ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ
Team Udayavani, Jul 23, 2017, 6:30 AM IST
ಬ್ರಹ್ಮಾವರ: ಇಲ್ಲಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆ 2017 ಮತ್ತು ಕೃಷಿ ಹೊಂಡಗಳಲ್ಲಿ ಮೀನು ಮರಿ ಸಾಕಾಣಿಕೆ ತರಬೇತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಉದ್ಘಾಟನೆಯನ್ನು ಜಿಲ್ಲಾ ಮೀನುಗಾರಿಕೆ ಇಲಾಖೆ ಉಪನಿರ್ದೇಶಕ ಪಿ. ಪಾರ್ಶ್ವನಾಥ ಅವರು ನೆರವೇರಿಸಿ ಮಾತನಾಡಿ, ಮೀನುಗಾರರ ಕಲ್ಯಾಣ ಅಭಿವೃದ್ಧಿ ಕಾರ್ಯಕ್ರಮಗಳು ಮತ್ತು ಮೀನು ಕೃಷಿಕರಿಗೆ ಬೇಕಾದ ಹಲವು ಕಾರ್ಯಕ್ರಮಗಳನ್ನು ಮೀನುಗಾರಿಕೆ ಇಲಾಖೆ ಹಮ್ಮಿಕೊಂಡಿದೆ. ಇಲಾಖೆಯು ಮೀನುಮರಿಗಳನ್ನು ತಂದು ಅವುಗಳನ್ನು ಒಂದು ಹಂತದವರೆಗೆ ಸಾಕಿ ಅನಂತರ ಕೃಷಿಕರಿಗೆ ವಿತರಿಸುವ ಕಾರ್ಯಕ್ರಮವನ್ನು ಸಹ ಆಯೋಜಿಸುತ್ತಿದೆ. ಗ್ರಾಮ ಪಂಚಾಯತ್ ಮತ್ತು ಸರ್ಕಾರಿ ಕೆರೆಗಳಿಗೆ ಮೀನುಗಳನ್ನು ವಿತ್ತರಿಸುವ ಕಾರ್ಯಕ್ರಮಗಳಿವೆ ಎಂದರು.
ಅಧ್ಯಕ್ಷತೆಯನ್ನು ಕೆ.ವಿ.ಕೆ. ಮುಖ್ಯಸ್ಥ ಡಾ| ಧನಂಜಯ ವಹಿಸಿದ್ದರು.ಅತಿಥಿಗಳಾಗಿ ಬ್ರಹ್ಮಾವರ ಕೃಷಿ ಮಹಾವಿದ್ಯಾಲಯ ಪ್ರಭಾರ ಪ್ರಾಂಶುಪಾಲ ಡಾ. ವಿನೋದ್, ಮೀನುಗಾರಿಕೆ ಸಹಾಯಕ ನಿರ್ದೇಶಕ ಶಿವಕುಮಾರ್ ಜಿ.ಎಮ್., ಕೋಟ ತೋಳಾರ್ ಓಷಿಯನ್ ಪ್ರೈ.ಲಿ. ವ್ಯವಸ್ಥಾಪಕ ಯೋಗೀಶ್ ಉಪಸ್ಥಿತರಿದ್ದರು.
ವಿಷಯ ತಜ್ಞ ಶ್ರೀನಿವಾಸ್ ಎಚ್. ಹುಲಕೋಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಹಿರಿಯ ಕ್ಷೇತ್ರ ಅಧೀಕ್ಷಕ ಡಾ| ಎಂ. ಶಂಕರ್ ಸ್ವಾಗತಿಸಿ, ಸಹಾಯಕ ಪ್ರಾಧ್ಯಾಪಕ ರಾಜಣ್ಣ ವಂದಿಸಿದರು. ಡಾ| ಎನ್.ಇ. ನವೀನ್ ಅವರು ನಿರೂಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Kalaburagi: ಘನತ್ಯಾಜ್ಯ ವಿಲೇವಾರಿ ಮಾಡದ ಪಾಲಿಕೆ ವಿರುದ್ದ ಲೋಕಾಯುಕ್ತ ಸ್ವಯಂ ಪ್ರಕರಣ ದಾಖಲು
Bengaluru: ಭುವನೇಶ್ವರಿ ಪ್ರತಿಮೆಗೆ ಹಾನಿ: ಆಕ್ರೋಶ
Bengaluru: ಕದ್ದ ಮೊಬೈಲ್ ಕೊರಿಯರ್ ಮೂಲಕ ಕೇರಳಕ್ಕೆ ರವಾನೆ!
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
IPL Mega Auction: ಅದೃಷ್ಟ ಪರೀಕ್ಷೆಯಲ್ಲಿ ಕರ್ನಾಟಕದ 24 ಮಂದಿ ಆಟಗಾರರು; ಇಲ್ಲಿದೆ ಪಟ್ಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.