ವೈದ್ಯಕೀಯ ಸೀಟು ಪ್ರಕಟ


Team Udayavani, Jul 22, 2017, 3:30 AM IST

Medical-18-7.jpg

ಬೆಂಗಳೂರು: ರಾಷ್ಟ್ರೀಯ ಅರ್ಹತೆ ಹಾಗೂ ಪ್ರವೇಶ ಪರೀಕ್ಷೆಯಲ್ಲಿ (ನೀಟ್‌) ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಲಭ್ಯವಿರುವ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಸೀಟಿನ ವಿವರನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಸಂಬಂಧಪಟ್ಟ ಅಭ್ಯರ್ಥಿಗಳು ಜು. 23ರ ತನಕ ಆಪ್ಶನ್‌ ಎಂಟ್ರಿ ಮಾಡಬಹುದು. ಸರಕಾರಿ ಕೋಟಾದ ವೈದ್ಯಕೀಯ ಕೋರ್ಸ್‌ಗೆ 2,687, ದಂತ ವೈದ್ಯಕೀಯ ಕೋರ್ಸ್‌ಗೆ 689 ಸೀಟು ಲಭ್ಯವಿದೆ. ಹೈದರಾಬಾದ್‌ ಕರ್ನಾಟಕ ಕೋಟಾದಡಿ ವೈದ್ಯಕೀಯ ಕೋರ್ಸ್‌ಗೆ 784, ದಂತ ವೈದ್ಯಕೀಯಕ್ಕೆ 179, ಖಾಸಗಿ ಕೋಟಾದಡಿ ವೈದ್ಯಕೀಯ ಕೋರ್ಸ್‌ಗೆ 2,022, ದಂತ ವೈದ್ಯಕೀಯ ಕೋರ್ಸ್‌ಗೆ 1,271, ವಿಶೇಷ ವಿಭಾಗದಲ್ಲಿ ವೈದ್ಯಕೀಯ ಕೋರ್ಸ್‌ಗೆ 159 ಹಾಗೂ ದಂತ ವೈದ್ಯಕೀಯ ಕೋರ್ಸ್‌ಗೆ 45, ಎನ್‌ಆರ್‌ಐ ಕೋಟಾದಡಿ ವೈದ್ಯಕೀಯ ಕೋರ್ಸ್‌ಗೆ 577, ದಂತ ವೈದ್ಯಕೀಯ ಕೋರ್ಸ್‌ಗೆ 325 ಸೀಟು ಲಭ್ಯವಿದೆ.

2017ನೇ ಸಾಲಿನ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕೆ ಮೊದಲ ಸುತ್ತಿನ ಆಯ್ಕೆ ದಾಖಲಿಸಲು ಜು. 23ರ ಸಂಜೆ 5ರ ತನಕ ಅವಕಾಶ ಕಲ್ಪಿಸಿ, ಸೀಟು ಹಂಚಿಕೆಯ ವೇಳಾಪಟ್ಟಿಯನ್ನು ಪರಿಷ್ಕರಿಸಲಾಗಿದೆ. ಲಭ್ಯವಿರುವ ಸೀಟು, ಕಾಲೇಜಿನ ವಿವರ, ಆಯ್ಕೆ ಪ್ರಕ್ರಿಯೆ ಹಾಗೂ ಪರಿಷ್ಕೃತ ವೇಳಾಪಟ್ಟಿಯ ಮಾಹಿತಿ ಪ್ರಾಧಿಕಾರದ ವೆಬ್‌ಸೈಟ್‌ http://kea.kar.nic.inನಲ್ಲಿ ಲಭ್ಯವಿದೆ. ಜು. 24ರ ಅಪರಾಹ್ನ 4ಕ್ಕೆ ಅಣಕು ಸೀಟು ಹಂಚಿಕೆ, ಜು. 25ರ ಸಂಜೆ 5 ಗಂಟೆಯ ತನಕ ಆಪ್ಶನ್‌ ಎಂಟ್ರಿ ಬದಲಾಯಿಸಲು ಅವಕಾಶ ಇರುತ್ತದೆ. ಜು. 26ರ ಅಪರಾಹ್ನ 4ಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆ ನಡೆಯಲಿದೆ. ಆಯ್ಕೆಯನ್ನು ಖಚಿತಪಡಿಸಿಕೊಂಡು, ಶುಲ್ಕ ಪಾವತಿ ಮತ್ತು ಪ್ರವೇಶಪತ್ರ ಡೌನ್‌ಲೋಡ್‌ ಮಾಡಿಕೊಳ್ಳಲು ಆ. 4ರ ತನಕ ಅವಕಾಶವಿದ್ದು, ಆ. 5ರ ಸಂಜೆ 5.30ರೊಳಗೆ ಸಂಬಂಧಪಟ್ಟ ಕಾಲೇಜಿಗೆ ಹಾಜರಾಗಬೇಕು ಎಂದು ಪ್ರಾಧಿಕಾರ ವಿದ್ಯಾರ್ಥಿಗಳಿಗೆ ತಿಳಿಸಿದೆ.

ಶುಲ್ಕ ವಿವರ: ಸರಕಾರಿ ಕಾಲೇಜಿನಲ್ಲಿ 16 ಸಾವಿರ ಶುಲ್ಕ ನಿಗದಿ ಮಾಡಲಾಗಿದೆ. ಬೆಂಗಳೂರು ಮತ್ತು ಕಲಬುರಗಿ ಇಎಸ್‌ಐ ವೈದ್ಯಕೀಯ ಕಾಲೇಜಿನ ಸೀಟುಗಳಿಗೆ 1 ಲಕ್ಷ, ಖಾಸಗಿ ಕಾಲೇಜಿನಲ್ಲಿ ಸರಕಾರಿ ಕೋಟಾದ ಸೀಟಿಗೆ 77 ಸಾವಿರ ಹಾಗೂ ಖಾಸಗಿ ಆಡಳಿತ ಮಂಡಳಿ ಕೋಟಾದ ಸೀಟಿಗೆ 6,32,500 ರೂ. ನಿಗದಿ ಮಾಡಲಾಗಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಟಾಪ್ ನ್ಯೂಸ್

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Central government appeals to Bangladesh to come forward to protect Hindus

Bangladesh: ಹಿಂದೂಗಳ ರಕ್ಷಣೆಗೆ ಮುಂದಾಗಿ: ಬಾಂಗ್ಲಾಕ್ಕೆ ಕೇಂದ್ರ ಸರ್ಕಾರ ಮನವಿ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ

Editorial: ಪುಂಡ ವಿದ್ಯಾರ್ಥಿಗಳಿಗೆ ಶಿಕ್ಷೆ: ಸ್ಪಷ್ಟ ಮಾರ್ಗಸೂಚಿ ಅಗತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

DK-Shivakumar

Congress Politics: ಡಿಸಿಎಂ ಡಿ.ಕೆ.ಶಿವಕುಮಾರ್‌ ದಿಲ್ಲಿಗೆ ಭೇಟಿ: ಹೈಕಮಾಂಡ್‌ ಜತೆ ಚರ್ಚೆ

BY-Vijayendara

By Election Result: ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಬಿ.ವೈ.ವಿಜಯೇಂದ್ರ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

MahaKumbh 2025: ಕುಂಭಮೇಳದಲ್ಲಿ ಬೆಂಕಿ ನಂದಿಸಲು ರೊಬೋಟ್‌!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

ಬೆಳೆ ಕನ್ನಡ: ಕನ್ನಡದ ಕೆಲಸ ಬರೀ ಸರಕಾರದ್ದಲ್ಲ, ನಮ್ಮದು ಕೂಡ!

Gambir-family

Border-Gavaskar Trophy: ತುರ್ತು ವೈಯಕ್ತಿಕ ಕಾರಣ: ಕೋಚ್‌ ಗಂಭೀರ್‌ ಭಾರತಕ್ಕೆ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

BJP: ಬಸನಗೌಡ ಪಾಟೀಲ್‌ ಯತ್ನಾಳ್‌ ಸ್ವಪ್ರತಿಷ್ಠೆ ಸಮರ ನಿಲ್ಲಿಸಲಿ: ಯಡಿಯೂರಪ್ಪ

ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Fraud Case: ಎಪಿಕೆ ಫೈಲ್‌ ಕಳುಹಿಸಿ 1.31 ಲ.ರೂ. ವಂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.