ಶಾಸಕರ ಅನುದಾನದಲ್ಲಿ ಕೊರೆಸಿದ ಕೊಳವೆಬಾವಿಗಳೆಷ್ಟು?
Team Udayavani, Jul 20, 2017, 11:24 AM IST
ಚಿತ್ರದುರ್ಗ: ನಗರದ ವಿವಿಧ ಬಡಾವಣೆಗಳಲ್ಲಿ 8.5 ಕೋಟಿ ರೂ. ವೆಚ್ಚದಲ್ಲಿ ಕೊಳವೆಬಾವಿ ಕೊರೆಸಿ ಜನತೆಗೆ ನೀರು ಪೂರೈಕೆ ಮಾಡಲಾಗುತ್ತಿದೆ ಎಂಬ ಶಾಸಕ ಜಿ.ಎಚ್. ತಿಪ್ಪಾರೆಡ್ಡಿಯವರು ಹೇಳಿಕೆ ನೀಡುತ್ತಿದ್ದಾರೆ. ಆ ಕೊಳವೆಬಾವಿಗಳು ಎಲ್ಲಿವೆ ಎಂಬ ಮಾಹಿತಿ ನೀಡಬೇಕು. ಇಲ್ಲವೇ ಅವೆಲ್ಲವನ್ನೂ ವಶಕ್ಕೆ ಪಡೆದು ಜನಸಾಮಾನ್ಯರಿಗೆ ನೀರು ಪೂರೈಕೆ ಮಾಡಬೇಕು ಎಂದು ನಗರಸಭೆ
ಸದಸ್ಯ ಬಿ. ಕಾಂತರಾಜ್ ಪಟ್ಟು ಹಿಡಿದರು.
ನಗರದ ಹಳೆ ನಗರಸಭೆ ಸಭಾಂಗಣದಲ್ಲಿ ಪ್ರಭಾರಿ ಅಧ್ಯಕ್ಷ ಕೆ. ಮಲ್ಲೇಶಪ್ಪ ಅಧ್ಯಕ್ಷತೆಯಲ್ಲಿ ನಡೆದ ತುರ್ತುಸಭೆಯಲ್ಲಿ ಅವರು
ಮಾತನಾಡಿದರು. ನಗರದಾದ್ಯಂತ ಉಂಟಾಗಿರುವ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಶಾಸಕರು ಶ್ರಮಿಸುತ್ತಿರುವುದು ಅಭಿನಂದನೀಯ. ಆದರೆ ಅವರು ತಮ್ಮ ಅನುದಾನದಲ್ಲಿ ಕೊಳವೆಬಾವಿಗಳನ್ನು ಕೊರೆಸಲಾಗಿದೆ ಎಂದು ಹೇಳಿಕೆ ನೀಡುತ್ತಲೇ ಇದ್ದಾರೆ. ನಾನು ಈ ವಿಷಯ ಪ್ರಸ್ತಾಪಿಸಿ ಕಳೆದ ಸಭೆಯಲ್ಲೇ ಮಾಹಿತಿ ಕೇಳಿದ್ದೆ. ಇದುವರೆಗೂ ಪೌರಾಯುಕ್ತರು ಮಾಹಿತಿ ನೀಡಿಲ್ಲ
ಎಂದು ಆಕ್ಷೇಪಿಸಿದರು. ಕೊಳವೆಬಾವಿಗಳ ಲೆಕ್ಕ ಕೊಡಿ ಎಂದು ಶಾಸಕರನ್ನು ಪ್ರಶ್ನಿಸುವ ಅಧಿಕಾರ ನಮಗಿಲ್ಲ. ನಗರಸಭೆಯಿಂದ ವಿದ್ಯುತ್ ಸಂಪರ್ಕಕ್ಕೆ ಎನ್ ಒಸಿ ನೀಡಬೇಕು. ಆದರೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ
ಕೊಳವೆಬಾವಿ ಕೊರೆಸಿದ ತಕ್ಷಣ ಜನರಿಗೆ ನೀರು ಪೂರೈಸಬೇಕು. ವಿದ್ಯುತ್ ಸಂಪರ್ಕ ವಿಚಾರವಾಗಿ ಸಬೂಬು ಹೇಳುವ ಹಾಗಿಲ್ಲ. ಈ ಕುರಿತು ಬೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಆದ್ದರಿಂದ ಎಲ್ಲೆಲ್ಲಿ ಕೊಳವೆಬಾವಿ ಕೊರೆಸಿದ್ದಾರೆ ಎಂಬ ಬಗ್ಗೆ ತಿಳಿದುಕೊಳ್ಳಲು ನಗರಸಭೆ ಅಧಿಕಾರಿಗಳು ಹೋಗಿಲ್ಲ. ಆ ಕೊಳವೆಬಾವಿಗಳಿಂದ ಜನರಿಗೆ ನೀರು ಪೂರೈಸಲಾಗುತ್ತಿದೆ ಎಂದು ಪೌರಾಯುಕ್ತ
ಚಂದ್ರಪ್ಪ ಸ್ಪಷ್ಟಪಡಿಸಿದರು.
ಕಾಂತರಾಜ್ ಸೇರಿದಂತೆ ಕೆಲವು ಸದಸ್ಯರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದರು. ಪ್ರತಿ ಕೊಳವೆಬಾವಿಗಳ ಮೇಲೆ ನೀರಗಂಟಿಗಳಿಗೆ ನಿಗಾ
ಇಡುವಂತೆ ತಿಳಿಸಬೇಕು ಎಂದು ಸೂಚಿಸಿದರು. ಸದಸ್ಯರಾದ ಛಾಯಾ ಸುರೇಶ್, ಚಂದ್ರಕಲಾ, ಎಂ. ಮಲ್ಲಿಕಾರ್ಜುನ್, ಖಾದರ್ ಖಾನ್ ಮಾತನಾಡಿ, ನಗರದಲ್ಲಿ ಕುಡಿಯವ ನೀರಿನ ಸಮಸ್ಯೆ ಉಲ್ಬಣಗೊಂಡಿದೆ. ಈಗಾಗಲೇ ಟ್ಯಾಂಕರ್ ಮೂಲಕ ಪೂರೈಸುತ್ತಿದ್ದರೂ ಸಾಕಾಗುತ್ತಿಲ್ಲ. ಪ್ರತಿ ವಾರ್ಡ್‌ಗೂ ಒಂದೊಂದು ಟ್ಯಾಂಕರ್ ಒದಗಿಸಬೇಕು ಎಂದು ಒತ್ತಾಯಿಸಿದರು.
ಕೊಳವೆಬಾವಿ ವಶಪಡಿಸಿಕೊಳ್ಳಿ
ಸಾರ್ವಜನಿಕರ ಸಲುವಾಗಿ ಯಾರೇ ಕೊಳವೆಬಾವಿಗಳನ್ನು ಕೊರೆಸಿದರೂ ನಗರಸಭೆ ಸಿಬ್ಬಂದಿಯೇ ನಿರ್ವಹಣೆ ಮಾಡಬೇಕು. ವಿದ್ಯುತ್ ಸಂಪರ್ಕಕ್ಕೆ ಎನ್‌ಒಸಿ ನೀಡಬೇಕು. ನಿರಾಕ್ಷೇಪಣಾ ಪತ್ರ ನೀಡುವಾಗಲಾದರೂ ಎಲ್ಲಿ ಕೊರೆಸಲಾಗಿದೆ ಎಂಬ ಮಾಹಿತಿ
ಅ ಧಿಕಾರಿಗಳಿಗೆ ಸಿಗುವುದಿಲ್ಲವೇ ಎಂದು ಕಾಂತರಾಜ್ ಪ್ರಶ್ನಿಸಿದರು. ಎಲ್ಲ ಕೊಳವೆ ಬಾವಿಗಳನ್ನು ಮೊದಲು ವಶಕ್ಕೆ
ಪಡೆದುಕೊಳ್ಳಿ. ಆಗಲಾದರೂ ಲೆಕ್ಕ ಸಿಗುತ್ತದೆ. ನಂತರ ನಮಗೆ ಮಾಹಿತಿ ನೀಡಿ ಎಂದು ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Talk Fight: ಬಿ.ಎಸ್.ಯಡಿಯೂರಪ್ಪ ಬಗ್ಗೆ ಹಗುರ ಮಾತು ಸಲ್ಲ: ಬಿ.ವೈ.ವಿಜಯೇಂದ್ರ ಎಚ್ಚರಿಕೆ
Waqf Property: ಸಚಿವ ಜಮೀರ್ ಅಹ್ಮದ್‌ರನ್ನು ಗಡೀಪಾರು ಮಾಡಿ: ಬಿ.ವೈ.ವಿಜಯೇಂದ್ರ
ಬಿಜೆಪಿಯವರಿಗೆ ಕಾಳಜಿಯಿದ್ದರೆ ಕೇಂದ್ರದಿಂದ ಬೆಳೆ ಪರಿಹಾರ ಹೆಚ್ಚಿಸಲಿ: ಕೃಷ್ಣ ಬೈರೇಗೌಡ
Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ
ByPolls; ಕಾಂಗ್ರೆಸ್ ಸಂಪರ್ಕದಲ್ಲಿ ಯೋಗೇಶ್ವರ ವಿಚಾರ: ಸ್ಪಷ್ಟನೆ ನೀಡಿದ ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.