ಬರ ಪರಿಹಾರ ತಾರತಮ್ಯ: ಮೋದಿಗೆ ಸಿದ್ದು ಪತ್ರ
Team Udayavani, Jul 20, 2017, 5:35 AM IST
ಬೆಂಗಳೂರು: ಕೇಂದ್ರ ಸರ್ಕಾರದಿಂದ ಬರ ನಿರ್ವಹಣೆಗೆ ಎಸ್‌ಡಿಆರ್‌ಎಫ್ ನಿಧಿಯಿಂದ ಕರ್ನಾಟಕ ರಾಜ್ಯಕ್ಕೆ ಬರುವ ಹಣ ತೀರಾ ಕಡಿಮೆ ಇದೆ. ಬರ ಎದುರಿಸುವ ಮಹಾರಾಷ್ಟ್ರ, ಆಂಧ್ರಪ್ರದೇಶ, ಮಧ್ಯ ಪ್ರದೇಶ, ರಾಜಸ್ಥಾನ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಮೊತ್ತ ಗಮನಿಸಿದರೆ, ಕರ್ನಾಟಕಕ್ಕೆ ತಾರತಮ್ಯ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ.
ಇದಕ್ಕೆ ಕೇಂದ್ರ ಗೃಹ ಇಲಾಖೆ ರಾಜ್ಯ ಸಚಿವರು ಉತ್ತರ ನೀಡಿದ್ದು, 13ನೇ ಹಣಕಾಸು ಆಯೋಗದ ಪ್ರಕಾರ 889 ಕೋಟಿ ರೂ. ನೀಡಲಾಗುತ್ತಿತ್ತು. 14ನೇ ಹಣಕಾಸು ಆಯೋಗದ ಶಿಫಾರಸಿನಂತೆ ಕರ್ನಾಟಕಕ್ಕೆ 1527 ಕೋಟಿ ರೂ. ನೀಡಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.
6 ವರ್ಷದಲ್ಲಿ ಕರ್ನಾಟಕ ನಿರಂತರ ಬರಗಾಲಕ್ಕೆ ತುತ್ತಾಗುತ್ತಿದೆ. ಕೇಂದ್ರ ಸರ್ಕಾರದ ಎಸ್‌ಡಿಆರ್‌ಎಫ್
ನಿಯಮದ ಪ್ರಕಾರ ವಾರ್ಷಿಕ ಕಡಿಮೆ ಪರಿಹಾರ ನೀಡಿದ್ದು, ರಾಜ್ಯ ಸರ್ಕಾರವೂ ಸ್ವಂತ ಖಜಾನೆಯಿಂದ ಹಣ ಬಿಡುಗಡೆ ಮಾಡಿ ಪರಿಹಾರ ಕ್ರಮ ಕೈಗೊಂಡಿದೆ. ಪ್ರತಿ ವರ್ಷ ಬರ ಪರಿಹಾರಕ್ಕೆ ಸರಾಸರಿ 1259 ಕೋಟಿ ರೂ.ವೆಚ್ಚ ಮಾಡಲಾಗಿದೆ. ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕ ದಿಂದ 1990 ರಿಂದ 2005 ರ ವರೆಗೆ ಒಟ್ಟು
ಹಣದಲ್ಲಿ ಶೇ.3.2 ರಷ್ಟು ಕರ್ನಾಟಕಕ್ಕೆ ನೀಡಲಾಗುತ್ತಿತ್ತು. ಆದರೆ, 2015-20 ರವರೆಗೆ ಶೇ.2.4ರಷ್ಟು ಮಾತ್ರ ಕರ್ನಾಟಕಕ್ಕೆ ಮೀಸಲಿಡಲಾಗಿದೆ.
ಇದರಿಂದ ರಾಜ್ಯಕ್ಕೆ ಅನ್ಯಾಯವಾದಂತಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಹಾಡಹಗಲೇ ಕುದುರೆಮುಖ ರಾಷ್ಟ್ರೀಯ ಹೆದ್ದಾರಿಯಲ್ಲಿ ಓಡಾಡಿದ ಚಿರತೆ…
Dandeli: ನಿಯಮ ಉಲ್ಲಂಘಿಸಿದ ದ್ವಿಚಕ್ರ ವಾಹನಗಳಿಗೆ ಬಿಸಿ ಮುಟ್ಟಿಸಿದ ಅಧಿಕಾರಿ
Mangaluru Lit Fest: ಯಾವುದೇ ಉತ್ಸವ ಯಾಂತ್ರಿಕವಾದರೆ ಹೊಸತನ ಮೂಡಲ್ಲ: ಎಸ್.ಎಲ್ ಭೈರಪ್ಪ
Belagavi: ಗಾಂಜಾ ವಿಚಾರಕ್ಕೆ ಒಡಹುಟ್ಟಿದವರ ಗಲಾಟೆ; ಓರ್ವ ಸಾವು, ಮತ್ತೋರ್ವ ಗಂಭೀರ
Mudhol: ಪ್ರಯಾಣಿಕರ ಉಪಯೋಗಕ್ಕೆ ಬಾರದ ತಂಗುದಾಣ… ಅಂಗಡಿ ಮುಂಗಟ್ಟಿನಿಂದ ಕಣ್ಮರೆ
MUST WATCH
ಹೊಸ ಸೇರ್ಪಡೆ
Allu Arjun; ಜಾಮೀನು ಷರತ್ತು ಸಡಿಲಿಕೆ: ವಿದೇಶ ಪ್ರಯಾಣಕ್ಕೆ ಕೋರ್ಟ್ ಅನುಮತಿ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
Kannauj: ಕುಸಿದು ಬಿದ್ದ ನಿರ್ಮಾಣ ಹಂತದ ಕಟ್ಟಡದ ಮೇಲ್ಛಾವಣಿ… ಹಲವರು ಸಿಲುಕಿರುವ ಶಂಕೆ
Tulu Film: ʼಮಿಡಲ್ ಕ್ಲಾಸ್ ಫ್ಯಾಮಿಲಿʼಯಿಂದ ಬಂತು ‘ಬೊಕಾ ಬೊಕಾ’ ಹಾಡು
TEENAGE: ಹುಚ್ಚುಕೋಡಿ ಮನಸ್ಸಿಗೂ ಕಡಿವಾಣ ಬೇಕಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.