ಮಾಲಿನ್ಯ ಪತ್ತೆಗೆ ತಂಡ ರಚಿಸಿ ಕ್ಷಿಪ್ರ ಕಾರ್ಯಾಚರಣೆ ನಡೆಸಿ: ಬಾವಾ
Team Udayavani, Jul 21, 2017, 5:00 AM IST
ಸುರತ್ಕಲ್: ಸುರತ್ಕಲ್ ಸುತ್ತಮುತ್ತ ಬೃಹತ್ ಕೈಗಾರಿಕೆಗಳಿಂದಾಗಿ ವಾಯು ಮಾಲಿನ್ಯ ಉಂಟಾಗಿರುವ ಹಿನ್ನೆಲೆಯಲ್ಲಿ ಶಾಸಕ ಮೊದಿನ್ ಬಾವಾ ನೇತೃತ್ವದಲ್ಲಿ ಗುರುವಾರ ಬೈಕಂಪಾಡಿ ವಾಯು ಮಾಲಿನ್ಯ ನಿಯಂತ್ರಣ ಮಂಡಳಿ ಕಚೇರಿಯಲ್ಲಿ ಸಭೆ ಜರಗಿತು.
ಜನ ವಸತಿ ಪ್ರದೇಶದಲ್ಲಿ ಮುಂಜಾನೆ ದುರ್ವಾಸನೆ ಹರಡುತ್ತಿದ್ದು ಈ ಬಗ್ಗೆ ಕಟ್ಟುನಿಟ್ಟಿನ ಕ್ರಮ ಅಗತ್ಯ. ವಾಯು ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಕಂಪೆನಿಗಳ ಪತ್ತೆಗೆ ಮಾಲಿನ್ಯ ನಿಯಂತ್ರಣ ಮಂಡಳಿ ಅ ಧಿಕಾರಿಗಳು ಮತ್ತು ಸುತ್ತಮುತ್ತಲಿನ ಕಂಪೆನಿ ಅ ಧಿಕಾರಿ ಗಳಿರುವ ತಂಡ ರಚಿಸಿ ಕ್ಷಿಪ್ರವಾಗಿ ಕಾರ್ಯಾಚರಿಸಬೇಕು. ತಂಡದ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಬೇಕು ಎಂದರು.
ಪೆಟ್ ಕೋಕ್ ನಿಷೇಧಿಸಿ
ಮಂಗಳೂರು ಭಾಗದಲ್ಲಿ ಎರಡು ಕಂಪೆನಿಗಳು ಪೆಟ್ ಕೋಕ್ ಬಳಸುತ್ತಿದ್ದು, ಇದನ್ನು ತತ್‌ಕ್ಷಣ ನಿಷೇ ಧಿಸಬೇಕು. ಇದರ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿ ಕಾರಿಗಳು ಸೂಕ್ತ ಕ್ರಮ ಕೈಗೊಳ್ಳ ಬೇಕಾಗಿದೆ ಎಂದರು.
ಕೆಐಎಡಿಬಿ ಅ ಧೀನದಲ್ಲಿರುವ ಬೈಕಂಪಾಡಿ ಕೈಗಾರಿಕೆ ವಲಯದ ರಸ್ತೆ ಡಾಮರು ಕಾಮಗಾರಿಗೆ 12 ಕೋ.ರೂ. ಬಿಡುಗಡೆಯಾಗಿದ್ದು, ಕಾಮಗಾರಿ ಆರಂಭವಾಗಲಿದೆ. ಘನ ವಾಹನಗಳ ಸಂಚಾರದಿಂದ ರಸ್ತೆ ಸಂಪೂರ್ಣ ಕೆಟ್ಟು ಹೋಗಿದ್ದು ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ಸೂಚಿಸಲಾಗಿದೆ ಎಂದು ಶಾಸಕರು ತಿಳಿಸಿದರು.
ಎಸ್‌ಟಿಪಿ ಘಟಕ ಸ್ಥಾಪಿಸಲು ಸುಮಾರು 80 ಕೋ. ರೂ. ಯೋಜನೆ ರೂಪಿಸಿದ್ದು, ಇದಕ್ಕಾಗಿ ನಿವೇಶನವನ್ನು ಗುರುತಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಎಸ್‌ಟಿಪಿ ಘಟಕ ನಿರ್ಮಾಣವಾದಲ್ಲಿ ಬಗ್ಗುಂಡಿ ಕೆರೆಯ ಸ್ವತ್ಛತೆ ಸಾಧ್ಯವಾಗುತ್ತದೆ. ಸ್ಥಳೀಯ ಸಂಸ್ಥೆಗಳು ತಮ್ಮ ಸಿಎಸ್‌ಆರ್ ನಿಧಿಯನ್ನು ಸ್ಥಳೀಯ ಪ್ರದೇಶಾಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.
ಎನ್‌ಐಟಿಕೆಯ ಪ್ರೊಫೆಸರ್, ದ.ಕ. ಪ್ರಕೃತಿ ವಿಕೋಪ ತಡೆ ಸಮಿತಿ ತಜ್ಞರಾದ ಶ್ರೀನಿಕೇತನ್, ಮಾಲಿನ್ಯ ನಿಯಂತ್ರಣ ಮಂಡಳಿಯ ರಾಜಶೇಖರ ಪುರಾಣಿಕ್, ಎಂಆರ್‌ಪಿಎಲ್, ಬಿಎಎಸ್‌ಎಫ್, ಎಂಎಸ್‌ಇಝಡ್, ಎಂಸಿಎಫ್, ಕೆಐಒಸಿಎಲ್, ಎಚ್‌ಪಿಸಿಎಲ್ ಮತ್ತಿತರ ಸಂಸ್ಥೆಯ ಅ ಧಿಕಾರಿಗಳು ಉಪಸ್ಥಿತರಿದ್ದರು.
ಸ್ಥಳೀಯರಿಗೆ ಉದ್ಯೋಗ ನೀಡಿ
ಸ್ಥಳೀಯ ಕಂಪೆನಿಗಳು ಗುತ್ತಿಗೆ ಆಧಾರದಲ್ಲಿ ಉದ್ಯೋಗಾವಕಾಶ ನೀಡುತ್ತಿರುವ ಕಾರಣ ಉತ್ತರ ಭಾರತದ ಕಾರ್ಮಿಕರೇ ಹೆಚ್ಚಿದ್ದಾರೆ. ಸಣ್ಣ ಪುಟ್ಟ ಗುತ್ತಿಗೆ ಸ್ಥಳೀಯರಿಗೆ ಸಿಗುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಶಾಸಕರು, ಈ ಬಗ್ಗೆ ಕಂಪೆನಿಗಳು ತಮ್ಮ ನೀತಿಯನ್ನು ಪುನರ್ ವಿಮರ್ಶಿಸಿ ಸ್ಥಳೀಯ ಪ್ರತಿಭಾವಂತರಿಗೆ ಹೆಚ್ಚಿನ ಉದ್ಯೋಗಾವಕಾಶ ಒದಗಿಸಬೇಕು.
– ಮೊದಿನ್ ಬಾವಾ, ಶಾಸಕರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Protest: ಬಾಂಗ್ಲಾದಲ್ಲಿ ಚಿನ್ಮಯ ಕೃಷ್ಣದಾಸ ಪ್ರಭು ಬಂಧನ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ
Train: ಮುರುಡೇಶ್ವರ ಎಕ್ಸ್‌ಪ್ರೆಸ್ ಸಮಯ ಬದಲಾವಣೆ ಬೇಡ
Mangaluru: ಮದ್ಯ ಅಕ್ರಮ ಸಾಗಾಟ, ದಾಸ್ತಾನು; ಆರೋಪಿ ಖುಲಾಸೆ
National Highway ಅವ್ಯವಸ್ಥೆ ಸಂಬಂಧಿಸಿ ನಾಗರಿಕರ ಅಹವಾಲಿಗೆ ವೇದಿಕೆ
Illegal sand mining: ರಾ. ಹಸುರು ಪ್ರಾಧಿಕಾರದಿಂದ ಸ್ವಯಂಪ್ರೇರಿತ ದೂರು ದಾಖಲು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Kottigehara: ನಾಯಿ ದಾಳಿಯಿಂದ ಮಗುವಿಗೆ ಗಾಯ
IPL 2024: ಭಾರತ ಕ್ರಿಕೆಟ್ ನಾಯಕನಾಗುವ ಉದ್ದೇಶ ಪಂತ್ ಗಿದೆ: ಜಿಂದಾಲ್
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.