ರೈತರೇ ಬೆಳೆಗೆ ಬೆಲೆ ನಿಗದಿ ಮಾಡುವಂತಾಗಲಿ: ಡಾ| ಕಮ್ಮರಡಿ
Team Udayavani, Jul 20, 2017, 3:34 PM IST
ರಾಯಚೂರು: ರೈತರು ಬೆಳೆದ ಬೆಳೆಗಳಿಗೆ ಸೂಕ್ತ ಬೆಲೆ ಸಿಗುತ್ತಿಲ್ಲ. ಯಾವಾಗ ರೈತರು ತಾವು ಬೆಳೆದ ಬೆಳೆಗೆ ತಾವೇ ಬೆಲೆ ನಿಗದಿ
ಮಾಡುವಷ್ಟರ ಮಟ್ಟಿಗೆ ಸ್ವಾವಲಂಬನೆ ಸಾ ಧಿಸುವುದಿಲ್ಲವೋ ಅಲ್ಲಿಯವರೆಗೆ ಬೆಲೆಯಲ್ಲಿ ವಂಚನೆ ತಪ್ಪುವುದಿಲ್ಲ ಎಂದು ಕೃಷಿ ಬೆಲೆ ಆಯೋಗದ ಅಧ್ಯಕ್ಷ ಡಾ| ಟಿ.ಎನ್.ಪ್ರಕಾಶ ಕಮ್ಮರಡಿ ಹೇಳಿದರು.
ಐಸಿಎಆರ್ ಪ್ರಾಯೋಜಿತ ಕೃಷಿ, ಕೈತೋಟ, ಪಶುಸಂಗೋಪನೆ ಹಾಗೂ ಅರಣ್ಯ ಉತ್ಪನ್ನಗಳ ಆಧುನಿಕ ಮಾರುಕಟ್ಟೆ ಪದ್ಧತಿ ಕುರಿತ ಇಲ್ಲಿನ ಕೃಷಿ ವಿಶ್ವವಿದ್ಯಾಲಯದ ಕೃಷಿ ಕಾಲೇಜಿನಲ್ಲಿ ಆಯೋಜಿಸಿದ 10 ದಿನಗಳ ಕಾರ್ಯಾಗಾರ ಉದ್ಘಾಟನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 1969ರಲ್ಲಿ ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಲಾಯಿತು. ಇಂದು ಬ್ಯಾಂಕುಗಳ ರಾಷ್ಟ್ರೀಕರಣದ ವಿಶೇಷ ದಿನ. ಗ್ರಾಮೀಣ ಪ್ರದೇಶದ ಕೃಷಿಕರಿಗೆ ಆರ್ಥಿಕ ಸೌಲಭ್ಯ ನೀಡುವುದು ಅತ್ಯಗತ್ಯ. ಶೇ.76ರಷ್ಟು ರೈತರು ರಾಷ್ಟ್ರೀಕೃತ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕ್ ಗಳ ಮೂಲಕ ಹಣಕಾಸಿನ ನೆರವು ಪಡೆದರೆ ಇನ್ನು ಶೇ.24ರಷ್ಟು ರೈತರು ಖಾಸಗಿ ಸಾಲಗಾರರು ಹಾಗೂ ಅವರ ಸಂಬಂಧಿ ಕರಲ್ಲಿ ಹಣಕಾಸಿನ ನೆರವು ಪಡೆಯುತ್ತಿದ್ದಾರೆ ಎಂದು ಅವರು ವಿವರಿಸಿದರು.
ಮಾರುಕಟ್ಟೆಯಲ್ಲಿ ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗಬೇಕು. ಬೆಳೆವಣಿಗೆ-ಸ್ಥಿರತೆ ಒಂದು ನಾಣ್ಯದ ಎರಡು ಮುಖಗಳಿದ್ದಂತೆ.
ಮಾರುಕಟ್ಟೆ ಬಗ್ಗೆ ರೈತರಿಗೆ ತರಬೇತಿ ನೀಡಿ ಅವರ ಬೆಳೆಗೆ ತಾವೇ ದರ ನಿಗದಿಪಡಿಸುವಂತೆ ಮಾಡಬೇಕಿದೆ. ಉದ್ದಿಮೆದಾರರು, ಚಹಾ
ಮಾರುವವನು ತಮ್ಮ ಸಾಮಗ್ರಿಗಳಿಗೆ ಬೆಲೆ ನಿರ್ಧರಿಸುತ್ತಾರೆ. ಆದರೆ, ರೈತ ತಾನು ಬೆಳೆದ ಬೆಳೆಗೆ ಬೆಲೆ ನಿರ್ಧರಿಸದೆ ಅಲೆಮಾರಿಯಂತೆ ಅಲೆಯುತ್ತಾನೆ. ಅವರು ಬೆಲೆ ನಿರ್ಧಾರಕರಾದಾಗ ಮಾತ್ರ ರೈತರ ಪ್ರಗತಿ ಸಾಧ್ಯವಿದೆ ಎಂದು ವಿಶ್ಲೇಷಿಸಿದರು.
ಕಳೆದ ವರ್ಷ ನಮ್ಮ ಆಯೋಗದ ಶಿಫಾರಸಿನಿಂದ ತೊಗರಿಗೆ 5,500 ರೂ. ಬೆಂಬಲ ಬೆಲೆ ನೀಡಲಾಯಿತು. ಕೊಬ್ಬರಿಗೆ ಒಂದು
ಸಾವಿರ ರೂ. ಬೆಂಬಲ ಬೆಲೆ ನೀಡಲಾಗಿದೆ. ಎಪಿಎಂಸಿಗಳು ರೈತರಿಗೆ ಇನ್ನೂ ಹೆಚ್ಚಿನ ಸೌಲಭ್ಯ ಕಲ್ಪಿಸಬೇಕು ಎಂದರು.
ಕೃಷಿ ವಿವಿ ಕುಲಪತಿ ಡಾ| ಪಿ.ಎಂ.ಸಾಲಿಮಠ, ಕುಲಸಚಿವ ಡಾ| ಡಿ.ಎಂ.ಚಂಡರಗಿ, ಡಾ| ಎಂ.ಜಿ.ಪಾಟೀಲ, ಡಾ| ಎ.ಎಸ್.
ಹಳಿಪ್ಯಾಟ್, ಕೃಷಿ ಕಾಲೇಜಿನ ಮುಖ್ಯಸ್ಥ ಡಾ| ಜಾಗೃತಿ ಬಿ. ದೇಶಮಾನ್ಯ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ್ದ ಉಪನ್ಯಾಸಕರು, ವಿದ್ಯಾರ್ಥಿಗಳು ಹಾಗೂ ಸಿಬ್ಬಂದಿ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Udupi: ಎಂಜಿಎಂ ವಿದ್ಯೆ ಎಂಬ ಅಮೃತ ನೀಡುತ್ತಿದೆ: ಶ್ರೀ ವಿದ್ಯಾಸಾಗರ ತೀರ್ಥ ಸ್ವಾಮೀಜಿ
Champions Trophy; ಭಾರತ ತಂಡ ಪಾಕಿಸ್ಥಾನಕ್ಕೆ ತೆರಳುವುದು ಅಸಂಭವ: ದೃಢಪಡಿಸಿದ MEA
Guarantee Scheme: ಸರಕಾರದ ಖಜಾನೆ ತುಂಬಲು ಅನಧಿಕೃತ ಲೇಔಟ್ ಸಕ್ರಮಗೊಳಿಸಲಿ:ಜನಾರ್ದನ ರೆಡ್ಡಿ
Madikeri: ಮನೆಯ ಆವರಣದಲ್ಲಿ ಗಾಂಜಾ ಬೆಳೆದ ಆರೋಪಿಯ ಬಂಧನ
PM Modi ಭೇಟಿಯಾಗಿ ವಿಶೇಷ ಮನವಿ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.