ಆಗ ಪಡಿತರ ಚೀಟಿ ಕಷ್ಟ, ಈಗ ತ್ಯಾಜ್ಯ ವಿಲೆ ಕಷ್ಟ
Team Udayavani, Jul 23, 2017, 6:25 AM IST
ಉಡುಪಿ: ಅಂದು ಬಡಜನರಿಗೆ ಮನೆ, ಪಡಿತರ ಚೀಟಿ ಮಾಡಿಕೊಡುವುದು ದೊಡ್ಡ ಸಮಸ್ಯೆಯಾಗುತ್ತಿತ್ತು. ಅದು ಈಗ ಸುಲಭವಾಗಿದೆ. ಆದರೆ ಈಗ ತ್ಯಾಜ್ಯ ವಿಲೇವಾರಿ ಮಾಡುವುದು ದೊಡ್ಡ ಸಮಸ್ಯೆಯಾಗಿದೆ. ಹಿಂದಿನ ಕಾಲದಲ್ಲಿ ಕೆಲವೊಂದು ವಸ್ತುಗಳನ್ನು ಮರುಬಳಕೆ ಮಾಡುತ್ತಿದ್ದ ಕಾರಣ ತ್ಯಾಜ್ಯ ಅಷ್ಟು ಉತ್ಪತ್ತಿ ಆಗುತ್ತಿರಲಿಲ್ಲ. ಇಂದು ಯಾವುದೇ ವಸ್ತು ಮರುಬಳಕೆಯಾಗುತ್ತಿಲ್ಲ ಎಂದು ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಹೇಳಿದರು .
ಅವರು ಶನಿವಾರ ಅಜ್ಜರಕಾಡು ಪುರಭವನದಲ್ಲಿ ಡಾ| ಜಿ.ಶಂಕರ್ ಮಹಿಳಾ ಪ್ರಥಮ ದರ್ಜೆ ಕಾಲೇಜು, ದೈಹಿಕ ಶಿಕ್ಚಣ ವಿಭಾಗ, ಉಜ್ವಲ್ ಡೆವಲಪರ್, ಲಯನ್ಸ್ ಕ್ಲಬ್ ಆಶ್ರಯದಲ್ಲಿ ವಿದ್ಯಾರ್ಥಿನಿಯರಿಗೆ ಸ್ವರಕ್ಷಣಾ ಕಲಾ ತರಬೇತಿ ಶಿಬಿರವನ್ನು ಉದ್ಘಾಟಿಸಿದರು.
ಪ್ರಾಂಶುಪಾಲ ಪ್ರೊ| ಜಗದೀಶ್ ರಾವ್ ಅಧ್ಯಕ್ಷತೆ ವಹಿಸಿದರು. ಲಯನ್ಸ್ ಪ್ರಥಮ ಉಪ ಜಿಲ್ಲಾ ಗವರ್ನರ್ ತಲ್ಲೂರು ಶಿವರಾಮ ಶೆಟ್ಟಿ, ಲಯನ್ಸ್ ಕ್ಲಬ್ ಅಧ್ಯಕ್ಷ ಹರೀಶ್ ಎಮ್.ಯು., ಆತ್ಮರಕ್ಷಣಾ ಕಲಾ ತರಬೇತುದಾರ ಕಾರ್ತಿಕ್ ಎಸ್. ಕಟೀಲ್ ಉಪಸ್ಥಿತರಿದ್ದರು.ಉಪನ್ಯಾಸಕ ಡಾ| ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿ, ಪ್ರಕಾಶ್ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿದರು. ರಾಮ ರಾವ್ ವಂದಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Baby Boy: ಎರಡನೇ ಮಗುವಿಗೆ ತಂದೆಯಾದ ಖುಷಿಯಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.