ಅಬ್ಬರ ನಿಲ್ಲಿಸಿದ ಮಳೆ, ಮುಂದುವರಿದ ನೆರೆ

Team Udayavani, Jul 22, 2017, 8:19 AM IST

22-STATE-2.gif

ಬೆಂಗಳೂರು: ರಾಜ್ಯದ ಕರಾವಳಿ ಮತ್ತು ಒಳನಾಡು ಪ್ರದೇಶಗಳಲ್ಲಿ ಶುಕ್ರವಾರ ಮಳೆಯ ಅಬ್ಬರ ತಗ್ಗಿದ್ದು, ಮುಂದಿನ ಮೂರ್‍ನಾಲ್ಕು ದಿನಗಳು ಇದೇ ವಾತಾವರಣ ಮುಂದುವರಿಯಲಿದೆ. ಕಳೆದ ಎರಡು-ಮೂರು ದಿನಗಳಿಂದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಭಾರಿ ಮಳೆ ಆಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಹೆಚ್ಚಳವಾಗಿದ್ದು, ಬೆಳಗಾವಿಯ ಚಿಕ್ಕೋಡಿ ದ್ವೀಪವಾಗಿ
ಮಾರ್ಪಟ್ಟಿತ್ತು. ಆದರೆ, ಕಳೆದ ಮೂರು ದಿನಗಳಿಗೆ ಹೋಲಿಸಿದರೆ, ಶುಕ್ರವಾರ ಮಳೆ ಪ್ರಮಾಣ ಕಡಿಮೆ ಆಗಿದೆ. ಮುಂದಿನ ಮೂರ್‍ ನಾಲ್ಕು ದಿನಗಳು ಮಳೆ ಅಬ್ಬರ ಮತ್ತಷ್ಟು ತಗ್ಗುವ ಸಾಧ್ಯತೆ ಇದೆ. ಒಡಿಶಾದಲ್ಲಿ ಉಂಟಾದ ವಾಯುಭಾರ ಕುಸಿತ ಮತ್ತು ಕರಾವಳಿ ಭಾಗದಲ್ಲಿನ ಕಡಿಮೆ ಒತ್ತಡದ ತಗ್ಗು (ಟ್ರಫ್) ಹಾದು ಹೋಗಿದ್ದರ ಪರಿಣಾಮ ರಾಜ್ಯದಲ್ಲಿ ಮಳೆ ಆಗುತ್ತಿದೆ. ಈಗ ಅದರ ಪ್ರಭಾವ ಕಡಿಮೆಯಾಗಿದೆ. ಹಾಗಾಗಿ, ಮಳೆ ಕೂಡ ತುಸು ಇಳಿಮುಖ ಆಗಿದೆ ಎಂದು ಹವಾಮಾನ ಇಲಾಖೆಯ ಬೆಂಗಳೂರು 
ಪ್ರಾದೇಶಿಕ ಕಚೇರಿ ಅಧಿಕಾರಿಗಳು ತಿಳಿಸಿದ್ದಾರೆ.

ಕೆಆರ್‌ಎಸ್‌ನಿಂದ 3000 ಕ್ಯೂಸೆಕ್‌ ನೀರು ಹೊರಕ್ಕೆ: ಕೊಡಗಿನಲ್ಲಿ ಧಾರಾಕಾರ ಮಳೆಯಾದ ಹಿನ್ನೆಲೆಯಲ್ಲಿ ಕೆಆರ್‌ಎಸ್‌ ಜಲಾಶಯಕ್ಕೆ ಒಳಹರಿವಿನ ಪ್ರಮಾಣ ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ನೀರು ಬಿಡುಗಡೆಯ ಪ್ರಮಾಣವನ್ನು 3 ಸಾವಿರ ಕ್ಯೂಸೆಕ್‌ಗಳಿಗೆ ಏರಿಸಲಾಗಿದೆ.
ಜಲಾಶಯಕ್ಕೆ 20,108 ಕ್ಯೂಸೆಕ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 3 ಸಾವಿರ ಕ್ಯೂಸೆಕ್‌ ನೀರನ್ನು ಹೊರ 
ಬಿಡಲಾಗುತ್ತಿದೆ.

ಬೆಳಗಾವಿ, ಖಾನಾಪುರ ಭಾಗದಲ್ಲಿ ಮಳೆ ಮುಂದುವರಿಕೆ
ಬೆಳಗಾವಿ:
ಖಾನಾಪುರ, ಬೆಳಗಾವಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಶುಕ್ರವಾರವೂ ಮಳೆಯಾದ ಹಿನ್ನೆಲೆಯಲ್ಲಿ ಕೃಷ್ಣಾ, ಘಟ
ಪ್ರಭಾ, ಹಿರಣ್ಯಕೇಶಿ ಹಾಗೂ ಮಲಪ್ರಭಾ ನದಿಗಳಿಗೆ ಅತ್ಯಧಿಕ ಪ್ರಮಾಣದಲ್ಲಿ ನೀರು ಬರಲಾರಂಭಿಸಿದೆ. ಹಿಡಕಲ್‌ ಜಲಾಶಯಕ್ಕೆ
ಒಂದೇ ದಿನ ಐದು ಅಡಿಗಳಷ್ಟು (2,126 ಅಡಿ )ನೀರು ಬಂದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ ಮಲಪ್ರಭಾಕ್ಕೆ ಎರಡು 
ಅಡಿಗಳಷ್ಟು ನೀರು ಬಂದಿದ್ದು, 2,079 ಅಡಿ ಸಾಮರ್ಥ್ಯದ ಜಲಾಶಯದಲ್ಲಿ ಈಗ 2,045 ಅಡಿ ನೀರು ಸಂಗ್ರಹವಾಗಿದೆ.

ಕೃಷ್ಣಾ ನದಿಗೆ 1.34 ಲಕ್ಷ ಕ್ಯೂಸೆಕ್‌ ನೀರು ಹರಿದು ಬರಲಾರಂಭಿಸಿದ್ದು, ಹಿಪ್ಪರಗಿ ಜಲಾಶಯದಿಂದ ಎಲ್ಲ ಗೇಟ್‌ಗಳ ಮೂಲಕ
ಇಷ್ಟೇ ಪ್ರಮಾಣದಲ್ಲಿ ನೀರನ್ನು ಆಲಮಟ್ಟಿಗೆ ಬಿಡಲಾಗುತ್ತಿದೆ. ಕೃಷ್ಣಾ, ದೂಧಗಂಗಾ, ಘಟಪ್ರಭಾ ನದಿಗಳ ದಡದಲ್ಲಿರುವ ಚಿಕ್ಕೋಡಿ,
ರಾಯ ಬಾಗ ಮತ್ತು ಅಥಣಿ, ಗೋಕಾಕ ತಾಲೂ ಕಿನ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ ತೆರಳಲು ಸನ್ನದ್ಧರಾಗಿರಬೇಕು
ಎಂದು ಜಿಲ್ಲಾಡಳಿತ ಸೂಚನೆ ನೀಡಿದೆ. ನದಿ ದಡಗಳ ಮೇಲಿರುವ ಪಂಪ್‌ಸೆಟ್‌ಗಳನ್ನು ಹೊರತೆಗೆಯುವ ಪ್ರಯತ್ನ ಮಾಡಬಾರದು
ಎಂದು ರೈತರಿಗೆ ತಿಳಿಸಲಾಗಿದೆ. ಮಳೆ ಯಿಂದಾಗಿ ಬೆಳಗಾವಿ ಜಿಲ್ಲೆಯಲ್ಲಿ 3 ಮನೆ ಗಳು ಪೂರ್ಣವಾಗಿ ಹಾಗೂ 73 ಮನೆಗಳಿಗೆ
ಭಾಗಶಃ ಹಾನಿಯಾಗಿದೆ.

ನಾಲ್ಕು ಘಟಕ ಸ್ಥಗಿತ
ರಾಯಚೂರು:
ಇಲ್ಲಿನ ಬೃಹತ್‌ ಶಾಖೋ ತ್ಪನ್ನ ವಿದ್ಯುತ್‌ ಕೇಂದ್ರದ 4 ಘಟಕಗಳ ವಿದ್ಯುತ್‌ ಉತ್ಪಾದನೆ ಸ್ಥಗಿತಗೊಳಿಸಲಾಗಿದೆ. ಹಲವೆಡೆ ಉತ್ತಮ ಮಳೆಯಾಗುತ್ತಿದ್ದು, ಶಾಖೋತ್ಪನ್ನ ವಿದ್ಯುತ್‌ ಬೇಡಿಕೆ ಕುಗ್ಗಿದ ಪರಿಣಾಮ ಹಾಗೂ ಘಟಕಗಳಲ್ಲಿ
ಕಾಣಿಸಿಕೊಂಡಿರುವ ತಾಂತ್ರಿಕ ತೊಂದರೆಯಿಂದ 210 ಮೆ.ವ್ಯಾ. ಸಾಮರ್ಥ್ಯದ 3, 4, 5 ಮತ್ತು 6ನೇ ಘಟಕಗಳಿಂದ ಕರೆಂಟ್‌
ಉತ್ಪಾದನೆ ನಿಲ್ಲಿಸಲಾಗಿದೆ. 

ಟಾಪ್ ನ್ಯೂಸ್

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

ಗೀತಾರ್ಥ ಚಿಂತನೆ 106: ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Udupi: ಗೀತಾರ್ಥ ಚಿಂತನೆ-106; ದುಃಖಶಮನಕ್ಕೆ ಆದ್ಯತೆ, ದುಃಖೋತ್ಕರ್ಷಕ್ಕೆ ಅನಾದ್ಯತೆ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Yadagiri: ವಕ್ಫ್ ಹೋರಾಟ ರೈತರ ಪರವಾಗಿದೆ: ಶಾಸಕ ಯತ್ನಾಳ

Sagara-Minister-Dinesh

KFD Vaccine: ಮುಂಬರುವ ನವೆಂಬರ್‌ನಲ್ಲಿ ಮಂಗನ ಕಾಯಿಲೆಗೆ ಲಸಿಕೆ ಸಿದ್ಧ: ದಿನೇಶ್ ಗುಂಡೂರಾವ್

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Constitution: ಕಾಂಗ್ರೆಸ್ಸಿಗರಿಂದ ಸಂವಿಧಾನದ ರಕ್ಷಕರಂತೆ ಕಪಟ ನಾಟಕ: ಬಿ.ವೈ.ವಿಜಯೇಂದ್ರ

Vijayapura: Unnatural assault on 6-year-old boy: Convict sentenced to 20 years in prison

Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Murder-Represent

Bengaluru: ಪ್ರಿಯಕರನಿಂದಲೇ ಪ್ರೇಯಸಿ ಎದೆಗೆ ಇರಿದು ಹ*ತ್ಯೆ!

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

ಯಾರಿಗೂ ಹೆದರೆನು, ವಕ್ಫ್ ಸಮರ ನಿಲ್ಲಿಸೆನು: ಬಸನಗೌಡ ಪಾಟೀಲ್‌ ಯತ್ನಾಳ್‌

NH Highway works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

NH Highway Works: ಬಿ.ಸಿ.ರೋಡು: ಟ್ರಾಫಿಕ್‌ ಜಾಮ್‌

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

Rain: ಪುತ್ತೂರು, ಸುಳ್ಯ; ವಿವಿಧೆಡೆ ಲಘು ಮಳೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

ರಾಜ್ಯಮಟ್ಟದ ಅತ್ಯುತ್ತಮ ಪ್ರಗತಿಪರ ಹೈನುಗಾರ ಪ್ರಶಸ್ತಿಗೆ ಪ್ರಕಾಶ್ಚಂದ್ರ ಶೆಟ್ಟಿ ಆಯ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.