ಭಿನ್ನಾಭಿಪ್ರಾಯ ಬದಿಗೊತ್ತಿ ಸಮಾಜದ ಒಳಿತಿಗೆ ಒಂದಾಗಿ


Team Udayavani, Jul 21, 2017, 11:35 AM IST

mys2.jpg

ಮೈಸೂರು: ವೀರಶೈವ ಹಾಗೂ ಲಿಂಗಾಯತ ಸಮುದಾಯ ಬೇರೆ ಬೇರೆ ಎಂಬ ಭಿನ್ನಾಭಿಪ್ರಾಯ ಬದಿಗೊತ್ತಿ ಎಲ್ಲರೂ ಒಂದಾಗಿ ಮುನ್ನಡೆಯುವ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸಬೇಕಿದೆ ಎಂದು ಪೌರಾಡಳಿತ ಸಚಿವ ಈಶ್ವರ್‌ ಖಂಡ್ರೆ ಹೇಳಿದರು.

ಅಖೀಲ ಭಾರತ ವೀರಶೈವ ಮಹಾಸಭಾ ವತಿಯಿಂದ ನಗರದ ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠದಲ್ಲಿ ಅಖೀಲ ಭಾರತ ವೀರಶೈವ ಮಹಾಸಭಾ ಸಂಸ್ಥಾಪಕ ಹಾನಗಲ್‌ ಕುಮಾರಸ್ವಾಮಿ ಅವರ 150ನೇ ಜಯಂತಿ ಅಂಗವಾಗಿ ಆಯೋಜಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಶ್ರೀ ಹಾನಗಲ್ಲ ಕುಮಾರಸ್ವಾಮಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.

ಇತ್ತೀಚಿನ ದಿನಗಳಲ್ಲಿ ವೀರಶೈವ ಹಾಗೂ ಲಿಂಗಾಯತ ಸಮುದಾಯ ಬೇರೆ ಬೇರೆ ಎಂದು ಹೇಳಲಾಗುತ್ತಿದ್ದು, ಈ ಹಿನ್ನೆಲೆ ಎರಡು ಸಮುದಾಯವನ್ನು ಒಗ್ಗೂಡಿಸಲು ಮಠಾಧೀಶರುಗಳು ಮುಂದಾಗಬೇಕಿದೆ. ಸಂಘಟನೆಯಲ್ಲಿ ನಾವು ದುರ್ಬಲರಾಗುತ್ತಿದ್ದು, ಇಂದಿನ ಯುವ ಸಮೂಹ ತಮ್ಮದೇ ಹಾದಿಯಲ್ಲಿ ಸಾಗುವ ಮೂಲಕ ದಿಕ್ಕು ತಪ್ಪುತ್ತಿದ್ದಾರೆ. ಹೀಗಾಗಿ ಯುವ ಸಮುದಾಯದಲ್ಲಿರುವ ಚೈತನ್ಯವನ್ನು ಸುದುಪಯೋಗ ಮಾಡಿಕೊಂಡು ಇವರಲ್ಲಿ ಉತ್ತಮ ಸಂಸ್ಕಾರ ಬೆಳೆಸಬೇಕಿದೆ. ಆ ಮೂಲಕ ಎಲ್ಲರೂ ಒಂದಾಗಿ ಮುನ್ನಡೆದಾಗ ಮಾತ್ರವೇ ಸಮಾಜದ ಏಳಿಗೆ ಸಾಧ್ಯವಾಗಲಿದೆ ಎಂದರು.

ವೀರಶೈವ ಅತ್ಯಂತ ಪುರಾತನ ಧರ್ಮವಾಗಿದ್ದು, ಇದು ವಿಶ್ವಧರ್ಮವಾಗಿ ಸಮಾಜದಲ್ಲಿ ಸಮಾನತೆ, ಸ್ತ್ರೀ ಸ್ವಾತಂತ್ರ್ಯ ಸೇರಿದಂತೆ ಸಮಾಜಕ್ಕೆ ಒಳಿತನ್ನು ಮಾಡುವುದು ಈ ಧರ್ಮದ ಉದ್ದೇಶವಾಗಿದೆ. ಹೀಗಾಗಿಯೇ ಹಲವು ಶತಮಾನಗಳಿಂದಲೂ ಬಸವಣ್ಣ, ಹಾನಗಲ್‌ ಕುಮಾರಸ್ವಾಮಿ ಸೇರಿದಂತೆ ಅನೇಕ ಮಹಾಪುರುಷರು ಮನುಕುಲದ ಒಳಿತಿಗಾಗಿ ಶ್ರಮಿಸುವ ಮೂಲಕ ಅಂಧಕಾರದಲ್ಲಿದ್ದ ಸಮಾಜ ಉಳಿಸಿ, ಬೆಳೆಸಲು ಪ್ರಯತ್ನಿಸಿದ್ದಾರೆ ಎಂದರು ತಿಳಿಸಿದರು.

ದೇಶದ ಬಹುತೇಕ ಮಠಗಳು ತಮ್ಮ ಧರ್ಮದ ಕುರಿತಂತೆ ಜಾಗೃತಿ ಮೂಡಿಸಿದರೆ, ವೀರಶೈವ ಸಮುದಾಯದ ಮಠಗಳು ಸಮಾಜದ ಎಲ್ಲಾ ಧರ್ಮದ ಒಳಿತಿಗಾಗಿ ಕೆಲಸ ಮಾಡುತ್ತಿವೆ. ಪ್ರತಿ ವರ್ಷವೂ ಸಮಾಜದ ಒಳಿತಿಗಾಗಿ ಶ್ರಮಿಸಿದ ಅನೇಕ ಮಹಾಪುರುಷರ ಜಯಂತಿ ಅಂಗವಾಗಿ ಉಪನ್ಯಾಸ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ. ಆದರೆ ಅವರುಗಳು ಸಮಾಜಕ್ಕೆ ನೀಡಿದ ಕೊಡುಗೆ, ನಿಸ್ವಾರ್ಥ ಸೇವಾ ಮನೋಭಾವನೆಯನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಇಂತಹ ಕಾರ್ಯಕ್ರಮಗಳಿಗೆ ಅರ್ಥ ಸಿಗಲಿದೆ ಎಂದು ಹೇಳಿದರು.

ಬಾಲಕೋಟೆ ಇಳಕಲ್‌ನ ಹಿರೇಮಠದ ಪಂಡಿತ್‌ ಅನ್ನದಾನ ಶಾಸಿಗಳು ವಿಶೇಷ ಉಪನ್ಯಾಸ ನೀಡಿದರು. ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಹೊಸಮಠದ ಚಿದಾನಂದ ಸ್ವಾಮೀಜಿ, ಮಲ್ಲನಮೂಲೆ ಮಠದ ಚೆನ್ನಬಸವ ದೇಶಿಕೇಂದ್ರ ಸ್ವಾಮೀಜಿ, ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ, ವಿರಕ್ತ ಮಠದ ಶಿವಬಸವ ಸ್ವಾಮೀಜಿ, ಅಡವಿ ಸಿದ್ದೇಶ್ವರ ಮಠದ ಅಮರ ಸಿದ್ದೇಶ್ವರ ಸ್ವಾಮೀಜಿ, ಅಖೀಲ ಭಾರತ ವೀರಶೈವ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಎಚ್‌.ವಿ.ಹಿನಕಲ್‌ ಬಸವರಾಜು ಇನ್ನಿತರರು ಹಾಜರಿದ್ದರು.

ಟಾಪ್ ನ್ಯೂಸ್

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

1-asaaasa

Hindutva ಮತ್ತು ಹಿಂದೂಗಳಿಗೆ ಒಳ್ಳೆಯದಾಗಲಿ: ದೇವರ ಹುಂಡಿಗೆ ಪತ್ರ!

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

BJP ಶಾಸಕ ಬಸನಗೌಡ ಪಾಟೀಲ ಯತ್ನಾಳ ವಿರುದ್ದ‌ ದೂರು ದಾಖಲು

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Attigere: ಶಾಲಾ ಆವರಣದಲ್ಲಿ ಬರೋಬ್ಬರಿ 15 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

Vinay Kulakarni

BJP ದ್ವೇಷದ ರಾಜಕಾರಣಕ್ಕೆ ನಾನೇ ದೊಡ್ಡ ಸಾಕ್ಷಿ‌: ಶಾಸಕ ವಿನಯ ಕುಲಕರ್ಣಿ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

Road Mishap ಸ್ಲೀಪರ್ ಕೋಚ್ ಬಸ್ ಪಲ್ಟಿ: ಓರ್ವ ಮೃತ್ಯು; 11 ಮಂದಿಗೆ ಗಾಯ

CM Siddaramaiah slams BJP about Ganeshotsav riot

Mysuru; ಬಿಜೆಪಿಯವರ ಕುಮ್ಮಕ್ಕಿನಿಂದಲೇ ರಾಜ್ಯದಲ್ಲಿ ಗಲಾಟೆ: ಸಿಎಂ ಸಿದ್ದರಾಮಯ್ಯ ಆರೋಪ

ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysuru Dasara 2024: ಮೈಸೂರು ದಸರಾ ಉದ್ಘಾಟನೆಗೆ ಸಾಹಿತಿ ಪ್ರೊ.ಹಂ.ಪ.ನಾಗರಾಜಯ್ಯ

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Mysore Dasara: ಮರದ ಅಂಬಾರಿ ಹೊತ್ತು ಅಭಿಮನ್ಯು ತಾಲೀಮು

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

Hunasur: ಸಾವಿನಲ್ಲೂ ಒಂದಾದ ಅಕ್ಕ- ತಮ್ಮ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

R. Ashok: “ಮುಸ್ಲಿಂ ಭಯೋತ್ಪಾದಕರಿಗೆ ಸರಕಾರದಿಂದಲೇ ಕುಮ್ಮಕ್ಕು’

1-pale

Chikkodi; ಈದ್ ಮಿಲಾದ್ ಮೆರವಣಿಗೆಯಲ್ಲಿ ಹಾರಾಡಿದ ಪ್ಯಾಲೇಸ್ತೀನ್ ಧ್ವಜ

Untitled-1

Kasaragod ಅಪರಾಧ ಸುದ್ದಿಗಳು

BSF (2)

Budgam; ಬಸ್ ಪ್ರಪಾತಕ್ಕೆ ಬಿದ್ದು 3 ಯೋಧರು ಮೃ*ತ್ಯು, 9 ಮಂದಿಗೆ ಗಂಭೀರ ಗಾಯ

Suspend

MLA ಇ. ಚಂದ್ರಶೇಖರನ್‌ ವಿರುದ್ಧ ಫೇಸ್‌ಬುಕ್‌ ಪೋಸ್ಟ್‌; ಡೆಪ್ಯೂಟಿ ತಹಶೀಲ್ದಾರ್‌ ಅಮಾನತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.