ಪಕ್ಷದ ಬಲವರ್ಧನೆಗೆ ಬೂತ್ ಮಟ್ಟದಲ್ಲಿ ಶ್ರಮಿಸಿ
Team Udayavani, Jul 20, 2017, 1:27 PM IST
ಕುರುಗೋಡು: ದೇಶದ ಹಿತಕ್ಕಾಗಿ ಪ್ರತಿಯೊಬ್ಬ ನಾಗರಿಕರು ಕಾಂಗ್ರೆಸ್ ಬೆಂಬಲಿಸಬೇಕು ಎಂದು ಕಾಂಗ್ರೆಸ್ ಹೈದ್ರಾಬಾದ್ ಕರ್ನಾಟಕ
ಪ್ರದೇಶದ ಉಸ್ತುವಾರಿ ಡಾ| ಶೈಲೇಂದ್ರನಾಥ ಹೇಳಿದರು.
ಪಟ್ಟಣದ ಕೋಳೂರು-ಕುರುಗೋಡು ಬ್ಲಾಕ್ ಕಾಂಗ್ರೆಸ್ ಸಮಿತಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಬ್ಲಾಕ್ ಕಾಂಗ್ರೆಸ್
ಪದಾಧಿ ಕಾರಿಗಳ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ರೈತ ಹಾಗೂ ಕಾರ್ಮಿಕ
ವಿರೋಧ ನೀತಿ ಅನುಸರಿಸುತ್ತಿದೆ. ಜೊತೆಗೆ ಪ್ರಣಾಳಿಕೆಯಲ್ಲಿ ನುಡಿದಂತೆ ನಡೆಯದೆ ವಚನ ಭ್ರಷ್ಟ ಸರ್ಕಾರವಾಗಿದೆ ಎಂದು
ಆರೋಪಿಸಿದರು.
ಗ್ರಾಮೀಣ ವಿಭಾಗದ ಜಿಲ್ಲಾಧ್ಯಕ್ಷ ಶಿವಯೋಗಿ ಮಾತನಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರ ಬಡವರ ಕಲ್ಯಾಣಕ್ಕಾಗಿ ಅನ್ನಭಾಗ್ಯ, ಕ್ಷೀರಭಾಗ್ಯ, ಪಶು ಭಾಗ್ಯ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ರೂಪಿಸಿದ್ದಾರೆ.
ಆದ್ದರಿಂದ ಪ್ರತಿಯೊಬ್ಬ ಕಾಂಗ್ರೆಸ್ ಕಾರ್ಯಕರ್ತರು ಬೂತ್ ಮಟ್ಟದಿಂದ ಕಾಂಗ್ರೆಸ್ ಪಕ್ಷವನ್ನು ಸಂಘಟಿಸುವ ಕೆಲಸ
ಮಾಡಬೇಕೆಂದರು.
ಕಂಪ್ಲಿ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಕಂಪ್ಲಿ ಮತ್ತು ಕುರುಗೋಡು ಬ್ಲಾಕ್ ಕಾಂಗ್ರೆಸ್ ಸಮಿತಿ ಪದಾಧಿಕಾರಿಗಳ ಸಭೆ ಕರೆದು ಆಯ್ಕೆ ಮಾಡುವಂತೆ ಕೆಲ ಸ್ಥಳೀಯ ಮುಖಂಡರು ಹೈದ್ರಾಬಾದ್-ಕರ್ನಾಟಕ ಪ್ರದೇಶದ ಉಸ್ತುವಾರಿ ಡಾ| ಲೇಂದ್ರನಾಥ ಅವರನ್ನು ಒತ್ತಾಯಿಸಿದರು. ವಾಲ್ಮೀಕಿ ನಿಗಮದ ಅಧ್ಯಕ್ಷ ವಿ.ಎನ್. ಗಿರಿಮಲ್ಲಪ್ಪ, ಜಿಪಂ ಸದಸ್ಯ ಗೋಪಾಲ್, ಕೆ.ಬಸಪ್ಪ, ಕೋಳೂರು-ಕುರುಗೊಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಮಲ್ಲಿಕರ್ಜುನ್, ಕಂಪ್ಲಿ ಬ್ಲಾಕ್ ಅಧ್ಯಕ್ಷ ಸಿ.ಆರ್. ಹನುಮಂತ, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಕೆ.ಗಾ ಲಿಂಗಪ್ಪ, ಎಸ್‌ಟಿ ವಿಭಾಗದ ಅಧ್ಯಕ್ಷ ನಾರಾಯಣಪ್ಪ, ಪಾಯಿಧ್ ಸಾಬ್, ಎ.ರವೀಂದ್ರ, ಸಿ. ಯುವರಾಜ, ಶೆಟ್ಟಿ
ಮಂಜು, ಬಸವರಾಜಗೌಡ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kotturu: ಹಸಿರು ಪಟಾಕಿ ಹೆಸರಿನಲ್ಲಿ ನಿಯಮ ಉಲ್ಲಂಘಿಸಿ ಮಾಮೂಲಿ ಪಟಾಕಿ ಮಾರಾಟ…
“ಕೈ’ ಬಿಡದ ಸಂಡೂರು ಮತದಾರ; ಬಿಜೆಪಿಗೆ ಜಯದ ಕಾತರ: 13 ಚುನಾವಣೆಯಲ್ಲಿ ಕಾಂಗ್ರೆಸ್ ಮೇಲುಗೈ
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
Bellary: ಕನ್ನಡಿಗರಿಗೆ, ಯಶ್ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ
MUST WATCH
ಹೊಸ ಸೇರ್ಪಡೆ
Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
Udupi: ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘಕ್ಕೆ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
25 ಬಿಲಿಯನ್ ಕಿ.ಮೀ ದೂರದ ಅಂತರತಾರಾ ಬಾಹ್ಯಾಕಾಶದಲ್ಲಿ ಸಮಸ್ಯೆಗೆ ಸಿಲುಕಿದ ವೊಯೇಜರ್ 1
Bengaluru: ನಗರದಲ್ಲಿ ಪರಭಾಷಿಕರಿಗೆ ಕನ್ನಡ ಭಾಷೆ ಕಲಿಸುವ “ಆಟೋ ಅಜ್ಮಲ್’
Deepawali: ರಾಜಧಾನಿಯಲ್ಲಿ ದೀಪಾವಳಿ ಬೆಳಕಿನ ಚಿತ್ತಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.