ಮಹದಾಯಿ: ಗೋವಾ ನಡವಳಿಕೆಗೆ ರಾಜ್ಯದ ತೀವ್ರ ಆಕ್ಷೇಪ


Team Udayavani, Jul 20, 2017, 5:40 AM IST

Mahadayi.gif

ಬೆಂಗಳೂರು: ಮಹದಾಯಿ ನೀರು ಹಂಚಿಕೆ ವಿವಾದ ಬಗೆಹರಿಸಿಕೊಳ್ಳುವ ಕುರಿತು ಗೋವಾ ರಾಜ್ಯದ ನಿಲುವಿಗೆ ರಾಜ್ಯ ಸರ್ಕಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಮಧ್ಯಸ್ಥಿಕೆಗಾಗಿ ಮತ್ತೆ ಪ್ರಧಾನಿ ಮೊರೆ ಹೋಗಲು ನಿರ್ಧರಿಸಿದೆ.

ಒಂದೆಡೆ ಮಹದಾಯಿ ಕುಡಿಯುವ ನೀರಿನ ಯೋಜನೆ ವಿಚಾರವಾಗಿ ಗೋವಾ ಸರ್ಕಾರದ ಜಲಸಂಪನ್ಮೂಲ ಸಚಿವ ವಿನೋದ್‌ ಪಾಳೆÂàಕರ್‌ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕಾನೂನು ಸಚಿವ ಟಿ.ಬಿ.ಜಯಚಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರೆ, ವಿವಾದದಲ್ಲಿ ಮಧ್ಯಪ್ರವೇಶಿಸುವಂತೆ ಕೋರಿ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲಾಗುವುದು ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಹೇಳಿದ್ದಾರೆ.

ಇದು ಕುಡಿಯುವ ನೀರಿನ ಯೋಜನೆಯಾದರೂ ಗೋವಾ ಸರ್ಕಾರ ಅನಗತ್ಯವಾಗಿ ಕ್ಯಾತೆ ತೆಗೆಯುತ್ತಿರುವ ಬಗ್ಗೆ ರಾಜ್ಯ ಸರ್ಕಾರ ಅಸಮಾಧಾನ ವ್ಯಕ್ತಪಡಿಸಿದ್ದು, ಗೋವಾ ಸರ್ಕಾರ ಒಕ್ಕೂಟ ವ್ಯವಸ್ಥೆಯನ್ನೇ ಧಿಕ್ಕರಿಸುವ ರೀತಿ ವರ್ತಿಸುತ್ತಿದೆ ಎಂದು ಕಿಡಿ ಕಾರಿದೆ. ಅಷ್ಟೇ ಅಲ್ಲ, ಗೋವಾ ಜಲಸಂಪನ್ಮೂಲ ಸಚಿವರು ಬಳಸಿದ ಪದಗಳ ಬಗ್ಗೆಯೂ ಬೇಸರ ವ್ಯಕ್ತಪಡಿಸಿದೆ.

ಗೋವಾದ ಉದ್ಧಟತನ:
ಬುಧವಾರ ಸುದ್ದಿಗಾರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹದಾಯಿ ವಿಚಾರವಾಗಿ ಗೋವಾ ರಾಜ್ಯ ಉದ್ಧಟತನ ತೋರುತ್ತಿದೆ. ಕುಡಿಯುವ ನೀರಿನ ವಿಚಾರ ಸೇರಿದಂತೆ ಅನೇಕ ಪ್ರಕರಣಗಳು ನ್ಯಾಯಾಲಯದ ಹೊರಗೆ ಇತ್ಯರ್ಥವಾಗಿರುವ ನಿದರ್ಶನಗಳಿವೆ. ಮಹದಾಯಿ ವಿವಾದವನ್ನೂ ಕೂಡ ನ್ಯಾಯಾಲಯದ ಹೊರಗೆ ಸೌಹಾರ್ದಯುತವಾಗಿ ಇತ್ಯರ್ಥ ಮಾಡುವ ನಿಟ್ಟಿನಲ್ಲಿ ನಾವು ಸಾಗುತ್ತಿದ್ದು ಅದಕ್ಕಾಗಿಯೇ ಗೋವಾ ಮುಖ್ಯಮಂತ್ರಿಗೆ ಪತ್ರ ಬರೆದಿದ್ದೇವೆ ಎಂದರು.

ಗೋವಾ ಮುಖ್ಯಮಂತ್ರಿ ಮನೋಹರ್‌ ಪರಿಕ್ಕರ್‌ ಅವರಿಗೆ ಬರೆದ ಪತ್ರಕ್ಕೆ ಅಲ್ಲಿನ ಜಲಸಂಪನ್ಮೂಲ ಸಚಿವ ವಿನೋದ್‌ ಪಾಳೆÂàಕರ್‌ ಉತ್ತರಿಸಿ ಪತ್ರ ಬರೆದಿದ್ದು, ಆ ಪತ್ರದಲ್ಲಿ ಬಳಸಿರುವ ಪದ ಅವರಿಗೆ ಗೌರವ ತರುವಂತದ್ದಲ್ಲ. ಒಕ್ಕೂಟ ವ್ಯವಸ್ಥೆಯಲ್ಲಿ ಪದಬಳಕೆ ಹೇಗಿರಬೇಕು ಎಂಬುದನ್ನು ಅವರು ಕಲಿತುಕೊಳ್ಳಬೇಕು. ಮಹದಾಯಿ ಸಂಬಂಧ ಪ್ರಧಾನಿಯವರಿಗೆ ಮತ್ತೆ ಪತ್ರ ಬರೆಯಲಿದ್ದೇನೆ. ಬಿಜೆಪಿಯವರು ಇಲ್ಲಿ ಬೊಬ್ಬೆ ಹಾಕುವ ಬದಲು ಪ್ರಧಾನಿಯವರನ್ನು ಒಪ್ಪಿಸಲಿ ಎಂದು ಹೇಳಿದರು.

ಕಾನೂನು ಸಚಿವ ಟಿ.ಬಿ.ಜಯಚಂದ್ರ ಮಾತನಾಡಿ, ನ್ಯಾಯಾಲಯದ ಅಂತಿಮ ಆದೇಶ ಬರುವವರೆಗೂ ಮಹದಾಯಿ ಸಮಸ್ಯೆ ಇತ್ಯರ್ಥ ಸಾಧ್ಯವಿಲ್ಲ ಎಂದು ಗೋವಾ ಸರ್ಕಾರ ಹೇಳಿರುವುದು ಅಸಮಾಧಾನ ಉಂಟುಮಾಡಿದೆ. ಕುಡಿಯುವ ನೀರು ಯೋಜನೆಯನ್ನು ನ್ಯಾಯಾಲಯದ ಆದೇಶ ಬರುವವರೆಗೂ ಕಾಯುವುದು ಎಷ್ಟರಮಟ್ಟಿಗೆ ಸರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬರೆದಿರುವ ಪತ್ರಕ್ಕೆ ಬೆಲೆ ಇಲ್ಲವೇ ಎಂದು ಪ್ರಶ್ನಿಸಿದರು.

ಮುಖ್ಯಮಂತ್ರಿಗಳು ಬರೆದಿರುವ ಪತ್ರಕ್ಕೆ ಗೋವಾ ಜಲಸಂಪನ್ಮೂಲ ಸಚಿವರು ಉತ್ತರಿಸುವಾಗ, ಕರ್ನಾಟಕ ಕೀಳು ಮಟ್ಟದ ರಾಜಕೀಯ ಮಾಡುತ್ತಿದೆ ಎಂದಿರುವುದು ಅಕ್ಷಮ್ಯ ಅಪರಾಧ. ನೀರಿನ ವಿಚಾರವಾಗಿ ಕರ್ನಾಟಕ ರಾಜಕಾರಣ ಮಾಡುವುದಿಲ್ಲ. ಮುಖ್ಯಮಂತ್ರಿಗಳು ಬರೆದಿರುವ ಪತ್ರವನ್ನು ಇನ್ನೊಮ್ಮೆ ಸರಿಯಾಗಿ ಓದಲಿ ಎಂದರು.

ಉತ್ತರ ಕರ್ನಾಟಕದ ಅನೇಕ ಜಿಲ್ಲೆಗೆ ಶಾಶ್ವತ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶದಿಂದ ಈ ಯೋಜನೆ ಅಗತ್ಯವಿದೆ. ಈ ಸಂಬಂಧ ಮಾತುಕತೆಗೆ ದಿನನಿಗದಿಪಡಿಸಿ ಎಂದು ಪತ್ರ ಬರೆದಿರುವುದು ತಪ್ಪೇ? ಜವಾಬ್ದಾರಿಯುತ ಸ್ಥಾನದಲ್ಲಿರುವವರು ಸಚಿವರು ಬಾಯಿಗೆ ಬಂದಂತೆ ಕೆಟ್ಟ ಪದ ಬಳಕೆ ಮಾಡುವುದು ಸರಿಯಲ್ಲ. ಘನತೆಯಿಂದ ವರ್ತಿಸಬೇಕು.  ಅವರ ಕೀಳುಮಟ್ಟದ ಪದ ಬಳಕೆ ಕರ್ನಾಟಕ್ಕೆ ಅನ್ವಯವಾಗುವುದಿಲ್ಲ. ಏನಿದ್ದರೂ ಗೋವಾಕ್ಕೆ ಸರಿಹೊಂದುತ್ತದೆ ಎಂದು ವಾಗ್ಧಾಳಿ ನಡೆಸಿದರು.

ಮೂರು ರಾಜ್ಯಗಳ ನಡುವೆ ಉಂಟಾಗಿರುವ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ ಪ್ರಧಾನಿಯವರು ಮಧ್ಯಪ್ರವೇಶ ಮಾಡಿ ಇತ್ಯರ್ಥಪಡಿಸಬೇಕು. ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫ‌ಡ್ನವೀಸ್‌ ಮಾತುಕತೆ ಒಪ್ಪಿಗೆ ಸೂಚಿಸಿದ್ದಾರೆ. ಗೋವಾ ಸರ್ಕಾರ ಮಾತ್ರ ಪದೇ ಪದೇ ಕ್ಯಾತೆ ತೆಗೆದು ಯೋಜನೆಗೆ ಅಡ್ಡಿಪಡಿಸುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಮತ್ತೆ ಪ್ರಧಾನಿ ಮಧ್ಯಸ್ಥಿಕೆಗೆ ಮನವಿ:
ಇನ್ನೊಂದೆಡೆ ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್‌ ಮಾತನಾಡಿ, ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಕೋರ್ಟ್‌ ಹೊರಗೆ ಮಾತುಕತೆ ಸಾಧ್ಯವಿಲ್ಲ ಎಂದು ಹೇಳಿರುವ ಗೋವಾ ಜಲ ಸಂಪನ್ಮೂಲ ಸಚಿವ ವಿನೋದ್‌ ಪಾಲನ್ಕರ್‌ ಹೇಳಿಕೆ ಖಂಡನೀಯ. ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳಲು ಮಧ್ಯಸ್ಥಿಕೆ ವಹಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಮತ್ತೆ ಭೇಟಿಯಾಗಿ ಮನವಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮಹದಾಯಿ ವಿಷಯದಲ್ಲಿ ಕರ್ನಾಟಕ ದಾರಿ ತಪ್ಪಿಸುತ್ತಿದೆ ಎಂಬ ಗೋವಾ ಜಲ ಸಂಪನ್ಮೂಲ ಸಚಿವರ ಹೇಳಿಕೆ ಸರಿಯಲ್ಲ. ಮಾತುಕತೆ ಮೂಲಕ ವಿವಾದ ಬಗೆಹರಿಸಿಕೊಳ್ಳುವಂತೆ ಸುಪ್ರೀಂ ಕೋರ್ಟ್‌ ನೀಡಿದ ಸಲಹೆ ಮೇಲೆ ರಾಜ್ಯ ಸರ್ಕಾರ ಆ ಪ್ರಯತ್ನ ಮಾಡುತ್ತಿದೆ. ಈ ಹಿಂದೆ ತೆಲಗು ಗಂಗಾ ಯೋಜನೆ ಹಾಗೂ ನರ್ಮದಾ ಯೋಜನೆಯಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಫ‌ಲಾನುಭವಿ ರಾಜ್ಯಗಳಲ್ಲದಿದ್ದರೂ, ತಮಿಳುನಾಡು ಹಾಗೂ ರಾಜಸ್ತಾನ ರಾಜ್ಯಗಳಿಗೆ ಕುಡಿಯುವ ನೀರು ಒದಗಿಸಲು ಅವಕಾಶ ಕಲ್ಪಿಸಿಕೊಟ್ಟಿದ್ದರು. ಈಗ ಪ್ರಧಾನಿ ನರೇಂದ್ರ ಮೋದಿ ಕೂಡ ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆದು ಮಾತುಕತೆ ನಡೆಸಿ ಪರಿಹಾರ ಸೂಚಿಸಬೇಕು. ಸುಪ್ರೀಂ ಕೋರ್ಟ್‌ ಅಧಿಕೃತವಾಗಿ ಮಾತುಕತೆ ನಡೆಸುವಂತೆ ಸೂಚಿಸಿರುವುದರಿಂದ ಇದು ನ್ಯಾಯಾಂಗ ನಿಂದನೆ ಅಥವಾ ನ್ಯಾಯಾಲಯದ ಆದೇಶ ಉಲ್ಲಂಘನೆ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯ ಬಿಜೆಪಿಯವರು ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರ ಮೇಲೆ ಒತ್ತಡ ಹೇರಬೇಕು. ಈಗ ಅವರು ನಿರ್ಲಕ್ಷ ತೋರಿದರೆ, ಮುಂದೆ ರಾಜ್ಯದ ಜನತೆ ಅವರಿಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದೂ ಎಂ.ಬಿ.ಪಾಟೀಲ್‌ ಹೇಳಿದರು.

ಟಾಪ್ ನ್ಯೂಸ್

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bihar; ಮಕ್ಕಳಿಲ್ಲದ ಮಹಿಳೆಯನ್ನು ಗರ್ಭಿಣಿಯನ್ನಾಗಿ ಮಾಡಿ 5 ಲಕ್ಷ ರೂ ಪಡೆಯಿರಿ: ಹೀಗೊಂದು ಜಾಲ

Bangladesh: Tamim Iqbal bids farewell to international cricket

Bangladesh: ಅಂತಾರಾಷ್ಟ್ರೀಯ ಕ್ರಿಕೆಟ್‌ ಗೆ ವಿದಾಯ ಹೇಳಿದ ತಮೀಮ್‌ ಇಕ್ಬಾಲ್

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Mangaluru: ಹಿಂದಿ ರಾಷ್ಟ್ರ ಭಾಷೆ ಅಲ್ಲ… ಆರ್.ಅಶ್ವಿನ್ ಹೇಳಿಕೆಗೆ ಅಣ್ಣಾಮಲೈ ಹೇಳಿದ್ದೇನು?

Choo Mantar Movie Review

Choo Mantar Review: ಬಂಗಲೆಯಲ್ಲೊಂದು ಭಯಾನಕ ಕಥೆ!

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?

AAP MLA: ಗುಂಡೇಟಿನಿಂದ ಎಎಪಿ ಶಾಸಕ ಗುರುಪ್ರೀತ್ ಗೋಗಿ ಸಾ*ವು… ಕುಟುಂಬಸ್ಥರು ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

Mudhol: ಪ್ರತ್ಯೇಕ ಅಪಘಾತ ಇಬ್ಬರು ಮೃತ್ಯು..

Mudhol: ಪ್ರತ್ಯೇಕ ಅಪಘಾತ, ಇಬ್ಬರು ಮೃತ್ಯು..

4-ct-ravi

Naxal: ತನಿಖೆ ನಡೆಸಿ ಪ್ಯಾಕೇಜ್ ನೀಡಬೇಕು,ಇಲ್ಲದಿದ್ದರೇ ಪ್ಯಾಕೇಜ್ ನೀಡುವುದರಲ್ಲಿ ಅರ್ಥವಿಲ್ಲ

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Gangavati: ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ವಿಜಯಪ್ರಸಾದ್ ಅಮಾನತು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

Chikkamagaluru: ನಕ್ಸಲರ ಶರಣಾಗತಿ ಬೆನ್ನಲ್ಲೇ ಶಸ್ತ್ರಾಸ್ತ್ರ ವಶಪಡಿಸಿಕೊಂಡ ಪೊಲೀಸರು

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

11-bng

Bengaluru:1 ಕಿ.ಮೀ. ಬೆನ್ನಟ್ಟಿ ಕಾಡುಪ್ರಾಣಿ ಬೇಟೆಗಾರರ ಬಂಧಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

10-bng

Bengaluru: ನಾಯಿ ಕಚ್ಚಿ 4 ವರ್ಷದ ಬಾಲಕನಿಗೆ ಗಾಯ: ಶ್ವಾನ ಮಾಲಿಕನ ವಿರುದ್ಧ ಪ್ರಕರಣ ದಾಖಲು

ಸಿ.ಟಿ.ರವಿ

chikkamagaluru: ಹೆಬ್ಬಾಳ್ಕರ್‌ ನಿಂದನೆ ಪ್ರಕರಣ; ಸಿ.ಟಿ.ರವಿಗೆ ಬೆದರಿಕೆ ಪತ್ರ

9-bng

Bengaluru: ಜಗಳ ಬಿಡಿಸಲು ಬಂದ ಮಾವನ ಕೊಂದ ಅಳಿಯ!

8-bng

Bengaluru: ಬಿಯರ್‌ ಬಾಟಲಿ ಕಸಿದಿದ್ದಕ್ಕೆ ಸ್ನೇಹಿತನ ಹತ್ಯೆ; 7 ಜನ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.