ಇತರೇ ರಾಜ್ಯಗಳಿಗೆ ಸಿದ್ದು ಸರ್ಕಾರ ಮಾದರಿ
Team Udayavani, Jul 24, 2017, 12:05 PM IST
ಕೆ.ಆರ್.ನಗರ: ಸಿದ್ದರಾಮಯ್ಯರ ಸರ್ಕಾರ ಚುನಾವಣೆಯಲ್ಲಿ ನೀಡಿದ್ದ 165 ಭರವಸೆಗಳಲ್ಲಿ 150ಕ್ಕಿಂತ ಹೆಚ್ಚಿನ ಭರವಸೆಗಳನ್ನು ಈಡೇರಿಸಿದ್ದು ದೇಶದಲ್ಲಿ ಇತರೇ ರಾಜ್ಯಗಳಿಗೆ ಮಾದರಿಯಾಗಿದೆ ಎಂದು ರಾಜ್ಯ ಕಾಂಗ್ರೆಸ್ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದರು.
ಪಟ್ಟಣದ ಸಂಗೊಳ್ಳಿರಾಯಣ್ಣ ಸಮುದಾಯ ಭವನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಸಿದ್ದರಾಮಯ್ಯರ ಸರ್ಕಾರ ಮೋದಿ ಸರ್ಕಾರದ ತರಹ ಅಲ್ಲ. ಮೋದಿ ಸರ್ಕಾರ ಚುನಾವಣಾ ಪ್ರನಾಳಿಕೆಯಲ್ಲಿನ ಶೇ.20 ರಷ್ಟು ಭರವಸೆಗಳನ್ನು ಮಾತ್ರ ಈಡೇರಿಸುವಲ್ಲಿ ಸಫಲವಾಗಿದೆ ಎಂದು ದೂರಿದರು.
ಅಲ್ಲದೆ ನಮ್ಮ ಸರ್ಕಾರ ಕಳೆದ ನಾಲ್ಕು ವರ್ಷಗಳ ಆಡಳಿತ ಯಾವುದೇ ಒಳ ಜಗಳಗಳಿಲ್ಲದ ಆರೋಪ ರಹಿತ, ಹಗರಣ ರಹಿತ ಹಾಗೂ ಭಿನ್ನಮತ ರಹಿತ ಸರ್ಕಾರವಾಗಿದೆ. ಯಡಿಯೂರಪ್ಪ ಹಲವು ರೀತಿಯಲ್ಲಿ ಸರ್ಕಾರಕ್ಕೆ ಕೆಟ್ಟ ಹೆಸರು ತರಬೇಕೆಂದು ಆರೋಪಗಳ ಮೂಲಕ ಪ್ರಯತ್ನಿಸಿದರೂ ಅವು ಯಾವುವೂ ಸಫಲವಾಗಲಿಲ್ಲ ಎಂದರು.
ಜೆಡಿಎಸ್ ಪಕ್ಷಕ್ಕೆ ಯಾವುದೇ ತತ್ವ, ಸಿದ್ಧಾಂತಗಳಿಲ್ಲ. ಮುಂದಿನ ಚುನಾವಣೆಯಲ್ಲಿ ಹೇಗಾದರೂ ಮಾಡಿ ಅತಂತ್ರ ಫಲಿತಾಂಶ ತಂದು ಹಣ ಮಾಡಬೇಕೆಂಬುದೆ ಅವರ ಗುರಿ ಎಂದು ಛೇಡಿಸಿದರು. ಪ್ರಜ್ವಲ್ ಹೇಳಿಕೆಯಿಂದಲೇ ತಿಳಿದಿದೆ ದೇವೇಗೌಡರ ಕುಟುಂಬದಲ್ಲೇ ಸಾಕಷ್ಟು ಒಡಕು ಇದೆ ಅಂತ.
ಇನ್ನು ಕುಮಾರಸ್ವಾಮಿ ರಾಜ್ಯ ಪ್ರವಾಸ, ಪಾದಯಾತ್ರೆ ಅಂತ ಹೇಳ್ತಾ ಕಾಲ ಕಳೆಯುತ್ತಿದ್ದಾರೆ. ಆದರೆ ನಮ್ಮಲ್ಲಿ ಚುನಾವಣೆ ಎದುರಿಸಲು ಭತ್ತಳಿಕೆಯಲ್ಲಿ ಸಾಕಷ್ಟು ಅಸ್ತ್ರಗಳಿವೆ. ಸಿದ್ದರಾಮಯ್ಯರ ಜಾತ್ಯತೀತ ಜನಪರ ಅಭಿವೃದ್ಧಿ ಕಾರ್ಯಗಳ ಮೂಲಕ ಮುಂಬರುವ ಚುನಾವಣೆಯಲ್ಲೂ ರಾಜ್ಯದ ಜನತೆ ನಮ್ಮ ಕೈಹಿಡಿಯಲಿದ್ದಾರೆ ಎಂದು ಭರವಸೆ ವ್ಯಕ್ತಪಡಿಸಿದರು.
ಇವತ್ತು ಕೆ.ಆರ್.ನಗರದಲ್ಲಿ ಕಾಂಗ್ರೆಸ್ ಗೊಂದಲರಹಿತವಾಗಿದೆ. ಈ ಹಿಂದೆ ಇದ್ದ ಎರಡು ಕಚೇರಿ, ಎರಡು ಗುಂಪುಗಳು ಇಲ್ಲವಾಗಿದೆ. ಎಚ್.ವಿಶ್ವನಾಥ್ ಕಾಂಗ್ರೆಸ್ ಪಕ್ಷದಿಂದ ಎಲ್ಲಾ ಅಧಿಕಾರಗಳನ್ನು ಪಡೆದು ಇದೀಗ ಸ್ವಾರ್ಥ ರಾಜಕಾರಣಕ್ಕೋಸ್ಕರ ಪಕ್ಷ ತೊರೆದು ತಾಯಿಗೆ ದ್ರೋಹ ಬಗೆದಿದ್ದಾರೆ ಎಂದು ಟೀಕಿಸಿದ ಅವರು ಕಾಂಗ್ರೆಸ್ ಪಕ್ಷದಿಂದ ಅಥವಾ ಸಿದ್ದರಾಮಯ್ಯರಿಂದ ಯಾವುದೇ ದ್ರೋಹ ಅವರಿಗೆ ಆಗಿರಲಿಲ್ಲ ಎಂದರು.
ವಿಧಾನ ಪರಿಷತ್ ಸದಸ್ಯ ಆರ್.ಧರ್ಮಸೇನಾ ಮಾತನಾಡಿ, ಇವತ್ತಿನ ಸಭೆ ಕಾಂಗ್ರೆಸ್ ಪಕ್ಷ ಒಬ್ಬ ವ್ಯಕ್ತಿಯ ಹಿಂದಿಲ್ಲ. ಕಾರ್ಯಕರ್ತರು ಪಕ್ಷದ ಹಿಂದಿದ್ದಾರೆ ಎಂದು ಸಾಬೀತುಪಡಿಸಿದೆ. ಮುಂದಿನ ಚುನಾವಣೆಯಲ್ಲಿ ಸಾ.ರಾ.ಮಹೇಶ್‌ಗೆ ಡಿ.ರವಿಶಂಕರ್ ಸರಿಯಾದ ಕುಸ್ತಿ ಪಟು, ಎದುರಾಳಿ ಸಾಮಾನ್ಯರಲ್ಲವಾದ್ದರಿಂದ ಸರಿಯಾಗಿ ಪಟ್ಟುಗಳನ್ನು ಕರಗತ ಮಾಡಿಕೊಳ್ಳುವ ಅಗತ್ಯವಿದೆ ಎಂದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಬಿ.ಜೆ.ವಿಜಯಕುಮಾರ್ ಮಾತನಾಡಿ, ಕೆ.ಆರ್.ನಗರದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಉತ್ಸಾಹ ನೋಡಿದರೆ. ಈ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಹೊಸ ಶಕೆ ಪ್ರಾರಂಭವಾದಂತಿದೆ. ಸಿದ್ದರಾಮಯ್ಯರ ಸರ್ಕಾರ 8635 ಕೋಟಿ ರೈತರ ಸಾಲ ಮನ್ನಾ ಮಾಡಿದೆ.
ಆದರೆ ಕೇಂದ್ರ ಸರ್ಕಾರ ರೈತರ ಸಾಲ ಮನ್ನಾ ಮಾಡುವಲ್ಲಿ ಹಿಂದೇಟು ಹೊಡೆದಿದೆ. ಅಲ್ಲದೆ ಈ ಸರ್ಕಾರ ಎಲ್ಲಾ ಜಾತಿ ಜನಾಂಗದವರಿಗೆ ಸಾಮಾಜಿಕ ನ್ಯಾಯ ಒದಗಿಸುತ್ತಾ ಬಂದಿದೆ. ಮುಂದಿನ ಅವಧಿಗೂ ಕಾಂಗ್ರೆಸ್ ಅಧಿಕಾರಕ್ಕೆ ತರಲು ಶ್ರಮಿಸುವಂತೆ ಕಾರ್ಯಕರ್ತರಿಗೆ ಮನವಿ ಮಾಡಿದರು.
ಕಾಂಗ್ರೆಸ್ ಮುಖಂಡ ದೊಡ್ಡಸ್ವಾಮೇಗೌಡ, ಜಿಪಂ ಸದಸ್ಯರಾದ ಡಿ.ರವಿಶಂಕರ್ ಮತ್ತು ಅಚ್ಯುತಾನಂದ, ದಿ.ಮಂಚನಹಳ್ಳಿಮಹದೇವರ ಪತ್ನಿ ಅನುರಾಧ, ಪುತ್ರಿ ಐಶ್ವರ್ಯ, ತಾಪಂ ಅಧ್ಯಕ್ಷ ಹೆಚ್.ಟಿ.ಮಂಜುನಾಥ್. ಕೆ.ನಟರಾಜ್, ವಕ್ತಾರ ಜಾಬೀರ್, ವಿಧಾನ ಪರಿಷತ್ ಮಾಜಿ ಸದಸ್ಯ ಕೆ.ಸಿ.ಪುಟ್ಟಸಿದ್ದಶೆಟ್ಟಿ, ಕಾಂಗ್ರೆಸ್ ಮುಖಂಡರಾದ ಎಂ. ವೆಂಕಟರಾಮು, ಮಾರ್ಚಳ್ಳಿ ಶಿವರಾಮು, ನರಸಿಂಹರಾಜು, ಶ್ರೀನಿವಾಸ್, ಯೋಜನಾಪ್ರಾಧಿಕಾರದ ಅಧ್ಯಕ್ಷ ಕುಮಾರ್, ಮಾಜಿ ಅಧ್ಯಕ್ಷ ಜಿ.ಕೆ.ರಾಜು, ಕೋಳಿ ಪ್ರಕಾಶ್, ಹೇಮಂತ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಹದೇವ್ ಉದಯಶಂಕರ್ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.