ಧರ್ಮವೇಕೆ ಬೇಕು?ಬಿಟ್ಟೇ ಬಿಡಿ
Team Udayavani, Jul 20, 2017, 7:20 AM IST
ಬೀಜಿಂಗ್: ಭಾರತದ ನೆರೆಯ ದೇಶದ ಆಡಳಿತಾರೂಢ ಕಮ್ಯುನಿಸ್ಟ್ ಪಕ್ಷ “ಧರ್ಮಾಚರಣೆ ಬೇಡ. ಪಕ್ಷದ ಏಕತೆಗಾಗಿ ಇಂಥ ಕ್ರಮ ಅಗತ್ಯ. ಅದನ್ನು ಮೀರಿದರೆ ಕಠಿಣ ಶಿಕ್ಷೆ ಎದುರಿಸಬೇಕಾಗುತ್ತದೆ’ ಎಂದು ಎಚ್ಚರಿಕೆ ನೀಡಿದೆ. ಚೀನಾದ ಧಾರ್ಮಿಕ ನಂಬಿಕೆಗಳನ್ನು ನಿಯಂತ್ರಿಸುವ ಸಮಿತಿ ಮುಖ್ಯಸ್ಥ ಈ ಆದೇಶ ನೀಡಿದ್ದಾರೆ. ಧಾರ್ಮಿಕ ನಂಬಿಕೆಗಳ ಬಗ್ಗೆ ಒಲವು ಇರುವವರಿಗೆ ಅದನ್ನು ತ್ಯಜಿಸುವಂತೆ ತಿಳಿಸುವ ಕಾರ್ಯಗಳೂ ನಡೆಯಬೇಕು ಎಂದು ಅವರು ಹೇಳಿದ್ದಾರೆ. ಈ ಆದೇಶ ತೀವ್ರ ವಿವಾದಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ನಾಸ್ತಿಕವಾದದಲ್ಲಿ ನಂಬಿಕೆ ಇಡಬೇಕು ಎಂದಿದ್ದಾರೆ. ಇದರ ಜತೆಗೆ ಪಕ್ಷದ ಕಾರ್ಯಕರ್ತರು ಧಾರ್ಮಿಕ ನಂಬಿಕೆ ಬೆಂಬಲಿಸುವುದನ್ನೂ ಕೈಬಿಡಬೇಕು ಎಂದು ಅವರು ಸಲಹೆ ಮಾಡಿದ್ದಾರೆ.
“ಕ್ವಿಶಿ’ ನಿಯತಕಾಲಿಕದಲ್ಲಿ ಶನಿವಾರ ಬರೆದ ಲೇಖನದಲ್ಲಿ ಈ ಮಾಹಿತಿ ಇದೆ. ಅಕ್ಟೋಬರ್‌ನಲ್ಲಿ ನಡೆಯುವ ಪಕ್ಷದ 19ನೇ ಮಹಾಧಿವೇಶನಕ್ಕೆ ಸಿದ್ಧತೆ ನಡೆಯುತ್ತಿರುವಂತೆಯೇ ಇದು ಬಹಿರಂಗವಾಗಿದೆ. ಇಷ್ಟು ಮಾತ್ರವಲ್ಲದೆ ಆರ್ಥಿಕಾಭಿವೃದ್ಧಿ ನೆಪದಲ್ಲಿ ಯಾವುದೇ ಧಾರ್ಮಿಕ ನಂಬಿಕೆಗಳಿಗೆ ಬೆಂಬಲ ನೀಡಬಾರದು. ಚೀನಾದಲ್ಲಿ ಕ್ರಿಶ್ಚಿಯನ್ ಮತ್ತು ಮುಸ್ಲಿಂ ಸಮುದಾಯ ಹೆಚ್ಚಿನ ಪ್ರಮಾಣದಲ್ಲಿ ತಮ್ಮ ಪ್ರಾಬಲ್ಯ ಸಾಧಿಸುತ್ತಿವೆ ಎಂಬ ವರದಿಗಳ ನಡುವೆಯೇ ಇದು ಕಿಡಿ ಹೊತ್ತಿಸುವ ಸಾಧ್ಯತೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: 6 ಮಂದಿ ಭದ್ರತಾ ಸಿಬ್ಬಂದಿ ಸಾವು, ಕಂಡಲ್ಲಿ ಗುಂಡು ಆದೇಶ
Pakistan: ಪಾಕ್ ಸೇನೆ ಮತ್ತು ಇಮ್ರಾನ್ ಸಂಘರ್ಷ- ಯುಎಇ ಮಧ್ಯಸ್ಥಿಕೆ ವಹಿಸಲಿ: ಐಎಸ್ ಐ
Bangla:ಬಂಧನಕ್ಕೊಳಗಾದ ಇಸ್ಕಾನ್ ನ ಕೃಷ್ಣದಾಸ್ ಗೆ ಜಾಮೀನು ನಿರಾಕರಿಸಿದ ಬಾಂಗ್ಲಾ ಕೋರ್ಟ್
Census: ಇರಾಕ್‌ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Tensions Grip: ಬಾಂಗ್ಲಾದೇಶ ಸರಕಾರದಿಂದ ಹಿಂದೂ ನಾಯಕ, ಇಸ್ಕಾನ್‌ನ ಕೃಷ್ಣದಾಸ್ ಸೆರೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ
Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್ 8, ಬಿಜೆಪಿ 3, ಪಕ್ಷೇತರ 1
Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ
MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ
Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.