ಟೆಸ್ಟ್‌ಗೆ ಲಂಕಾ ನಾಯಕ ಗೈರು
Team Udayavani, Jul 22, 2017, 10:17 AM IST
ಕೊಲಂಬೊ: ಶ್ರೀಲಂಕಾ ತಂಡದ ನಾಯಕ ದಿನೇಶ್ ಚಂಡಿಮಲ್ ಅನಾರೋಗ್ಯದಿಂದಾಗಿ ಭಾರತದೆದುರಿನ ಮೊದಲ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ. ಇವರ ಬದಲು ಉಪುಲ್ ತರಂಗ ತಂಡವನ್ನು ಮುನ್ನಡೆಸಲಿದ್ದಾರೆ.
ದಿನೇಶ್ ಚಂಡಿಮಲ್ ನ್ಯುಮೋನಿಯಾದಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಲಭ್ಯರಿರುತ್ತಾರೋ ಇಲ್ಲವೋ ಎಂಬುದನ್ನು ಕಾದು ನೋಡಬೇಕು ಎಂಬುದಾಗಿ ಶ್ರೀಲಂಕಾ ಕ್ರಿಕೆಟ್ ಆಯ್ಕೆ ಸಮಿತಿ ಅಧ್ಯಕ್ಷ ಸನತ್ ಜಯಸೂರ್ಯ ಹೇಳಿದ್ದಾರೆ. ಸರಣಿಯ ಮೊದಲ ಟೆಸ್ಟ್ ಬುಧವಾರದಿಂದ ಗಾಲೆಯಲ್ಲಿ ಆರಂಭವಾಗಲಿದೆ.
ಪ್ರವಾಸಿ ಜಿಂಬಾಬ್ವೆ ವಿರುದ್ಧ ತಂಡದ ಹೀನಾಯ ಪ್ರದರ್ಶನದ ಬಳಿಕ ಏಂಜೆಲೊ ಮ್ಯಾಥ್ಯೂಸ್ ನಾಯಕತ್ವಕ್ಕೆ ರಾಜೀನಾಮೆ ನೀಡಿದ್ದರು. ಮ್ಯಾಥ್ಯೂಸ್ ಬದಲು ಚಂಡಿಮಲ್ ಅವರನ್ನು ಟೆಸ್ಟ್ ತಂಡದ ನಾಯಕನನ್ನಾಗಿ, ಉಪುಲ್ ತರಂಗ ಅವರನ್ನು ಏಕದಿನ ತಂಡದ ನಾಯಕನನ್ನಾಗಿ ನೇಮಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
NZ vs SL: ಮಳೆ ಪಂದ್ಯದಲ್ಲಿ ಎಡವಿದ ಲಂಕಾ ; ಏಕದಿನ ಸರಣಿ ಗೆದ್ದ ನ್ಯೂಜಿಲ್ಯಾಂಡ್
Retirement: ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಸ್ಫೋಟಕ ಆಟಗಾರ
Team India; ಆಸ್ಟ್ರೇಲಿಯ ಸೋಲಿಗಿಂತ ತವರಿನ ವೈಟ್‌ವಾಶ್ ಆಘಾತಕಾರಿ: ಯುವಿ
ICC Champions Trophy: ಅಫ್ಘಾನಿಸ್ಥಾನ ವಿರುದ್ಧದ ಪಂದ್ಯಕ್ಕೆ ಇಂಗ್ಲೆಂಡ್ ಬಹಿಷ್ಕಾರ?
MUST WATCH
ಹೊಸ ಸೇರ್ಪಡೆ
Assam Coal Mine Tragedy: ಅಸ್ಸಾಂ ಗಣಿ ದುರಂತ… ಒಬ್ಬನ ಮೃತ ದೇಹ ಪತ್ತೆ
Kasaragod Crime News: ಬೀದಿ ನಾಯಿಗೆ ಹೆದರಿ ಓಡಿದ ಬಾಲಕ ಬಾವಿಗೆ ಬಿದ್ದು ಸಾವು
Alankaru: ಮನೆಯಲ್ಲಿ ಬೆಂಕಿ ದುರಂತ: ಎಲ್ಲ ವಸ್ತುಗಳು ಸುಟ್ಟು ಕರಕಲು
ತಿಮ್ಮಪ್ಪನ ಸನ್ನಿಧಾನದಲ್ಲಿ ನೂಕುನುಗ್ಗಲು ಕಾಲ್ತುಳಿತ… 6 ಸಾ*ವು, ಹಲವರ ಸ್ಥಿತಿ ಗಂಭೀರ
Malpe: ಆಯತಪ್ಪಿ ಸಮುದ್ರಕ್ಕೆ ಬಿದ್ದ ಮೀನುಗಾರ ನಾಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.