1 ತಿಂಗಳಿನಲ್ಲಿ ಗ್ರಾ.ಪಂ.ನಲ್ಲಿ 5,ನಗರದಲ್ಲಿ 10 ಮನೆ ಪೂರ್ಣ ಕಡ್ಡಾಯ


Team Udayavani, Jul 22, 2017, 6:20 AM IST

Hosing.gif

ಮಂಗಳೂರು: ಸರಕಾರದ ವಿವಿಧ ವಸತಿ ಯೋಜನೆಯಡಿ ಪ್ರತೀ ತಿಂಗಳು ಆಯಾ ಗ್ರಾ. ಪಂ.ವ್ಯಾಪ್ತಿಯಲ್ಲಿ 5 ಮನೆ ಹಾಗೂ ನಗರ/ಪಟ್ಟಣ ಪ್ರದೇಶಗಳ ವ್ಯಾಪ್ತಿಯಲ್ಲಿ 10 ಮನೆ ನಿರ್ಮಾಣ ಕಾರ್ಯವನ್ನು ಕಡ್ಡಾಯವಾಗಿ ಪೂರ್ಣಗೊಳಿಸುವಂತೆ ರಾಜೀವ ಗಾಂಧೀ ಗ್ರಾಮೀಣ ವಸತಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಮನೀಷ್‌ ಮೌದ್ಗಿಲ್‌ ಅವರು ನಿರ್ದೇಶಿಸಿದ್ದಾರೆ.

ಶುಕ್ರವಾರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳ ಪ್ರಗತಿ ಪರಿಶೀಲನೆಗೆ ಅಧಿಕಾರಿಗಳ ಸಭೆ ನಡೆಸಿ ಅವರು ಮಾತನಾಡಿದರು. ಗ್ರಾ. ಪಂ.ಗಳ ವ್ಯಾಪ್ತಿಯಲ್ಲಿ ಮಂಜೂರುಗೊಂಡಿರುವ ಮನೆಗಳ ನಿರ್ಮಾಣದಲ್ಲಿ ಗುರಿ ಸಾಧಿಸ
ದಿದ್ದರೆ, ಆಯಾ ಜಿ. ಪಂ. ಸಿಇಒಗಳನ್ನೇ ಹೊಣೆಗಾರರನ್ನಾಗಿಸ ಲಾಗುವುದು ಎಂದು ಅವರು ಎಚ್ಚರಿಸಿದರು.
ಗ್ರಾಮೀಣ ಪ್ರದೇಶಗಳಲ್ಲಿ ಮನೆಗಳ ನಿರ್ಮಾಣದಲ್ಲಿ ಆಯಾ ತಾ. ಪಂ. ಕಾರ್ಯನಿರ್ವಹಣಾಧಿಕಾರಿಗಳು ಗಮನಹರಿಸಬೇಕು. ಈ ಬಗ್ಗೆ ಆಗಿಂದಾಗ್ಗೆ ಪ್ರಗತಿ ಪರಿಶೀಲಿಸಬೇಕು. ತಾ.ಪಂ. ಇ.ಒ.ಗಳು ಪ್ರತೀ ತಿಂಗಳು 100 ಮನೆಗಳ ಪೊಟೋಗಳನ್ನು ಅಪ್‌ಲೋಡ್‌ ಮಾಡಿ ಕಳುಹಿಸಬೇಕು. ಇದರಲ್ಲಿ ವಿಫಲವಾದರೆ ಅಂತಹ ಇಒಗಳ ಮೇಲೆ ಜಿ.ಪಂ. ಸಿಇಓ ಅವರು ಶಿಸ್ತುಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಅಂತಹ ಜಿ.ಪಂ. ಸಿಇಒ ವಿರುದ್ಧವೇ ಸರಕಾರಕ್ಕೆ ವರದಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಕೆಲವು ಗ್ರಾಮ ಪಂಚಾಯತ್‌ಗಳಲ್ಲಿ ವಸತಿ ಯೋಜನೆಯ ಪ್ರಗತಿ ತೀವ್ರ ಕಳಪೆಯಾಗಿರುವ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ ಅವರು, ಜಿ.ಪಂ. ಸಿಇಒ ಅವರು ಪ್ರತಿಯೊಂದು ಮನೆಯ ಪ್ರಗತಿ ಮೇಲೆ ನಿಗಾ ಇಡಬೇಕು. ಮನೆ ನಿರ್ಮಾಣದಲ್ಲಿ ನಿರ್ಲಕ್ಷé ವಹಿಸುವ ಗ್ರಾ.ಪಂ. ಪಿಡಿಓಗಳ ವಿರುದ್ಧ ನಿರ್ದಾಕ್ಷಿಣ್ಯವಾಗಿ ಶಿಸ್ತು ಕ್ರಮ ಜರುಗಿಸಲು ಅವರು ತಾಕೀತು ಮಾಡಿದರು.

ಮಂಜೂರಾತಿ ಆದ 90 ದಿನದೊಳಗೆ ಪಂಚಾಂಗ ಹಾಕಿ
ವಸತಿ ಯೋಜನೆಯ ಫಲಾನುಭವಿಗಳಿಗೆ ಮಂಜೂರಾತಿ ಪತ್ರ ದೊರಕಿದ 90 ದಿವಸದೊಳಗೆ ಪಂಚಾಂಗ ಹಾಕಿ ಮನೆ ನಿರ್ಮಾಣ ಕಾಮಗಾರಿ ಪ್ರಾರಂಭಿಸಬೇಕು. ಕಾಮಗಾರಿ ಆರಂಭಿಸದಿದ್ದರೆ ಅಂತಹ ಮನೆಗಳ ಮಂಜೂರಾತಿ ರದ್ದುಗೊಳಿಸಬೇಕು. ನಿಗದಿತ ಅವಧಿಯಲ್ಲಿ ಕಾಮಗಾರಿ ಆರಂಭಿಸದ ಕನಿಷ್ಠ 3 ಮನೆಗಳ ಮಂಜೂರಾತಿ ಪ್ರತೀ ತಿಂಗಳು ರದ್ದುಗೊಳಿಸಬೇಕು ಎಂದರು. 
 
ನಗರಸಭೆ, ಪುರಸಭೆ, ಪಟ್ಟಣ ಪಂಚಾಯತ್‌ ಪ್ರದೇಶದಲ್ಲಿ ಪ್ರತೀ ತಿಂಗಳು 10 ಮನೆಗಳನ್ನು ಪೂರ್ಣಗೊಳಿಸಬೇಕು. ಆಯಾ ಮುಖ್ಯಾಧಿಕಾರಿಗಳು 50 ಮನೆಗಳ ಪೊಟೋಗಳನ್ನು ನಿಗಮದ ವೆಬ್‌ಸೈಟ್‌ಗೆ ಅಪ್‌ಲೋಡ್‌ ಮಾಡಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ತಿಳಿಸಿದರು.

ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಸೇರಿದ ಫಲಾನುಭವಿ ಗಳಿಗೆ ಅಂಬೇಡ್ಕರ್‌ ವಸತಿ ಯೋಜನೆಯಲ್ಲಿ ಬೇಡಿಕೆಗೆ ತಕ್ಕ ಹಾಗೆ ಮಂಜೂರಾತಿ ನೀಡಲು ಅವರು ಸೂಚಿಸಿದರು.

ಜಿ.ಪಂ.ಸಿಇಒ ಡಾ| ಎಂ.ಆರ್‌. ರವಿ ಮಾತನಾಡಿ, ಗ್ರಾಮ ಪಂಚಾಯತ್‌ಗಳಲ್ಲಿ ಮನೆ ನಿರ್ಮಾಣದ ಪ್ರಗತಿಯನ್ನು ಪ್ರತೀ ವಾರ ಪರಿಶೀಲನೆ ನಡೆಸಲಾಗುತ್ತಿದೆ. ಕಳಪೆ ಸಾಧನೆ ಮಾಡಿರುವ ಪಿಡಿಒಗಳ ವಿರುದ್ಧ ಶಿಸ್ತು ಕ್ರಮ ಜರಗಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Uttar Pradesh: ಆಸ್ಪತ್ರೆಯಲ್ಲಿ ಬೆಂಕಿ 10 ನವಜಾತ‌ ಶಿಶುಗಳ ಸಾವು; 40 ಮಕ್ಕಳ ರಕ್ಷಣೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳುDelhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು

Suspended

Criminal case; ಏಕಕಾಲಕ್ಕೆ ಪಾಲಿಕೆ, ಮುಡಾದಲ್ಲಿ ಕೆಲಸ: ನೌಕರ ವಜಾ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqwe

ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

6

Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ

5

Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ

4(1

Mangaluru: ಪಂಪ್‌ವೆಲ್‌-ಪಡೀಲ್‌ ನಡುವಿನ ಚತುಷ್ಪಥ ಕಾಮಗಾರಿ 3 ವರ್ಷ ಕಳೆದರೂ ಅಪೂರ್ಣ

2

Ullal: ತೊಕ್ಕೊಟ್ಟು-ಮುಡಿಪು ರಸ್ತೆಗೆ ತೇಪೆ ಕಾಮಗಾರಿ

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Malai

Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್‌ ಅರ್ಜಿ ತಿರಸ್ಕೃತ

Kota-Meet

Udupi: ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗೆ ಪೂರಕ ವಾತಾವರಣ ಕಲ್ಪಿಸಿ: ಸಂಸದ ಕೋಟ

Suside-Boy

Putturu: ನೇಣು ಬಿಗಿದು ಆತ್ಮಹತ್ಯೆ

Suside-Boy

Brahamavara: ಹಾರಾಡಿ: ಬಾವಿಗೆ ಹಾರಿ ಆತ್ಮಹ*ತ್ಯೆ

Arrest

Madikeri: ಕುಶಾಲನಗರ ಕಳವು ಪ್ರಕರಣ: ಇಬ್ಬರ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.