ಸಂಸತ್ತಿನಲ್ಲಿ ಬೊಫೋರ್ಸ್
Team Udayavani, Jul 25, 2017, 7:25 AM IST
ಹೊಸದಿಲ್ಲಿ: 1986ರ ಬೊಫೋರ್ಸ್ ಫಿರಂಗಿ ಹಗರಣ ಮತ್ತೆ ಸುದ್ದಿಯಾಗಿರುವಂತೆಯೇ, ಕಾಂಗ್ರೆಸನ್ನು ಇಕ್ಕಟ್ಟಿನಲ್ಲಿ ಸಿಲುಕಿಸಲು ಲೋಕಸಭೆಯಲ್ಲಿ ಬಿಜೆಪಿ ಈ ವಿಚಾರವನ್ನು ಪ್ರಸ್ತಾವಿಸಿದೆ. ಪ್ರಕರಣದ ಬಗ್ಗೆ ಸರಿಯಾಗಿ ತನಿಖೆಯಾಗಬೇಕು, ಪೂರ್ಣ ಸತ್ಯ ಹೊರಬರಬೇಕು ಎಂದು ಅದು ಆಗ್ರಹಿಸಿದೆ. ಲೋಕಸಭೆಯಲ್ಲಿ ಈ ವಿಚಾರವನ್ನು ಬಿಜೆಪಿ ಸದಸ್ಯರಾದ ಮೀನಾಕ್ಷಿ ಲೇಖೀ ಮತ್ತು ನಿಶಿಕಾಂತ್ ದುಬೆ ಪ್ರಸ್ತಾವಿಸಿ, ಹಗರಣ ಕುರಿತಂತೆ ಸ್ವೀಡನ್ನ ಹಿರಿಯ ಅಧಿಕಾರಿ ಸ್ಟೆನ್ ಲಿಂಡ್ಸ್ಟಾರ್ಮ್ ಅವರ ಹೇಳಿಕೆಯನ್ನು ಉದಾಹರಿಸಿದರು. ‘ಹಗರಣದಲ್ಲಿ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಭಾಗಿಯಾಗಿದ್ದು, ಈ ಕುರಿತ ಭಾರೀ ದಾಖಲೆಗಳನ್ನು ಭಾರತಕ್ಕೆ ಹಸ್ತಾಂತರಿಸಲಾಗಿದೆ ಎಂದು ಲಿಂಡ್ಸ್ಟಾರ್ಮ್ ಹೇಳಿದ್ದಾರೆ. ಅಲ್ಲದೆ ಇದು ಹಿಂದೆ ಅಂದುಕೊಂಡಿದ್ದಕ್ಕಿಂತಲೂ ದೊಡ್ಡ ಮೊತ್ತದ ಲಂಚ ಪಡೆದಿರುವ ಪ್ರಕರಣವಾಗಿರುವ ಸಾಧ್ಯತೆ ಇದೆ’ ಎಂದು ಹೇಳಿದರು. ಇದಕ್ಕೆ ದನಿಗೂಡಿಸಿದ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಅನಂತ್ ಕುಮಾರ್, ಸಾರ್ವಜನಿಕ ಜೀವನದಲ್ಲಿ ಸಂಭಾವಿತರಾಗಿ ನಿಲ್ಲಬೇಕಾದರೆ ಕಾಂಗ್ರೆಸ್ ಮರು ತನಿಖೆಯನ್ನು ಒಪ್ಪಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್
J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು
Maharashtra Election: ಅಮಿತ್ ಶಾ ಅವರ ಬ್ಯಾಗ್ ಪರೀಕ್ಷಿಸಿದ ಚುನಾವಣಾ ಅಧಿಕಾರಿಗಳು
Anmol Buffalo:1500 ಕೆಜಿ ತೂಗುವ ಈ ಕೋಣದ ಬೆಲೆ ಬರೋಬ್ಬರಿ 23 ಕೋಟಿ ರೂ!
Digital Arrest ಹೆಸರಿನಲ್ಲಿ ನಿವೃತ್ತ ಇಂಜಿನಿಯರ್ ಗೆ 10 ಕೋಟಿ ರೂಪಾಯಿ ಪಂಗನಾಮ!
MUST WATCH
ಹೊಸ ಸೇರ್ಪಡೆ
PoK ಪ್ರದೇಶದಲ್ಲಿ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳು: ಬಿಸಿಸಿಐ ನಿಂದ ತೀವ್ರ ಖಂಡನೆ
Congress: ಸರ್ಕಾರದಲ್ಲಿ ಒಬ್ಬರು ಏತಿ ಅಂದರೆ ಮತ್ತೊಬ್ಬರು ಪ್ರೇತಿ ಅಂತಾರೆ: ಆರ್.ಅಶೋಕ್
50 cr for 50 Cong MLAs ; ಎಸ್ ಐಟಿ ತನಿಖೆಗೆ ಎಚ್.ಡಿ.ಕುಮಾರಸ್ವಾಮಿ ಒತ್ತಾಯ
‘Kanguva’; ಮೊದಲ ದಿನವೇ 58.62 ಕೋಟಿ ರೂ. ಬಾಚಿದ ಕಂಗುವ
Udupi: ಮೀನುಗಾರಿಕೆ ಕಾರ್ಮಿಕ ಸಾವು; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.