ಕಾಶ್ಮೀರಿ ಪಂಡಿತರ ಹತ್ಯೆ: ಸುಪ್ರೀಂನಿಂದ ಅರ್ಜಿ ವಜಾ
Team Udayavani, Jul 25, 2017, 7:50 AM IST
ಹೊಸದಿಲ್ಲಿ: ಕಣಿವೆ ರಾಜ್ಯ ಜಮ್ಮು-ಕಾಶ್ಮೀರದಲ್ಲಿ 1989- 90ರ ಅವಧಿಯಲ್ಲಿ ನಡೆದ 700 ಕಾಶ್ಮೀರಿ ಪಂಡಿತರ ಹತ್ಯೆಗೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆ ನಡೆಸಬೇಕು ಹಾಗೂ ಹತ್ಯೆ ಆರೋಪ ಎದುರಿಸುತ್ತಿರುವ ಪ್ರತ್ಯೇಕತಾವಾದಿ ಮುಖಂಡ ಯಾಸಿನ್ ಮಲಿಕ್ ಸೇರಿದಂತೆ ಹಲವರನ್ನು ವಿಚಾರಣೆಗೆ ಒಳಪಡಿಸಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾ ಮಾಡಿದೆ.
ಅರ್ಜಿ ವಿಚಾರಣೆ ನಡೆಸಿದ ಸಿಜೆಐ ಜೆ.ಎಸ್. ಖೆಹರ್ ಹಾಗೂ ನ್ಯಾ. ಡಿ.ವೈ.ಚಂದ್ರಚೂಡ್ ಅವರಿದ್ದ ನ್ಯಾಯಪೀಠ, ಪ್ರಕರಣ ನಡೆದು ಈಗಾಗಲೇ 27 ವರ್ಷಗಳು ಕಳೆದಿವೆ. ಈಗ ಹತ್ಯೆ, ಅಗ್ನಿಸ್ಪರ್ಶ, ಲೂಟಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ಎಲ್ಲಿಂದ ತರುತ್ತೀರಾ ಎಂದು ಪ್ರಶ್ನಿಸಿತು. ಅಲ್ಲದೆ, ‘ಕಳೆದ 27 ವರ್ಷಗಳಿಂದ ನೀವೇಕೆ ಕೋರ್ಟ್‌ಗೆ ಬರಲಿಲ್ಲ? ಇಷ್ಟು ವರ್ಷಗಳ ನಂತರ ನೀವು ಸಾಕ್ಷ್ಯಗಳನ್ನು ಹೇಗೆ ಸಂಗ್ರಹಿಸುತ್ತೀರಿ ಎಂಬುದನ್ನು ತಿಳಿಸಿ,’ ಎಂದು ನ್ಯಾಯಮೂರ್ತಿಗಳು ಅರ್ಜಿದಾರರನ್ನು ಪ್ರಶ್ನಿಸಿದರು. ಪಂಡಿತರ ಹತ್ಯೆ ಸಂಬಂಧ 215 ಎಫ್ಐಆರ್ ದಾಖಲಾಗಿದ್ದರೂ ಈವರೆಗೆ ನ್ಯಾಯ ದೊರೆತಿಲ್ಲ ಎಂಬುದು ಅರ್ಜಿದಾರ ಎನ್‌ಜಿಒ ವಾದವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chennai: ಲಾಟರಿ ಕಿಂಗ್ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ
Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು
Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್ ಠಾಕ್ರೆ
Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ
Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್ ಪವಾರ್ ಟೀಕೆ
MUST WATCH
ಹೊಸ ಸೇರ್ಪಡೆ

Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.