ಬಾಲಕನಿಗೆ ಲೈಂಗಿಕ ಕಿರುಕುಳ :ಆಸ್ಪತ್ರೆಯ ಸೆಕ್ಯೂರಿಟಿಗಾರ್ಡ್ ಬಂಧನ
Team Udayavani, Jul 20, 2017, 6:50 AM IST
ಮಂಗಳೂರು: ನಗರದ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ತಾಯಿಯನ್ನು ನೋಡಿಕೊಳ್ಳಲು ಬಂದಿದ್ದ ಬಾಲಕನಿಗೆ ಆಸ್ಪತ್ರೆಯ ಸೆಕ್ಯೂರಿಟಿ ಗಾರ್ಡ್ ಲೈಂಗಿಕ ಕಿರುಕುಳ ನೀಡಿದ್ದಾಗಿ ಆರೋಪಿಸಲಾಗಿದ್ದು, ಈ ಬಗ್ಗೆ ಕದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಂಟ್ವಾಳ ಗೋಳ್ತಮಜಲಿನ ಸೀತಾರಾಮ ಶೆಟ್ಟಿ (35) ಬಂಧಿತ ಆರೋಪಿ. ಸುರತ್ಕಲ್ ಕೃಷ್ಣಾಪುರ ಮೂಲದ ಮಹಿಳೆಯೋರ್ವರು ಅಪಘಾತಕ್ಕೊಳಗಾಗಿ ಕಳೆದ 5-6 ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಅವರನ್ನು ನೋಡಿಕೊಳ್ಳಲು ಮಂಗಳವಾರ ಅವರ ಅಪ್ರಾಪ್ತ ವಯಸ್ಕ ಪುತ್ರ ಆಸ್ಪತ್ರೆಗೆ ಬಂದಿದ್ದ. ರಾತ್ರಿ ವೇಳೆ ಆತನಿಗೆ ಮಲಗಲು ಆಸ್ಪತ್ರೆಯಲ್ಲಿ ವ್ಯವಸ್ಥೆ ಇಲ್ಲದಿದ್ದ ಕಾರಣ ಆತನ ಸ್ಥಿತಿ ಗಮನಿಸಿದ ಆರೋಪಿ ಆತನಿಗೆ ಆಸ್ಪತ್ರೆಯ ಬೆಡ್‌ಶೀಟ್‌ಗಳನ್ನಿಡುವ ಗೋಡೌನ್‌ವೊಂದರಲ್ಲಿ ಮಲಗಲು ವ್ಯವಸ್ಥೆ ಇರುವುದಾಗಿ ತಿಳಿಸಿ ಆ ಕೊಠಡಿಗೆ ಆತನನ್ನು ಕಳುಹಿಸಿಕೊಟ್ಟಿದ್ದ.
ಸ್ವಲ್ಪ ಸಮಯದ ನಂತರ ಆರೋಪಿ ಕೂಡಾ ಗೋಡೌನ್‌ಗೆ ತೆರಳಿ ಬಾಲಕನಿಗೆ ಲೈಂಗಿಕ ಕಿರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ನೊಂದ ಬಾಲಕ ಇತರರಲ್ಲಿ ವಿಷಯವನ್ನು ತಿಳಿಸಿದ್ದು, ಇದರಿಂದ ಪ್ರಕರಣ ಬೆಳಕಿಗೆ ಬಂದಿತು. ಆರೋಪಿ ಸೆಕ್ಯೂರಿಟಿ ಗಾರ್ಡ್ ಮಂಗಳವಾರ ಸಂಜೆಯವರೆಗೆ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ. ಬಳಿಕ ಬಾಲಕ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಪೊಲೀಸರಿಗೆ ದೂರು ನೀಡಿದ್ದ. ಪೊಲೀಸರು ಪೋಕೊÕà ಕಾಯ್ದೆಯಡಿ ಸೆಕ್ಯೂರಿಟಿ ಗಾರ್ಡ್ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi-NCR: ದಟ್ಟ ಮಂಜು ಕವಿದ ವಾತಾವರಣ-ವಿಮಾನ,ವಾಹನ ಸಂಚಾರಕ್ಕೆ ಎಫೆಕ್ಟ್, ಟ್ರಾಫಿಕ್ ಜಾಮ್
Uchila: ಕಾರು ಢಿಕ್ಕಿಯಾಗಿ ಪಾದಚಾರಿ ಸ್ಥಳದಲ್ಲೇ ಸಾವು
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
Bengaluru: 7 ಮದುವೆ ಮುಚ್ಚಿಟ್ಟು 8ನೇ ಮದುವೆಯಾಗಿ ಪತಿಗೆ ವಂಚನೆ!
Udupi: 2024ನೇ ಸಾಲಿನ ಪಾರ್ತಿಸುಬ್ಬ ಪ್ರಶಸ್ತಿಗೆ ಮಾಂಬಾಡಿ ಸುಬ್ರಹ್ಮಣ್ಯ ಭಟ್ ಆಯ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.