ಮಠದ ನಕ್ಷೆ ರದ್ದಿಗೆ ಶ್ಯಾಂಭಟ್‌ ಸೂಚನೆ


Team Udayavani, Jul 22, 2017, 11:23 AM IST

shambhat.jpg

ಬೆಂಗಳೂರು: ರಾಮಚಂದ್ರಾಪುರ ಮಠದ ಗಿರಿನಗರ ಶಾಖೆಯಲ್ಲಿ ನಿರ್ಮಾಣ ಮಾಡುತ್ತಿದ್ದ ಕಟ್ಟಡದ ನಕ್ಷೆ ಮಂಜೂರಾತಿ ರದ್ದುಪಡಿಸಲು ಬಿಬಿಎಂಪಿಗೆ ಪತ್ರ ಬರೆಯಲು ಬಿಡಿಎ ಹಿಂದಿನ ಆಯುಕ್ತ ಶ್ಯಾಂಭಟ್‌ ಅವರ ಮೌಖೀಕ ಸೂಚನೆಯಿತ್ತು ಎಂದು ಬಿಡಿಎ ನಿವೃತ್ತ ಕಾರ್ಯಕಾರಿ ಎಂಜಿನಿಯರ್‌ ರಾಜಗೋಪಾಲ್‌ ಹೈಕೋರ್ಟ್‌ಗೆ ಪ್ರಮಾಣಪತ್ರ ಸಲ್ಲಿಸಿದ್ದಾರೆ.

ನಕ್ಷೆ ರದ್ದುಪಡಿಸಿದ ಬಿಬಿಎಂಪಿ ಕ್ರಮ ಪ್ರಶ್ನಿಸಿ ರಾಮಚಂದ್ರಾಪುರ ಮಠ ಸಲ್ಲಿಸಿದ್ದ ಅರ್ಜಿ ವಿಚಾರಣೆ ವೇಳೆ ಶುಕ್ರವಾರ ನ್ಯಾಯಮೂರ್ತಿ ವಿನೀತ್‌ ಕೊಠಾರಿ ಅವರಿದ್ದ ಏಕಸದಸ್ಯ ಪೀಠದ ಮುಂದೆ ರಾಜಗೋಪಾಲ್‌ ಅವರು ತಮಗೆ ಶ್ಯಾಂಭಟ್‌ ಮೌಖೀಕ ಸೂಚನೆ ನೀಡಿದ ಬಗ್ಗೆ ಪ್ರಮಾಣಪತ್ರ ಸಲ್ಲಿಸಿದರು.

ವಿಚಾರಣೆ ವೇಳೆ ಬಿಬಿಎಂಪಿ ಪರ ವಕೀಲರು ವಾದ ಮಂಡಿಸಿ, ಈಗಾಗಲೇ ಮಠದ ಕಟ್ಟಡದ ನಕ್ಷೆ ಮಂಜೂರಾತಿ ರದ್ದುಪಡಿಸಿದ್ದ ಆದೇಶವನ್ನು ಬಿಬಿಎಂಪಿ ಹಿಂಪಡೆದಿದೆ. ಅಲ್ಲದೆ ಮಠಕ್ಕೆ ನೀಡಿರುವ ಸಿ.ಎ ನಿವೇಶನ ಸಂಬಂಧ ಹೊಸದಾಗಿ ತನಿಖೆ ನಡೆಸುವುದಾಗಿ ತಿಳಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ವಿವಾದಿತ ನಿವೇಶನ ಹಂಚಿಕೆ ಸಂಬಂಧ ಮರು ಪರಿಶೀಲನೆ ತನಿಖೆ ನಡೆಸುವುದಾದರೆ ಅರ್ಜಿದಾರರಿಗೆ ಮೊದಲು ನೋಟಿಸ್‌ ನೀಡಬೇಕು. ಈ  ವಿಚಾರದಲ್ಲಿ ಯಾವುದೇ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳಬಾರದು ಎಂದು  ನಿರ್ದೇಶಿಸಿತು. ಜತೆಗೆ ಈಗಾಗಲೇ ಕಟ್ಟಡ ಮಂಜೂರಾತಿ ರದ್ದು ಆದೇಶ ಹಿಂಪಡೆದಿರುವುದರಿಂದ ಈ ಅರ್ಜಿ ವಿಚಾರಣೆ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಪೀಠ ಅರ್ಜಿ ಇತ್ಯರ್ಥಗೊಳಿಸಿತು.

ದಂಡ ವಾಪಾಸ್‌: ಈ ಮಧ್ಯೆ ಪ್ರಕರಣದಲ್ಲಿ ಕರ್ತವ್ಯಲೋಪ ಎಸಗಿದ ಸಂಬಂಧ ತಲಾ 50 ಸಾವಿರ ರೂ. ದಂಡ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜಗೋಪಾಲ್‌, ಬಿಬಿಎಂಪಿ ದಕ್ಷಿಣ ವಲಯದ ನಗರ ಯೋಜನಾ ಸಹಾಯಕ ನಿರ್ದೇಶಕ ಸಯ್ಯದ್‌ ಮುಬಾಸಿರ್‌ ಅಹ್ಮದ್‌, ಮುಖ್ಯ ಎಂಜಿನಿಯರ್‌ ಎಚ್‌.ಟಿ.ಬೆಟ್ಟೇಗೌಡ, ಜಂಟಿ ನಿರ್ದೇಶಕ ಎ.ಜೆ.ಹೇಮಚಂದ್ರ ಅವರು ನ್ಯಾಯಪೀಠಕ್ಕೆ ಮನವಿ ಸಲ್ಲಿಸಿದರು. ಮನವಿ ಪುರಸ್ಕರಿಸಿದ ನ್ಯಾಯಪೀಠ, ಹೈಕೋರ್ಟ್‌ ರಿಜಿಸ್ಟ್ರಾರ್‌ ಬಳಿ ಠೇವಣಿಯಿಟ್ಟ 50 ಸಾವಿರ ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಿತು.

ಟಾಪ್ ನ್ಯೂಸ್

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

1-trr

CAG Report; ಕೇಂದ್ರ ಸರಕಾರ‌ದ ವಿತ್ತೀಯ ಕೊರತೆ ಶೇ.45ಕ್ಕೆ ಏರಿಕೆ!

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

ದ.ಕ.ದ ವೈಭವಿ, ಉಡುಪಿಯ ಧೀರಜ್‌ ಐತಾಳ್‌ ; ಸಾಹಸ ಮೆರೆದ ಮಕ್ಕಳಿಗೆ ಶೌರ್ಯ ಪ್ರಶಸ್ತಿ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ

D.K. Shivakumar: ಬೆಳಗಾವಿ ಕಾಂಗ್ರೆಸ್‌ ಅಧಿವೇಶನ ಬಗ್ಗೆ ಚರ್ಚೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

16-cm

Bengaluru: ತ್ಯಾಜ್ಯ ವರ್ಗಾವಣೆ ಘಟಕಕ್ಕೆ ಸಿದ್ದರಾಮಯ್ಯ ಚಾಲನೆ

15-ccb

Bengaluru: ಜೀವಾ ಆತ್ಮಹತ್ಯೆ: ಡಿವೈಎಸ್ಪಿಗೆ ಸಿಸಿಬಿ ನೋಟಿಸ್‌ ಸಾಧ್ಯತೆ

14-fruad

Bengaluru: ಸಾಲ ಕೊಡಿಸುವುದಾಗಿ 37 ಲಕ್ಷ ವಂಚನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

1-ewewew

Maharashtra; ವಿಧಾನಸಭೆಗೆ 78 ಶಾಸಕರು ಮೊಟ್ಟ ಮೊದಲ ಬಾರಿಗೆ ಪ್ರವೇಶ

GDP

GDP; ದೇಶದ ಆರ್ಥಿಕಾಭಿವೃದ್ಧಿ 2 ವರ್ಷದಲ್ಲೇ ಕನಿಷ್ಠ: ಶೇ.5.4 ಜಿಡಿಪಿ ದಾಖಲು

supreem

ದೇವಾಲಯಗಳ ಪ್ರಸಾದ ಗುಣಮಟ್ಟ ಪರಿಶೀಲನೆ ಅರ್ಜಿಗೆ ಸುಪ್ರೀಂ ನಕಾರ

Modi Interview

Opposition ;ಜನರ ದಾರಿ ತಪ್ಪಿಸುತ್ತಿರುವ ವಿಪಕ್ಷಗಳು: ಪ್ರಧಾನಿ ಮೋದಿ

1-samsat

Adani, Manipur ಚರ್ಚೆಗೆ ಪಟ್ಟು: ವಾರ ಪೂರ ಸಂಸತ್‌ ಕಲಾಪ ವ್ಯರ್ಥ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.