ಲಿಂಗಾಯತ ಧರ್ಮ ಎನ್ನುವುದೇ ಸೂಕ್ತ: ಸಿದ್ದು
Team Udayavani, Jul 21, 2017, 11:53 AM IST
ಧಾರವಾಡ: ರಾಜ್ಯದಲ್ಲಿ ವೀರಶೈವ ಮತ್ತು ಲಿಂಗಾಯತ ಸ್ವತಂತ್ರ ಧರ್ಮದ ಚರ್ಚೆ ನಡೆಯುತ್ತಿದ್ದು, ಈ ಪೈಕಿ ಲಿಂಗಾಯತ ಧರ್ಮ ಎನ್ನುವುದೇ ಸೂಕ್ತವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದಕ್ಕೆ ಮತ್ತು ವಿಜಯಪುರ ಮಹಿಳಾ ವಿಶ್ವವಿದ್ಯಾಲಯಕ್ಕೆ ಅಕ್ಕಮಹಾದೇವಿ ಹೆಸರು ನಾಮಕರಣ ಮಾಡಿದ್ದಕ್ಕೆ ಇಲ್ಲಿನ ಮುರುಘಾಮಠದಲ್ಲಿ ಶ್ರೀಮಠದಿಂದ ಗುರುವಾರ ಹಮ್ಮಿಕೊಂಡಿದ್ದ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಬಸವಣ್ಣ 12ನೇ ಶತಮಾನದಲ್ಲಿಯೇ ಶ್ರೇಣಿಕೃತ ಜಾತಿ ವ್ಯವಸ್ಥೆಯನ್ನು ದಿಕ್ಕರಿಸಿಕೊಂಡು ಹೊರ ಬಂದು ಸಮಾನತೆ ಸಮಾಜ ಕಟ್ಟಲು ಲಿಂಗಾಯತ ಧರ್ಮ ಸ್ಥಾಪಿಸಿದರು. ಈ ಹಿಂದೆ ಬೆಂಗಳೂರಿನಲ್ಲಿ ವೀರಶೈವ ಮಹಾಸಭಾದಿಂದ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಕೆಲವರು ವೀರಶೈವ ಲಿಂಗಾಯತ ಧರ್ಮ ಎಂದು ಶಿಫಾರಸು ಮಾಡುವಂತೆ ಸಲಹೆ ನೀಡಿದ್ದರು.
ಆದರೆ ನನ್ನ ದೃಷ್ಟಿಯಲ್ಲಿ ಹೇಳುವುದಾದರೆ ಲಿಂಗಾಯತ ಧರ್ಮ ಎನ್ನುವುದೇ ಸೂಕ್ತ ಎಂದರು. ಶೀಘ್ರವೇ ಈ ಕುರಿತು ಮಹತ್ವದ ಸಭೆ ಕರೆದು ತಜ್ಞರು, ವಿದ್ವಾಂಸರು ಮತ್ತು ಸಮಾಜದ ಮುಖಂಡರೊಂದಿಗೆ ಚರ್ಚಿಸುತ್ತೇನೆ. ಅಂತಿಮವಾಗಿ ಎಲ್ಲರೂ ಯಾವ ನಿರ್ಣಯ ತೆಗೆದುಕೊಳ್ಳುತ್ತಾರೋ, ಅದನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ನಾನು ಸಿದ್ಧನಿದ್ದೇನೆ ಎಂದರು.
ಹಿಂದೂ ಧರ್ಮವೇ ಇಲ್ಲ: ಮುಂಡರಗಿ ತೋಂಟದಾರ್ಯ ಮಠದ ಶ್ರೀ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, ದೇಶದಲ್ಲಿ ಹಿಂದೂ ಧರ್ಮವೇ ಇಲ್ಲ. ಶ್ರೇಣಿಕೃತ ಸಮಾಜದಲ್ಲಿದ್ದ ಶೋಷಣೆ ವಿರುದ್ಧ ಬಸವಣ್ಣ ಹೋರಾಟ ನಡೆಸಿ ಲಿಂಗಾಯತ ಧರ್ಮ ಸ್ಥಾಪಿಸಿದ್ದಾನೆ.
ಲಿಂಗಾಯತ ಧರ್ಮ ಸ್ವತಂತ್ರವಾದದ್ದು ಎಂಬುದಕ್ಕೆ ಅಗತ್ಯವಾದ ಎಲ್ಲಾ ದಾಖಲೆಗಳು ಮತ್ತು ಮಾಹಿತಿಯನ್ನು ಮುಖ್ಯಮಂತ್ರಿಗಳಿಗೆ ನಾವು ಒದಗಿಸುತ್ತೇವೆ. ಅವರು ಲಿಂಗಾಯತ ಧರ್ಮದ ಹೆಸರನ್ನೇ ಕೇಂದ್ರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿದರು.
ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಜಿಲ್ಲಾ ಉಸ್ತುವಾರಿ ಸಚಿವ ವಿನಯ್ ಕುಲಕರ್ಣಿ, ಮಾಜಿ ಸಭಾಪತಿ ವೀರಣ್ಣ ಮತ್ತಿಕಟ್ಟಿ, ಶಾಸಕ ಪ್ರಸಾದ್ ಅಬ್ಬಯ್ಯ ಸೇರಿದಂತೆ ಮುರುಘಾಮಠದ ಆಡಳಿತ ವರ್ಗ ಮತ್ತು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad: ಡ್ರಗ್ಸ್ ಯುವ ಶಕ್ತಿಗೆ ಮಾರಕ… ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
ತಮ್ಮದೇ ಮಕ್ಕಳ “ಅಪಹರಣ’ನಾಟಕವಾಡಿದ ಗೃಹಿಣಿಯರು
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.