ಮಕ್ಕಳ ಹಕ್ಕು ರಕ್ಷಣೆಗೆ ಕಾರ್ಯಪಡೆ ರಚನೆ: ಜಿಲ್ಲಾಧಿಕಾರಿ
Team Udayavani, Jul 24, 2017, 8:15 AM IST
ಉಡುಪಿ: ಜಿಲ್ಲೆಯಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಪ್ರತ್ಯೇಕ ಕಾರ್ಯಪಡೆಯನ್ನು ರಚಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಕ್ಕಳ ಹಕ್ಕುಗಳ ರಕ್ಷಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯಲ್ಲಿ ತಳಮಟ್ಟದಿಂದ ಈ ಕಾರ್ಯಪಡೆಯನ್ನು ರಚಿಸುವ ಉದ್ದೇಶದಿಂದ ಮೊದಲ ಹಂತದಲ್ಲಿ ಎಲ್ಲಾ ಗ್ರಾ.ಪಂ.ಗಳಲ್ಲಿ ಕಾರ್ಯಪಡೆ ರಚಿಸಲಾಗುವುದು. ಇದರಲ್ಲಿ ಶೇ.60 ಮಕ್ಕಳು ಸದಸ್ಯರಾಗಲಿದ್ದು, ಉಳಿದ ಶೇ.40 ರಲ್ಲಿ ಜನಪ್ರತಿನಿಧಿಗಳು, ಮಕ್ಕಳ ಮಿತ್ರರು ಹಾಗೂ ಮಕ್ಕಳ ಹಕ್ಕುಗಳಿಗಾಗಿ ಶ್ರಮಿಸುತ್ತಿರುವ ಸ್ವಯಂಸೇವಾ ಸಂಸ್ಥೆಗಳ ಪ್ರತಿನಿಧಿಗಳು ಇರಲಿದ್ದಾರೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗ್ರಾ.ಪಂ.ನಲ್ಲಿ ಕಾರ್ಯಪಡೆ ರಚಿಸುವ ಕುರಿತು ಎಲ್ಲಾ ಗ್ರಾ.ಪಂ.ಗಳಿಗೆ ಸೂಚನೆ ನೀಡಲಾಗುವುದು. ಕಾರ್ಯಪಡೆಗೆ ಮಕ್ಕಳನ್ನು ನೇಮಿಸುವ ಕುರಿತು ವಿವಿಧ ರೀತಿಯಲ್ಲಿ ಆಯ್ಕೆ ನಡೆಸಲಾಗುವುದು. ಅನಂತರ ತಾ.ಪಂ., ಜಿ. ಪಂ. ಹಂತದಲ್ಲಿ ರಚಿಸಲಾಗುವುದು ಎಂದು ಹೇಳಿದರು.
ಕಾರ್ಯಪಡೆಯ ಕಾರ್ಯ ವಿಧಾನಗಳು, ಮಕ್ಕಳ ಸಹಾಯವಾಣಿ, ತುರ್ತು ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯಗಳ ಕುರಿತು ಚರ್ಚೆ ನಡೆಯಿತು.ಮಕ್ಕಳ ಕಾರ್ಯಪಡೆಗೆ ಲೋಗೋ ಸಿದ್ದಪಡಿಸುವ ಕುರಿತಂತೆ ಶಾಲಾ ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ ಏರ್ಪಡಿಸಲು, ಉತ್ತಮ ಚಿತ್ರವನ್ನು ಆಯ್ಕೆ ಮಾಡಿ ಲೋಗೋ ಆಯ್ಕೆ ಮಾಡಲು ಉಪ ವಿಭಾಗಾಧಿಕಾರಿ ಶಿಲ್ಪಾ$ನಾಗ್ ತಿಳಿಸಿದರು.
ಜಿ.ಪಂ. ಮುಖ್ಯಯೋಜನಾಧಿಕಾರಿ ಶ್ರೀನಿವಾಸ ರಾವ್, ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಬಿ.ಕೆ. ನಾರಾಯಣ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಚಂದ್ರ ಅರಸ್ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸ್ವಯಂಸೇವಾ ಸಂಘಟನೆಗಳ ಪ್ರತಿನಿಧಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್ ಕುಮಾರ್
Udupi: ರೈಲು ಬಡಿದು ವ್ಯಕ್ತಿ ಸಾವು
Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ
Karkala: ಬಾವಿಗೆ ಬಿದ್ದು ವ್ಯಕ್ತಿ ಸಾವು; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ ಪಡೆ
Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.