪಾಟೀಲ್ ಅವರ ಹೆಸರನ್ನು ಅಂತಿಮಗೊಳಿಸಿ, ಸರ್ಕಾರಕ್ಕೆ ಸಲ್ಲಿಸಿತ್ತು. ಸರ್ಕಾರ ಅದನ್ನು ರಾಜ್ಯಪಾಲರಿಗೆ ಸಲ್ಲಿಸಿದೆ.
ಕಡತ ಪರಿಶೀಲಿಸಿದ ರಾಜ್ಯಪಾಲರು, ಪ್ರೊ. ಸಂಗಮೇಶ್ ಪಾಟೀಲ್ ಅವರ ಬದಲಿಗೆ ಪ್ರೊ. ಕೆ.ಆರ್.ವೇಣುಗೋಪಾಲ್ ಅವರನ್ನು ಕುಲಪತಿಯಾಗಿ ಏಕೆ ನೇಮಕ ಮಾಡಬಾರದು? ವೇಣುಗೋಪಾಲ್ ಅವರು ಪ್ರಾಂಶುಪಾಲರಾಗಿ ಅನುಭವ ಹೊಂದಿದ್ದಾರೆ ಮತ್ತು ಬೆಂಗಳೂರು ವಿಶ್ವವಿದ್ಯಾಲಯವನ್ನು ಬಲ್ಲರಾಗಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಳಿದ್ದಾರೆ ಎನ್ನಲಾಗಿದೆ.
ಹೀಗಾಗಿ ಬೆಂಗಳೂರು ವಿವಿ ಕುಲಪತಿ ನೇಮಕ ವಿಚಾರವಾಗಿ ರಾಜ್ಯಪಾಲರ ಮತ್ತು ಮುಖ್ಯಮಂತ್ರಿ ನಡುವೆ ಹಗ್ಗಜಗ್ಗಾಟ ಆರಂಭವಾಗಿದೆ. ಒಂದು ವೇಳೆ ವೇಣುಗೋಪಾಲ್ ಅವರ ನೇಮಕಕ್ಕೆ ಸಿಎಂ ಒಪ್ಪಿಗೆ ಸೂಚಿಸಿದರೆ. ಪ್ರಕರಣ ಶೀಘ್ರವೇ ಸುಖಾಂತ್ಯ ಕಾಣಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.