ಅಪಾರ್ಟ್‌ಮೆಂಟ್‌ಗಳಿಂದ 200 ಕೋಟಿ ರೂ. ತೆರಿಗೆ ನಷ್ಟ

Team Udayavani, Jul 21, 2017, 11:11 AM IST

mk-gunashekar.jpg

ಬೆಂಗಳೂರು: ನಗರದಲ್ಲಿ ನಿರ್ಮಾಣವಾಗಿರುವ ಸಮುತ್ಛಯಗಳಿಂದ ತೆರಿಗೆ ಸಂಗ್ರಹಿಸುವಲ್ಲಿ ಪಾಲಿಕೆಯ ಕೆಳಹಂತದ ಅಧಿಕಾರಿಗಳು ಲೋಪವೆಸಗಿದ್ದು, ಪಾಲಿಕೆಗೆ 200 ಕೋಟಿ ರೂ. ನಷ್ಟವಾಗಿದೆ ಎಂದು ತೆರಿಗೆ ಮತ್ತು ಆರ್ಥಿಕ ಸ್ಥಾಯಿ ಸಮಿತಿ ಅಧ್ಯಕ್ಷ ಎಂ.ಕೆ.ಗುಣಶೇಖರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ನಗರದಲ್ಲಿ ನೂರಾರು ಅಪಾರ್ಟ್‌ಮೆಂಟ್‌ಗಳು ನಿರ್ಮಾಣವಾಗಿದೆ. ಜತೆಗೆ ಪಾಲಿಕೆಯಿಂದ ನಾಲ್ಕೈದು ವರ್ಷಗಳ ಹಿಂದೆಯೇ ಮನೆಗಳಿಗೆ ಸ್ವಾಧೀನಾನುಭವ ಪ್ರಮಾಣ ಪತ್ರಗಳನ್ನು ನೀಡಲಾಗಿದೆ. ಆದರೂ, ಪಾಲಿಕೆ ಅಧಿಕಾರಿಗಳು ಅವುಗಳಿಗೆ ತೆರಿಗೆ ಮಾಪನ ಮಾಡಿ ಆಸ್ತಿ ತೆರಿಗೆ ಸಂಗ್ರಹಿಸುತ್ತಿಲ್ಲ. 

ಲಭ್ಯವಾಗಿರುವ ಮಾಹಿತಿಯಂತೆ ಪಾಲಿಕೆಯ ವ್ಯಾಪ್ತಿಯಲ್ಲಿ 343 ಗಗನಚುಂಬಿ ವಸತಿ ಸಮುತ್ಛಯಗಳಲ್ಲಿನ 25 ಸಾವಿರ ಮನೆಗಳಿಗೆ ಪಾಲಿಕೆಯಿಂದ ಒಸಿ ನೀಡಿ ನಾಲ್ಕೈದು ವರ್ಷಗಳು ಕಳೆದಿವೆ. ಇಂತಹ ಕಟ್ಟಡಗಳಿಗೆ ಅಧಿಕಾರಿಗಳು ಆಸ್ತಿ ತೆರಿಗೆ ನಿಗದಿಪಡಿಸಿಲ್ಲ.

ಇದರೊಂದಿಗೆ ಕೆಲವು ಕಡೆಗಳಲ್ಲಿ ಅಧಿಕಾರಿಗಳು ಮಾಲೀಕರೊಂದಿಗೆ ಶಾಮೀಲಾಗಿ ನಾಲ್ಕೈದು ವರ್ಷಗಳ ತೆರಿಗೆ ಬದಲಿಗೆ ಕೇವಲ ಒಂದು ವರ್ಷದ ತೆರಿಗೆ ಸಂಗ್ರಹಿಸಿರುವ ದೂರುಗಳು ಬಂದಿವೆ. ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳುವ ಕುರಿತ ಹಾಗೂ ಪ್ರಕರಣ ತನಿಖೆ ನಡೆಸುವಂತೆ ಬಿಬಿಎಂಪಿ ಪುನರ್‌ ರಚನಾ ಸಮಿತಿಯನ್ನು ಕೋರಲಾಗುವುದು ಎಂದರು. 

ಪಾಲಿಕೆ ಕೇಂದ್ರ ಕಚೇರಿಯ ನಗರ ಯೋಜನೆ ವಿಭಾಗದಿಂದ ಒಸಿ ನೀಡಿರುವ ಆಸ್ತಿಗಳಿಂದಲೇ ಇಷ್ಟು ಪ್ರಮಾಣದ ತೆರಿಗೆ ವಂಚನೆಯಾಗಿದೆ. ವಲಯ ಮಟ್ಟದಲ್ಲಿ ಕಟ್ಟಡಗಳಿಗೆ ನೀಡಲಾಗಿರುವ ಒಸಿಗಳ ಮಾಹಿತಿ ನೀಡುವಂತೆ ಕೋರಿ ಹಲವು ದಿನಗಳು ಕಳೆದರೂ ಮಾಹಿತಿ ನೀಡಿಲ್ಲ. ಈ ಕುರಿತು ಅಧಿಕಾರಿಗಳು ಹಾಗೂ ಆಯುಕ್ತರಿಗೆ 15 ಪತ್ರಗಳನ್ನು ಬರೆಯಲಾಗಿದೆ. ಜತೆಗೆ ಆಯುಕ್ತರು ಮಾಹಿತಿಯನ್ನು ಕೋರಿದರೂ ಈವರೆಗೆ ಯಾವುದೇ ಮಾಹಿತಿ ವಲಯಗಳಿಂದ ಬಂದಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. 

ಆಯುಕ್ತರಿಗೆ ಹಿಡಿತವಿಲ್ಲ: ಬಿಬಿಎಂಪಿ ಸುಮಾರು 800 ಚದರ ಮೀಟರ್‌ ವ್ಯಾಪ್ತಿಯಿರುವುದರಿಂದ ಒಬ್ಬರು ಆಯುಕ್ತರಿಂದ ಆಡಳಿತ ನಡೆಸುವುದು ಕಷ್ಟ. ಪಾಲಿಕೆಯ ಕೆಳ ಹಂತದ ಅಧಿಕಾರಿಗಳು ಆಯುಕ್ತರ ಆದೇಶಕ್ಕೂ ಯಾವುದೇ ಕಿಮ್ಮತ್ತು ನೀಡುತ್ತಿಲ್ಲ. ಆ ಹಿನ್ನೆಲೆಯಲ್ಲಿ ಪಾಲಿಕೆಯ ಅಧಿಕಾರಿಗಳನ್ನು ಹಿಡಿತದಲ್ಲಿಟ್ಟುಕೊಳ್ಳಲು ಆಯುಕ್ತರು ಸ್ವಲ್ಪಮಟ್ಟಿಗೆ ವಿಫ‌ಲವಾಗಿದ್ದಾರೆ ಎಂದು ಗುಣಶೇಖರ್‌ ತಿಳಿಸಿದರು. 

ಟಾಪ್ ನ್ಯೂಸ್

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Maharashtra; Ekmath hey to safe hey says Shivsena

Maharashtra: ಏಕ್‌ನಾಥ್‌ ಹೇ ತೋ ಸೇಫ್ ಹೇ: ಶಿಂಧೆ ಶಿವಸೇನೆ ಹೊಸ ಮಂತ್ರ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ವಿಷಸೇವಿಸಿ ಆತ್ಯಹ*ತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ,ಚಿಕಿತ್ಸೆಗೆ ಸ್ಪಂದಿಸದೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು 

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

CCB Police: ವಕೀಲೆ ಜೀವಾ ಆತ್ಮಹತ್ಯೆ ಕೇಸ್‌ ಸಿಸಿಬಿಗೆ ವರ್ಗಾವಣೆ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

Arrested: ಹೊಯ್ಸಳ ಪೊಲೀಸ್‌ ಮೇಲೆ ಹಲ್ಲೆ; ಬಂಧನ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Dharmasthala: ಭಕ್ತರ ಭಕ್ತಿಯ ಪ್ರೀತಿಗೆ ಶರಣಾಗಿರುವೆ: ಡಾ| ಹೆಗ್ಗಡೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Railway-Minister-MP-DK

Udupi: ಕೊಂಕಣ ರೈಲು ವಿಲೀನಕ್ಕೆ ರೈಲ್ವೆ ಸಚಿವರಿಂದ ಸಹಮತ: ಕೋಟ ಶ್ರೀನಿವಾಸ ಪೂಜಾರಿ

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.