ಬರ್ತ್ ಡೇ ಆಚರಣೆಗೂ ಮುನ್ನ ವಾಘೇಲಾಗೆ ಗೇಟ್ ಪಾಸ್ ಕೊಟ್ಟ ಕಾಂಗ್ರೆಸ್!
Team Udayavani, Jul 21, 2017, 3:07 PM IST
ನವದೆಹಲಿ: ಹುಟ್ಟು ಹಬ್ಬ ಆಚರಿಸಿಕೊಳ್ಳುವ 24ಗಂಟೆ ಮೊದಲೇ ಕಾಂಗ್ರೆಸ್ ಪಕ್ಷ ತನ್ನನ್ನು ಉಚ್ಛಾಟಿಸಿರುವುದಾಗಿ ಹಿರಿಯ ಕಾಂಗ್ರೆಸ್ ಮುಖಂಡ, ಗುಜರಾತ್ ಮಾಜಿ ಮುಖ್ಯಮಂತ್ರಿ ಶಂಕರ ಸಿಂಗ್ ವಘೇಲಾ ಶುಕ್ರವಾರ ತಿಳಿಸಿದ್ದಾರೆ.
ಶುಕ್ರವಾರ ಗಾಂಧಿನಗರದಲ್ಲಿ ತಮ್ಮ 77ನೇ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ಸಂದರ್ಭದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ 24ಗಂಟೆ ಹಿಂದೆ ನನ್ನ ಪಕ್ಷದಿಂದ ಉಚ್ಚಾಟಿಸಿದೆ ಎಂದರು.
ನಾನು ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತಿಲ್ಲ ಎಂದು ಹೇಳುವ ಮೂಲಕ ವಾಘೇಲಾ ಅವರು ಬಿಜೆಪಿಗೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹಕ್ಕೆ ಪುಷ್ಠಿ ನೀಡಿದೆ. ಆದರೆ ತಾನು ಬಿಜೆಪಿಗೆ ಯಾವುದೇ ಕಾರಣಕ್ಕೂ ಸೇರ್ಪಡೆಗೊಳ್ಳುವುದಿಲ್ಲ ಎಂದು ವಘೇಲಾ ತಿಳಿಸಿದ್ದಾರೆ. ಕಾಂಗ್ರೆಸ್ ಪಕ್ಷ ತನ್ನನ್ನು ಉಚ್ಚಾಟಿಸುವುದು ಬೇಡ, ನಾನು ಪಕ್ಷದ ಎಲ್ಲಾ ಹುದ್ದೆಗಳಿಗೂ ರಾಜೀನಾಮೆ ನೀಡುವುದಾಗಿ ಹೇಳಿದರು.
ಜನಸಂಘದಿಂದ ರಾಜಕೀಯ ಜೀವನ ಆರಂಭಿಸಿದ್ದ ವಘೇಲಾ ಬಳಿಕ ಜನತಾ ಪಕ್ಷದ ಜೊತೆ ಗುರುತಿಸಿಕೊಂಡಿದ್ದರು. ವಿವಿಧ ಕಾರಣಗಳಿಂದ ಜನತಾಪಕ್ಷ ಹೋಳಾದ ನಂತರ ಬಿಜೆಪಿಗೆ ಸೇರ್ಪಡೆಗೊಂಡಿದ್ದರು. 1996ರಲ್ಲಿ ಬಿಜೆಪಿಯಿಂದ ಹೊರಬಂದ ವಘೇಲಾ ರಾಷ್ಟ್ರೀಯ ಜನತಾ ಪಾರ್ಟಿಯನ್ನು ಹುಟ್ಟುಹಾಕಿದ್ದರು. 1996ರಿಂದ 1997ರವರೆಗೆ ಗುಜರಾತ್ ಮುಖ್ಯಮಂತ್ರಿಯಾಗಿದ್ದರು. ಬಳಿಕ ವಘೇಲಾ ಪಕ್ಷ ಕಾಂಗ್ರೆಸ್ ಜತೆ ವಿಲೀನಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Media powerhouse: ರಿಲಯನ್ಸ್- ಡಿಸ್ನಿ ಕಂಪನಿ ವಿಲೀನ ಈಗ ಅಧಿಕೃತ
MUST WATCH
ಹೊಸ ಸೇರ್ಪಡೆ
Zebra: ಡಾಲಿ ಜೀಬ್ರಾಗೆ ಮೆಗಾಸ್ಟಾರ್ ಸಾಥ್
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
Mumbai: ಲಾರೆನ್ಸ್ ಬಿಷ್ಣೋಯ್ ಹಿಟ್ ಲಿಸ್ಟ್‌ನಲ್ಲಿ ಶ್ರದ್ಧಾ ವಾಕರ್ ಹತ್ಯೆ ಆರೋಪಿ: ವರದಿ
Test: ಇಂಗ್ಲೆಂಡ್ ಸರಣಿಯ ಬಳಿಕ ಟೆಸ್ಟ್ ಕ್ರಿಕೆಟ್ ನಿಂದ ದೂರವಾಗಲಿದ್ದಾರೆ ಕಿವೀಸ್ ಆಟಗಾರ
Priyanka Upendra: ಬ್ಯೂಟಿಫುಲ್ ಲೈಫ್ ನಲ್ಲಿ ಪ್ರಿಯಾಂಕಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.