ಸಿಎಂ ಮೆಹಬೂಬಾ ಗರಂ

Team Udayavani, Jul 23, 2017, 9:30 AM IST

garam.jpg

ಶ್ರೀನಗರ: ಕಾಶ್ಮೀರ ವಿವಾದವನ್ನು ಅಮೆರಿಕ, ಚೀನದಂಥ ಮೂರನೆಯ “ಮಿತ್ರ’ನ ನೆರವಿನಿಂದ ಇತ್ಯರ್ಥಪಡಿಸಬೇಕು ಎಂಬ ನ್ಯಾಷನಲ್‌ ಕಾನ್ಫರೆನ್ಸ್‌ ನಾಯಕ ಫಾರೂಕ್‌ ಅಬ್ದುಲ್ಲಾ ಅವರ ಸಲಹೆಗೆ ಜಮ್ಮು-ಕಾಶ್ಮೀರ ಸಿಎಂ ಮೆಹಬೂಬಾ ಮುಫ್ತಿ ಕೆಂಡವಾಗಿದ್ದಾರೆ.

ಶನಿವಾರ ಫಾರೂಕ್‌ ವಿರುದ್ಧ ಹರಿಹಾಯ್ದ ಸಿಎಂ ಮೆಹಬೂಬಾ, “ಅಮೆರಿಕದ ಹಸ್ತಕ್ಷೇಪದಿಂದ ಸಿರಿಯಾ, ಅಫ್ಘಾನಿಸ್ಥಾನ ಮತ್ತು ಇರಾಕ್‌ನ ಪರಿಸ್ಥಿತಿ ಏನಾಗಿದೆಯೆಂದು ನಿಮಗೆ ಗೊತ್ತಿಲ್ಲವೇ? ಅಂಥದ್ದೇ ಪರಿಸ್ಥಿತಿ ಕಾಶ್ಮೀರಕ್ಕೂ ಬರಲಿ ಎಂಬುದು ನಿಮ್ಮ ಬಯಕೆಯೇ’ ಎಂಬ ಖಾರ ಪ್ರಶ್ನೆಯನ್ನು ಹಾಕಿದ್ದಾರೆ. ಅಷ್ಟೇ ಅಲ್ಲ, “ಅಮೆರಿಕವಾಗಲೀ, ಚೀನವಾಗಲೀ, ತಮ್ಮ ಕೆಲಸವೇನಿದೆ ಅಷ್ಟನ್ನು ಮಾಡಿದರೆ ಸಾಕು. ನಮ್ಮ ದೇಶದ ವಿಚಾರದಲ್ಲಿ ಮೂಗು ತೂರಿಸುವುದು ಬೇಡ. ಚೀನ ಟಿಬೆಟ್‌ ಜತೆ ಇರುವ ಜಗಳವನ್ನು ಬಗೆಹರಿಸಿಕೊಳ್ಳಲಿ. ನಮ್ಮ ವಿಷಯಕ್ಕೆ ಅಮೆರಿಕವಾಗಲೀ, ಟರ್ಕಿ ಯಾಗಲೀ, ಇಂಗ್ಲೆಂಡ್‌ ಆಗಲೀ ಬರುವುದು ಬೇಡ. ಕಾಶ್ಮೀರ ವಿವಾದವನ್ನು ಭಾರತ ಮತ್ತು ಪಾಕಿಸ್ಥಾನವು ದ್ವಿಪಕ್ಷೀಯ ಮಾತುಕತೆ ಮೂಲಕವೇ ಬಗೆಹರಿಸಲಿದೆ’ ಎಂದೂ ಹೇಳಿದ್ದಾರೆ.

ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಯೋಧರ ಹಲ್ಲೆ
12ಕ್ಕೂ ಹೆಚ್ಚು ಯೋಧರು ಪೊಲೀಸ್‌ ಠಾಣೆಗೆ ನುಗ್ಗಿ ಸಹಾಯಕ ಸಬ್‌ಇನ್ಸ್‌ ಪೆಕ್ಟರ್‌ ಸೇರಿ 8 ಮಂದಿ ಪೊಲೀಸರ ಮೇಲೆ ಹಲ್ಲೆ ನಡೆಸಿದ ಘಟನೆ ಕಾಶ್ಮೀರದ ಗಂದೇರ್‌ಬಾಲ್‌ನಲ್ಲಿ ನಡೆ ದಿದೆ. ಠಾಣೆಯಲ್ಲಿದ್ದ ದಾಖಲೆಗಳಿಗೂ ಹಾನಿ ಯಾಗಿದ್ದು, ಯೋಧರ ವಿರುದ್ಧ ಪ್ರಕರಣ ದಾಖ ಲಿಸಲಾಗಿದೆ. ಅಮರನಾಥ ಯಾತ್ರಿಕರ ಮೇಲೆ ಉಗ್ರರ ದಾಳಿ ಹಿನ್ನೆಲೆಯಲ್ಲಿ ಕತ್ತಲಾದ ಬಳಿಕ ವಾಹನಗಳ ಸಂಚಾರಕ್ಕೆ ನಿರ್ಬಂಧ ಹೇರ‌ಲಾ ಗಿತ್ತು. ಇದೇ ವೇಳೆ ಯೋಧರಿದ್ದ(ಸಮವಸ್ತ್ರ ಧರಿಸಿರಲಿಲ್ಲ) ಖಾಸಗಿ ವಾಹನವೊಂದು ಅಮರ ನಾಥ ಬೇಸ್‌ ಕ್ಯಾಂಪ್‌ನಿಂದ ಬಂದಿದ್ದು, ಚೆಕ್‌ ಪೋಸ್ಟ್‌ನಲ್ಲಿ ಪೊಲೀಸರು ಅದನ್ನು ತಡೆದರು. ಆದರೂ ಯೋಧರು ವಾಹನ ನಿಲ್ಲಿಸಲಿಲ್ಲ. ಹೀಗಾಗಿ, ಮುಂದಿನ ಚೆಕ್‌ಪೋಸ್ಟ್‌ಗೆ ಮಾಹಿತಿ ರವಾನಿಸಲಾಯಿತು. ಅಲ್ಲಿ ವಾಹನವನ್ನು ತಡೆದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಯೋಧರು, ಠಾಣೆಗೆ ನುಗ್ಗಿ ಪೊಲೀಸರ ಮೇಲೆ ಹಲ್ಲೆ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

Raghvendra-Hitnal

Congress Gurantee: ಗ್ಯಾರಂಟಿಯಿಂದ ಅಭಿವೃದ್ಧಿ ಕುಂಠಿತ: ಕಾಂಗ್ರೆಸ್‌ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

Delhi Assembly Elections: ಬಿಜೆಪಿ ಗೆದ್ದರಷ್ಟೇ ದಿಲ್ಲಿ ನಂ.1 ರಾಜಧಾನಿ: ಪ್ರಧಾನಿ ಮೋದಿ

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

PM ಮೋದಿ ಉದ್ಘಾಟಿಸಿದ್ದೆಲ್ಲ ಆಪ್‌ನ ಜಂಟಿ ಯೋಜನೆಗಳು: ಕೇಜ್ರಿವಾಲ್‌

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Uttar Pradesh: ಮಹಾಕುಂಭದಲ್ಲಿ ಮುಸ್ಲಿಮರ ಮತಾಂತರ: ಯೋಗಿಗೆ ಮೌಲ್ವಿ ಪತ್ರ

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

Bhopal: ಭಕ್ತರು ನೀಡಿದ್ದ ದೇಣಿಗೆ ಜತೆಗೆ ಇಸ್ಕಾನ್‌ ಸಿಬಂದಿ ಪರಾರಿ: ದೂರು

ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

Garlic: ಚೀನದಿಂದ ಕದ್ದು ಸಾಗಿಸುತ್ತಿದ್ದ 300 ಬ್ಯಾಗ್‌ ಬೆಳ್ಳುಳ್ಳಿ ವಶಕ್ಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Hospital

Editorial: ರಾಜ್ಯದ ಸರಕಾರಿ ಆಸ್ಪತ್ರೆಗಳಿಗೆ ಬೇಕಿದೆ ತುರ್ತು ಕಾಯಕಲ್ಪ

1-yash

Mangaluru: ದಿಢೀರ್‌ ಆಗಿ ಕಾಣಿಸಿಕೊಂಡ ನಟ ಯಶ್‌

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

MB-Patil-Minister

Dinner Politics: ಮುಖ್ಯಮಂತ್ರಿ ಊಟಕ್ಕೆ ಹೋದ್ರೆ ತಪ್ಪೇನಿದೆ?: ಸಚಿವ ಎಂ.ಬಿ.ಪಾಟೀಲ್‌

Nagamangala-Police

Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.