ರಾಜ್ಯ ಸರ್ಕಾರದ ನಡೆಗೆ ಆಕ್ರೋಶ
Team Udayavani, Jul 20, 2017, 3:39 PM IST
ರಾಯಚೂರು: ಬಂಧಿಖಾನೆ ಡಿಐಜಿ ಡಿ.ರೂಪಾ ಅವರ ವರ್ಗಾವಣೆ ಹಾಗೂ ಶರತ್ ಮಡಿವಾಳ ಅವರ ಹತ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರದ ನಡೆ ಖಂಡಿಸಿ ಬುಧವಾರ ಬಿಜೆಪಿ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
ರಾಜ್ಯದಲ್ಲಿ ದಕ್ಷ ಹಾಗೂ ಪ್ರಾಮಾಣಿಕ ಅಧಿಕಾರಿಗಳಿಗೆ ಬೆಲೆ ಇಲ್ಲದಂತಾಗಿದೆ. ಡಿಐಜಿ ಡಿ.ರೂಪಾ ಅವರ ವರ್ಗಾವಣೆ ಮಾಡುವ ಮೂಲಕ ರಾಜ್ಯ ಸರ್ಕಾರ ತಾನು ಅಕ್ರಮದ ಪರ ಎಂಬುದನ್ನು ಸಾಬೀತು ಮಾಡಿದೆ ಎಂದು ಟೀಕಿಸಿದರು.
ರಾಜ್ಯ ಸರ್ಕಾರ ಅಕ್ರಮ ದಂಧೆಕೋರರಿಗೆ, ಭ್ರಷ್ಟ ವ್ಯವಸ್ಥೆಗೆ ಸಹಕಾರ ನೀಡುತ್ತಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಅನುಭವಿಸಲು ಕಾರಾಗೃಹಗಳನ್ನು ನಿರ್ಮಿಸಿದ್ದರೆ, ರಾಜ್ಯ ಸರ್ಕಾರ ಪರಪ್ಪನ ಅಗ್ರಹಾರವನ್ನೇ ಐಷಾರಾಮಿಯಾಗಿ ಬದಲಿಸಿದೆ. ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಆಪೆ¤ ಶಶಿಕಲಾ ಹಾಗೂ ನಕಲಿ ಸ್ಟಾಂಪ್ ಪೇಪರ್ ಹಗರಣದ ಪ್ರಮುಖ ಆರೋಪಿ ಕರಿಂಲಾಲ ತೆಲಗಿಗೆ ಭೋಗ
ಜೀವನ ನಡೆಸಲು ಅವಕಾಶ ನೀಡಿರುವ ಸರ್ಕಾರದ ನಡೆ ಖಂಡನಾರ್ಹ. ಇಂಥ ಅಕ್ರಮವನ್ನು ಬಯಲಿಗೆಳೆದ ಅಧಿಕಾರಿ ಯನ್ನೇ ಸರ್ಕಾರ ವರ್ಗಾವಣೆ ಮಾಡುತ್ತಿದೆ ಎಂದರೆ ಇನ್ನೆಂಥ ಪ್ರಾಮಾಣಿಕ ಆಡಳಿತ ನಡೆಸಲಿದೆ ಎಂದು ಪ್ರಶ್ನಿಸಿದರು. ಕಾರಾಗೃಹದ ಡಿಜಿಪಿ ಎರಡು ಕೋಟಿ ರೂ. ಲಂಚ ಪಡೆದು ಜೈಲಿನಲ್ಲೇ ಎಲ್ಲ ವ್ಯವಸ್ಥೆ ಕಲ್ಪಿಸುತ್ತಿದ್ದಾರೆ ಎಂಬ ಬಗ್ಗೆ ಡಿಐಜಿ ಡಿ.ರೂಪಾ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ.
ಇಂಥ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಸರ್ಕಾರ ಕ್ರಮಕ್ಕೆ ಮುಂದಾಗಬೇಕಿತ್ತು. ಆದರೆ, ಅಕ್ರಮ ಬಯಲಿಗೆಳೆದ ಮಹಿಳಾ ಅಧಿಕಾರಿಯನ್ನೇ ಮೂಲೆಗುಂಪು ಮಾಡಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ ಎಂದು ದೂರಿದರು.
ಮಂಗಳೂರಿನಲ್ಲಿ ನಡೆದ ಆರ್‌ಎಸ್‌ಎಸ್ ಕಾರ್ಯಕರ್ತ ಶರತ್ ಮಡಿವಾಳರ ಕೊಲೆ ಆರೋಪಿಗಳನ್ನು ಈವರೆಗೂ ಬಂ ಧಿಸಿಲ್ಲ. ಈ ವಿಚಾರದಲ್ಲಿ ಸರ್ಕಾರ ರಾಜಕೀಯ ಮಾಡುತ್ತಿರುವುದು ಖಂಡನಾರ್ಹ. ಈ ಕೂಡಲೇ ಕೊಲೆ ಆರೋಪಿಗಳನ್ನು ಬಂಧಿ ಸಬೇಕು ಹಾಗೂ ಡಿಐಜಿ ರೂಪಾ ವರ್ಗಾವಣೆ ರದ್ದುಪಡಿಸುವುದರ ಜತೆಗೆ ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು
ಒತ್ತಾಯಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಜೆ.ಶರಣಪ್ಪಗೌಡ ಜಾಡಲದಿನ್ನಿ, ಮಾಜಿ ಶಾಸಕ ಎ.ಪಾಪಾರೆಡ್ಡಿ, ಹಿರಿಯ ಮುಖಂಡ ಆರ್.ತಿಮ್ಮಯ್ಯ, ಜಿಪಂ ಅಧ್ಯಕ್ಷೆ ಆದಿಮನಿ ವೀರಲಕ್ಷ್ಮೀ ಪರಮೇಶಪ್ಪ, ನಗರಸಭೆ ಸದಸ್ಯರಾದ ದೊಡ್ಡ ಮಲ್ಲೇಶಪ್ಪ, ಈ. ವಿನಯಕುಮಾರ, ಮಹಾಲಿಂಗ ರಾಂಪುರ, ನರಸಪ್ಪ ಯಕ್ಲಾಸಪುರ, ರಾಮು ಗಿಲ್ಲೇರಿ, ಶಶಿರಾಜ ಮಸ್ಕಿ, ಶ್ರೀನಿವಾಸರೆಡ್ಡಿ, ಎ.ಚಂದ್ರಶೇಖರ ಇತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kalaburagi: ಅನುಭವ ಮಂಟಪ ಸ್ಥಳ ಮರಳಿ ಪಡೆಯಲು ದೆಹಲಿ ಚಲೋ
Dharwad: 15 ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ, ನಾನೂ ಕೂಡ ಆಕಾಂಕ್ಷಿ: ವಿನಯ್ ಕುಲಕರ್ಣಿ
Karnataka Govt.,: ರಾಜ್ಯ ಪ್ರವಾಸೋದ್ಯಮ ನೀತಿಗೆ ಸಂಸದ ಕಾಗೇರಿ ಖಂಡನೆ
ಚಂದ್ರಶೇಖರ ಶ್ರೀ ವಿರುದ್ಧ ಕೇಸ್; ಒಕ್ಕಲಿಗರು ತಿರುಗಿ ಬೀಳುತ್ತಾರೆ: ಆರ್.ಅಶೋಕ್ ಎಚ್ಚರಿಕೆ
Notice: ಈ ಆಹಾರ ಪದ್ಧತಿಯಿಂದಲೇ ಪತ್ನಿಯ ಕ್ಯಾನ್ಸರ್ ಗುಣವಾಯಿತೆಂದ ಸಿಕ್ಸರ್ ಸಿಧುಗೆ ನೋಟಿಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.