ಕೋಟೆಮನೆ ರಸ್ತೆ: ಸಂಚಾರಕ್ಕೆ ದುಸ್ತರ
Team Udayavani, Jul 19, 2017, 8:41 PM IST
ಬೈಂದೂರು: ಶಿರೂರು ಸಂಕದಗುಂಡಿ ಸಮೀಪ ರಾಷ್ಟ್ರೀಯ ಹೆದ್ದಾರಿಯಿಂದ ಕೋಟೆಮನೆ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹೆದ್ದಾರಿ ಕಾಮಗಾರಿಯ ಅವ್ಯವಸ್ಥೆ ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯದಿಂದ ಸಂಚಾರಕ್ಕೆ ದುಸ್ತರವಾಗಿದೆ.
ಕಳೆದ ಮೂರು ವರ್ಷಗಳಿಂದ ಈ ರಸ್ತೆಯ ಸುಧಾರಣೆಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿರಲಿಲ್ಲ. ಪ್ರಸಿದ್ಧ ಕೋಟೆಮನೆ ದುರ್ಗಾಂಬಿಕಾ ದೇವಸ್ಥಾನವಿರುವ ಕಾರಣ ಕುಂದಾಪುರದಿಂದ ಕಾರವಾರದವರೆಗೆ ಭಕ್ತರು ನಿತ್ಯ ಆಗಮಿಸುತ್ತಾರೆ. ಸಮರ್ಪಕ ಚರಂಡಿ ವ್ಯವಸ್ಥೆ ಇಲ್ಲದ ಕಾರಣ ರಸ್ತೆಯುದ್ದಕ್ಕೂ ನೀರಿನಿಂದಾವೃತವಾಗುತ್ತಿದ್ದು, ಜನತೆ ನಿತ್ಯ ಪರದಾಡಬೇಕಾಗಿದೆ. ಈ ಬಗ್ಗೆ ಹಲವು ಬಾರಿ ಸಂಬಂಧಪಟ್ಟ ಇಲಾಖೆ, ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದಿದ್ದೇವೆ. ರಸ್ತೆಯನ್ನು ಶೀಘ್ರ ದುರಸ್ತಿ ಮಾಡಬೇಕು ಎಂದು ಸ್ಥಳೀಯರಾದ ವಿವೇಕ ಮೇಸ್ತ ಅವರು ಮನವಿ ಮಾಡಿದ್ದಾರೆ. ಹೀಗಾಗಿ ಪ್ರತಿದಿನ ನೂರಾರು ವಾಹನ ಸಂಚರಿಸುವ ಪ್ರಮುಖ ರಸ್ತೆ ದುರಸ್ತಿಗೆ ಸಂಬಂಧಪಟ್ಟ ಇಲಾಖೆ ಈ ಕುರಿತು ಗಮನಹರಿಸಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Gundlupete: ವಿದ್ಯುತ್ ತಂತಿಗೆ ಸಿಲುಕಿ ಮರಿಯಾನೆ ಸಾವು
Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ
Sirsi: ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.